Coronavirus in India: ಇಂದು ದೇಶದಲ್ಲಿ 28 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ಪತ್ತೆ; ಈ ಪಂಚರಾಜ್ಯಗಳಲ್ಲೇ ಸೋಂಕು ಹೆಚ್ಚು
ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಬೆನ್ನಲ್ಲೇ ಮತ್ತೆ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಾಗಿದೆ. ಮಹಾರಾಷ್ಟ್ರದ ನಾಗ್ಪುರ ಸೇರಿ ಹಲವು ನಗರಗಳಲ್ಲಿ ಲಾಕ್ಡೌನ್ ಆಗಿದೆ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಪ್ರಯಾಣಿಸುವವರಿಗೆ ಕೊರೊನಾ ಟೆಸ್ಟ್ ಕಡ್ಡಾಯ ಮಾಡಲಾಗುತ್ತಿದೆ.
ದೇಶದಲ್ಲಿ ಕೊರೊನಾ ಸೋಂಕಿ (Corona virus)ನ ಪ್ರಸರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲೂ ಕಳೆದ ಒಂದು ವಾರದಿಂದ ದಿನವೊಂದರಲ್ಲಿ ದಾಖಲೆಯಾಗುತ್ತಿರುವ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. ಕಳೆದ 24ಗಂಟೆಯಲ್ಲಿ 28,903 ಕೊವಿಡ್-19 ಕೇಸ್ಗಳು ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 11,438,734ಕ್ಕೆ ಏರಿಕೆಯಾಗಿದೆ. ಈ ವರ್ಷದಲ್ಲೇ ಒಂದು ದಿನದಲ್ಲಿ ಪತ್ತೆಯಾದ ಅತಿ ಹೆಚ್ಚು ಪ್ರಕರಣ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಇನ್ನು ಒಂದೇ ದಿನದಲ್ಲಿ 188 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಸಾವಿನ ಸಂಖ್ಯೆ 159,044ಕ್ಕೆ ತಲುಪಿದೆ. ಮಂಗಳವಾರ 131 ಮಂದಿ ಕೊರೊನಾದಿಂದ ಮೃತಪಟ್ಟಿದ್ದರು. ಹೀಗೆ ದಿನೇದಿನೆ ಕೊರೊನಾ ಹೆಚ್ಚುತ್ತಿರುವ ಪರಿಣಾಮ ದೇಶದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 234,406ಕ್ಕೆ ಏರಿಕೆಯಾಗಿದೆ.
5 ರಾಜ್ಯಗಳದ್ದೇ ಹೆಚ್ಚುಪಾಲು ಹೀಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಹೆಚ್ಚಾಗುತ್ತಿರುವಲ್ಲಿ 5 ರಾಜ್ಯಗಳ ಪಾಲು ಹೆಚ್ಚಿದೆ. ಒಂದು ದಿನದಲ್ಲಿ ದಾಖಲಾಗುತ್ತಿರುವ ಸೋಂಕಿನ ಕೇಸ್ಗಳಲ್ಲಿ ಶೇ.80ರಷ್ಟು ಮಹಾರಾಷ್ಟ್ರ, ಪಂಜಾಬ್, ಕರ್ನಾಟಕ, ಗುಜರಾತ್ ಮತ್ತು ತಮಿಳುನಾಡಿನಿಂದಲೇ ವರದಿಯಾಗುತ್ತಿವೆ ಎಂದು ತಜ್ಞರು ಹೇಳಿದ್ದಾರೆ. ಅದರಲ್ಲೂ ದೇಶದ ಸಕ್ರಿಯ ಪ್ರಕರಣಗಳಲ್ಲಿ ಮಹಾರಾಷ್ಟ್ರ, ಕೇರಳ ಮತ್ತು ಪಂಜಾಬ್ ರಾಜ್ಯಗಳ ಪಾಲು ಶೇ.76.57ರಷ್ಟಿದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಒಂದೆಡೆ ಕೊರೊನಾ ಲಸಿಕೆ ವಿತರಣೆ ನಡೆಯುತ್ತಿದೆ. ಇದುವರೆಗೂ ಸೋಂಕಿನಿಂದ ಚೇತರಿಕೆ ಕಂಡವರ ಸಂಖ್ಯೆ 11,045,284ಕ್ಕೆ ತಲುಪಿದೆ. ಮಂಗಳವಾರದವರೆಗೆ ಒಟ್ಟು 3.50 ಕೋಟಿ ಡೋಸ್ ಲಸಿಕೆ ವಿತರಣೆ ಆಗಿದೆ ಎಂದೂ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಪ್ರಧಾನಿ ಸಭೆ ಇನ್ನು ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಬೆನ್ನಲ್ಲೇ ಮತ್ತೆ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಾಗಿದೆ. ಮಹಾರಾಷ್ಟ್ರದ ನಾಗ್ಪುರ ಸೇರಿ ಹಲವು ನಗರಗಳಲ್ಲಿ ಲಾಕ್ಡೌನ್ ಆಗಿದೆ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಪ್ರಯಾಣಿಸುವವರಿಗೆ ಕೊರೊನಾ ಟೆಸ್ಟ್ ಕಡ್ಡಾಯ ಮಾಡಲಾಗುತ್ತಿದೆ. ನಮ್ಮ ರಾಜ್ಯದಲ್ಲೂ ಸಹ ಸಭೆ-ಸಮಾರಂಭಗಳಿಗೆ ಜನಸಂಖ್ಯೆಯನ್ನು ನಿಗದಿಪಡಿಸಿ ಸುತ್ತೋಲೆ ಹೊರಡಿಸಲಾಗಿದೆ. ಅದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವರ್ಚ್ಯುವಲ್ ಮೀಟಿಂಗ್ ನಡೆಸಲಿದ್ದಾರೆ. ಈ ಸಭೆಯಲ್ಲಿ ಕೊರೊನಾ ಸೋಂಕು ಏರುತ್ತಿರುವ ಬಗ್ಗೆ ಪರಾಮರ್ಶೆ ನಡೆಯಲಿದೆ.
ಇದನ್ನೂ ಓದಿ: ಲಾಕ್ಡೌನ್ ಸಾಧ್ಯತೆ ಕಡಿಮೆ, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಬಹುತೇಕ ಖಚಿತ: ಕೊರೊನಾ ನಿಯಂತ್ರಣ ಬಗ್ಗೆ ಇಂದು ಮೋದಿ ಸಭೆ
ಮಹಾರಾಷ್ಟ್ರಕ್ಕೆ ಕನ್ಯೆ ನೋಡಲು ಹೋದವರಿಗೆ ಕೊರೊನಾ ಪಾಸಿಟಿವ್: ಬಾಗಲಕೋಟೆ ಮೂಲದ ಇಬ್ಬರಿಗೆ ಸೋಂಕು
ಬೆಂಗಳೂರಿನಲ್ಲಿ ಮತ್ತೆ ಕೊರೊನಾ ಆತಂಕ.. ಹೀಗೆಯೇ ಮುಂದುವರಿದ್ರೆ ಮುಂದೆ ಐತೆ ಮಾರಿಹಬ್ಬ, ತಜ್ಞರು ಹೇಳಿದ್ದೇನು?