Covid-19 India Update | 4 ತಿಂಗಳ ನಂತರ ಕನಿಷ್ಠ ಮಟ್ಟಕ್ಕಿಳಿದ ಕೊವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ

ಕಳೆದ 138 ದಿನಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 4 ಲಕ್ಷದ ಆಸುಪಾಸಿಗೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Covid-19 India Update | 4 ತಿಂಗಳ ನಂತರ ಕನಿಷ್ಠ ಮಟ್ಟಕ್ಕಿಳಿದ ಕೊವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ
ಸಾಂದರ್ಭಿಕ ಚಿತ್ರ
Follow us
Skanda
|

Updated on:Dec 06, 2020 | 12:50 PM

ದೆಹಲಿ: ಭಾರತದಲ್ಲಿ ನಿನ್ನೆ ಹೊಸದಾಗಿ 36,011 ಪ್ರಕರಣಗಳು ಪತ್ತೆಯಾಗಿದ್ದು ಆರಂಭದಿಂದ ಇಲ್ಲಿಯ ತನಕದ ಕೊವಿಡ್​ ಪ್ರಕರಣಗಳ ಸಂಖ್ಯೆ 96,44,222ಕ್ಕೆ ತಲುಪಿದೆ. ಆದರೆ, ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 4,03,248ರಷ್ಟಿದ್ದು ಕಳೆದ 138 ದಿನಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 4 ಲಕ್ಷದ ಆಸುಪಾಸಿಗೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶಾದ್ಯಂತ ಇದುವರೆಗೆ 91,00,792 ಜನ ಕೊವಿಡ್​ ಸೋಂಕಿನಿಂದ ಪಾರಾಗಿದ್ದು ಗುಣಮುಖರಾಗುತ್ತಿರುವವರ ಪ್ರಮಾಣ ಶೇ.94.37ಕ್ಕೆ ತಲುಪಿದೆ. ನಿನ್ನೆ 482 ಜನ ಸೋಂಕಿಗೆ ಮೃತಪಡುವ ಮೂಲಕ ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ 1,40,182ಕ್ಕೆ ತಲುಪಿದೆ. ಸಾವಿನ ಸಂಖ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿ ನಿಂತಿದೆ. ಸಾವಿಗೀಡಾದವರಲ್ಲಿ ಶೇ.70ರಷ್ಟು ಜನ ಕೊವಿಡ್​ ಸೋಂಕಿಗೆ ಒಳಗಾಗುವ ಮೊದಲು ಇತರೆ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸದ್ಯ ಭಾರತದಲ್ಲಿ ದಾಖಲಾದ ಕೊವಿಡ್ ಪ್ರಕರಣಗಳ ಪ್ರಮಾಣವು ವಿಶ್ವದ ಒಟ್ಟಾರೆ ಪ್ರಕರಣಗಳ ಶೇ.4.18ರಷ್ಟಿದೆ. ಇದುವರೆಗೂ ದೇಶದಲ್ಲಿ 14,69,86,555 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ನಿನ್ನೆ ಒಂದೇ ದಿನ 11,01,063 ಪರೀಕ್ಷೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾರತದಲ್ಲಿ ಕೋವಿಡ್-19 ಲಸಿಕೆಯ ತುರ್ತು ಬಳಕೆಗೆ ಅನುಮತಿ ಕೋರಿದ ಫೈಜರ್

Published On - 12:49 pm, Sun, 6 December 20

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ