ದೇಶದಲ್ಲಿ ಕೊರೊನಾ ನಾಲ್ಕನೇ ಅಲೆಯ ಭಯ ಶುರುವಾಗಿದೆ, ಕಳೆದೊಂದು ವಾರದಿಂದ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ ಅಂದರೆ ಜೂನ್ 8ರ ಬೆಳಗ್ಗೆ 8 ಗಂಟೆಯಿಂದ ಜೂನ್ 9ರ ಬೆಳಗ್ಗೆ 8ಗಂಟೆಯವರೆಗೆ ಬರೋಬ್ಬರಿ 7240 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 32,498ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಬಹುತೇಕ ಮಂದಿ ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದಿದ್ದಾರೆ. ಇನ್ನೂ ಕೆಲವು ಮಂದಿ ಬೂಸ್ಟರ್ ಡೋಸ್ಗಳನ್ನು ಪಡೆದಿದ್ದಾರೆ. ಆದರೂ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
42640301ರಷ್ಟು ಮಂದಿ ಡಿಸ್ಚಾರ್ಜ್ ಆಗಿದ್ದಾರೆ, ಇದುವರೆಗೆ 524723 ಮಂದಿ ಮೃತಪಟ್ಟಿದ್ದಾರೆ. ಕೊರೊನಾ ಲಸಿಕೆಯ ಪರಿಣಾಮ ಸಾವಿನ ಪ್ರಮಾಣ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ 15,43,748 ಮಂದಿ ಕೊರೊನಾ ಲಸಿಕೆ ನೀಡಲಾಗಿದ್ದು, ಇದುವರೆಗೆ 1,94,59,81,691 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.
ಜೀವದ ಹಂಗು ತೊರೆದು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು.
ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್ ಡೋಸ್ ಕೂಡ ನೀಡಲಾಗುತ್ತಿದೆ.
ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ