India Covid Updates: ಭಾರತದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳ: 5,233 ಮಂದಿಗೆ ಸೋಂಕು, 7 ಮಂದಿ ಸಾವು

| Updated By: ನಯನಾ ರಾಜೀವ್

Updated on: Jun 08, 2022 | 9:54 AM

India Corona Cases:ದೇಶದಲ್ಲಿ ದಿನಕಳೆದಂತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಅನೇಕ ರಾಜ್ಯಗಳು ಈಗಾಗಲೇ ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ.

India Covid Updates: ಭಾರತದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳ: 5,233 ಮಂದಿಗೆ ಸೋಂಕು, 7 ಮಂದಿ ಸಾವು
Corona Cases In India
Follow us on

ನವದೆಹಲಿ: ದೇಶದಲ್ಲಿ ದಿನಕಳೆದಂತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಅನೇಕ ರಾಜ್ಯಗಳು ಈಗಾಗಲೇ ಕೆಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,233 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಒಟ್ಟು ಪ್ರಕರಣಗಳ ಸಂಖ್ಯೆ 4,31,90,282ಕ್ಕೆ ಏರಿಕೆಯಾಗಿದೆ.

ಕೋವಿಡ್​ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,715ಕ್ಕೆ ಹೆಚ್ಚಳವಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 28,857 ಇದೆ. ಕಳೆದ 24 ಗಂಟೆಗಳಲ್ಲಿ 3345 ಮಂದಿ ಗುಣಮುಖರಾಗಿರುವುದರಿಂದಿಗೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,26,36,710ಕ್ಕೆ ಏರಿಕೆಯಾಗಿದೆ.

 

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,07,716 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರೊಂದಿಗೆ ಈವರೆಗೂ 85,32,09,262 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿಯನ್ನು ನೀಡಿದೆ.
ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್​ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್​ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.

ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್​ ಡೋಸ್ ಕೂಡ ನೀಡಲಾಗುತ್ತಿದೆ.

 

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ