ಬುಧವಾರ ಪಾಕಿಸ್ತಾನದೊಳಗೆ (Pakistan) ನಿರಾಯುಧ ಭಾರತೀಯ ಸೂಪರ್‌ಸಾನಿಕ್ ಕ್ಷಿಪಣಿ ( supersonic missile)ಬಿದ್ದ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಭಾರತ ಸರ್ಕಾರ, ಇದು ಆಕಸ್ಮಿಕವಾಗಿ ಉಡಾವಣೆ ಆಗಿದ್ದು ಎಂದು ವಿಷಾದ ವ್ಯಕ್ತಪಡಿಸಿದೆ. ಅದೇ ವೇಳೆ ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ . ಮಾರ್ಚ್ 9 ರಂದು ವಾಡಿಕೆಯ ನಿರ್ವಹಣೆಯ ಸಂದರ್ಭದಲ್ಲಿ, ತಾಂತ್ರಿಕ ದೋಷದಿಂದಾಗಿ ಆಕಸ್ಮಿಕವಾಗಿ ಕ್ಷಿಪಣಿ ಉಡಾವಣೆ ಆಗಿತ್ತು” ಎಂದು ರಕ್ಷಣಾ ಸಚಿವಾಲಯ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ. ಭಾರತ ಸರ್ಕಾರವು “ಗಂಭೀರವಾಗಿ ಇದನ್ನು ತೆಗೆದುಕೊಂಡಿದೆ ಮತ್ತು ಉನ್ನತ ಮಟ್ಟದ ವಿಚಾರಣೆಗೆ ಆದೇಶಿಸಿದೆ” ಎಂದು ಹೇಳಿದೆ. ಕ್ಷಿಪಣಿ ಪಾಕಿಸ್ತಾನದ ಪ್ರದೇಶದಲ್ಲಿ ಬಿದ್ದಿದೆ ಎಂದು ತಿಳಿದುಬಂದಿದೆ. ಘಟನೆಯು ತೀವ್ರ ವಿಷಾದನೀಯವಾಗಿದ್ದರೂ, ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನದ ವಿಷಯವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಶುಕ್ರವಾರ ಭಾರತೀಯ ರಾಯಭಾರಕ್ಕೆ ಕರೆ ಮಾಡಿದ್ದು ತನ್ನ ತೀವ್ರ ಪ್ರತಿಭಟನೆಯನ್ನು ತಿಳಿಸಿದೆ. ಈ ಘಟನೆಯ ಬಗ್ಗೆ ಪಾರದರ್ಶಕ ತನಿಖೆಗೆ ಪಾಕ್ ಒತ್ತಾಯಿಸಿದೆ. ಮಾರ್ಚ್ 9 ರಂದು ಸಂಜೆ 6:43 ಕ್ಕೆ (ಸ್ಥಳೀಯ ಕಾಲಮಾನ) ಭಾರತದ “ಸೂರತ್‌ಗಢ” ನಿಂದ ಭಾರತೀಯ “ಸೂಪರ್ಸಾನಿಕ್ ಫ್ಲೈಯಿಂಗ್ ಆಬ್ಜೆಕ್ಟ್” ಪಾಕಿಸ್ತಾನಕ್ಕೆ ಪ್ರವೇಶಿಸಿದ ಘಟನೆಯ ಬಗ್ಗೆ ಭಾರತದ ಚಾರ್ಜ್ ಡಿ’ಅಫೇರ್ಸ್ ಎಂ ಸುರೇಶ್ ಕುಮಾರ್ ಅವರಿಗೆ ಗುರುವಾರ ರಾತ್ರಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
#BREAKING: India says it accidentally fired a missile due to technical malfunction which landed in an area of Pakistan. Incident is deeply regretted.
The Government of India has taken a serious view and ordered a high-level Court of Enquiry. pic.twitter.com/hvmsIJRJIQ
— Aditya Raj Kaul (@AdityaRajKaul) March 11, 2022
“ಫ್ಲೈಯಿಂಗ್ ಆಬ್ಜೆಕ್ಟ್ ವಿವೇಚನೆಯಿಲ್ಲದ ಉಡಾವಣೆಯು ನಾಗರಿಕ ಆಸ್ತಿಗೆ ಹಾನಿಯನ್ನುಂಟುಮಾಡುತ್ತದೆ ಮಾತ್ರವಲ್ಲದೆ ನೆಲದ ಮೇಲೆ ಮಾನವ ಜೀವಗಳನ್ನು ಅಪಾಯಕ್ಕೆ ಒಳಪಡಿಸುತ್ತದೆ ಎಂದು ಭಾರತೀಯ ರಾಜತಾಂತ್ರಿಕರಿಗೆ ತಿಳಿಸಲಾಗಿದೆ” ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ (ಎಫ್ಒ) ಪಿಟಿಐ ವರದಿ ಮಾಡಿದೆ.
ಭಾರತೀಯ ರಾಯಭಾರಿಗೆ “ಸ್ಥಾಪಿತ ಅಂತರರಾಷ್ಟ್ರೀಯ ನಿಯಮಗಳು ಮತ್ತು ವಾಯುಯಾನ ಸುರಕ್ಷತಾ ಪ್ರೋಟೋಕಾಲ್‌ಗಳಿಗೆ ವಿರುದ್ಧವಾಗಿ ಪಾಕಿಸ್ತಾನದ ವಾಯುಪ್ರದೇಶದ ಈ ಸ್ಪಷ್ಟ ಉಲ್ಲಂಘನೆಯ ಬಗ್ಗೆ ಪಾಕಿಸ್ತಾನದ ತೀವ್ರ ಖಂಡನೆಯನ್ನು ಭಾರತ ಸರ್ಕಾರಕ್ಕೆ ತಿಳಿಸಲು ತಿಳಿಸಲಾಗಿದೆ” ಎಂದು ವಿದೇಶಾಂಗ ಕಚೇರಿ ಹೇಳಿದೆ.ಅದೇ ವೇಳೆ ಭಾರತ ಸಂಪೂರ್ಣ ಮತ್ತು ಪಾರದರ್ಶಕ ತನಿಖೆಗೆ ನಡೆಸಿದ ಮೇಲೆ ಘಟನೆ, ಅದರ ಫಲಿತಾಂಶವನ್ನು ಹಂಚಿಕೊಳ್ಳಬೇಕು ಎಂದು ಹೇಳಿದೆ.
ಇಂತಹ ನಿರ್ಲಕ್ಷ್ಯದ ಅಹಿತಕರ ಪರಿಣಾಮಗಳ ಬಗ್ಗೆ ಎಚ್ಚರದಿಂದಿರಬೇಕು ಮತ್ತು ಭವಿಷ್ಯದಲ್ಲಿ ಇಂತಹ ಉಲ್ಲಂಘನೆಗಳು ಮರುಕಳಿಸುವುದನ್ನು ತಪ್ಪಿಸಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಾರತಕ್ಕೆ ಎಚ್ಚರಿಕೆ ನೀಡಿದೆ ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.
ಭಾರತೀಯ ಸೂಪರ್‌ಸಾನಿಕ್ ಕ್ಷಿಪಣಿಯು ಸಿರ್ಸಾದಿಂದ ಉಡಾವಣೆಗೊಂಡು ಪಾಕಿಸ್ತಾನದ ಭೂಪ್ರದೇಶದ ಸುಮಾರು 124 ಕಿಮೀ ದೂರದಲ್ಲಿರುವ ಖನೇವಾಲ್ ಜಿಲ್ಲೆಯ ಮಿಯಾನ್ ಚನ್ನು ಬಳಿ ಇಳಿಯಿತು ಎಂದು ಪಾಕಿಸ್ತಾನದ ಮಿಲಿಟರಿ ವಕ್ತಾರ ಮೇಜರ್ ಜನರಲ್ ಬಾಬರ್ ಇಫ್ತಿಕರ್ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ ಒಂದು ದಿನದ ನಂತರ ಭಾರತದ ಹೇಳಿಕೆ ಬಂದಿದೆ. ಕ್ಷಿಪಣಿಯು 40,000 ಅಡಿ ಎತ್ತರದಲ್ಲಿ ಪ್ರಯಾಣಿಸುತ್ತಿದೆ ಮತ್ತು ಭಾರತೀಯ ಮತ್ತು ಪಾಕಿಸ್ತಾನಿ ವಾಯುಪ್ರದೇಶದಲ್ಲಿ ಪ್ರಯಾಣಿಕರ ವಿಮಾನಗಳು ಮತ್ತು ನೆಲದ ಮೇಲಿನ ನಾಗರಿಕರು ಮತ್ತು ಆಸ್ತಿಗೆ ಅಪಾಯ ತರುತ್ತಿತ್ತು ಎಂದು ಅವರು ಹೇಳಿದ್ದಾರೆ.
ಯಾವುದೇ ಸಾವುನೋವುಗಳು ಸಂಭವಿಸಿಲ್ಲ ಆದರೆ ಅದು ಬಿದ್ದ ಸ್ಥಳದಲ್ಲಿ ಗೋಡೆಗೆ ಅಪ್ಪಳಿಸಿತು. ಭಾರತ ಮತ್ತು ಪಾಕಿಸ್ತಾನಿ ಸೇನೆಯ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಘಟನೆಯನ್ನು ವಿವರಿಸುವ ಜವಾಬ್ದಾರಿ ಭಾರತದ ಮೇಲಿದೆ ಎಂದು ಅವರು ಹೇಳಿದ್ದಾರೆ. ಬುಧವಾರ ಸಂಜೆ 6:43 ಕ್ಕೆ ಪಾಕಿಸ್ತಾನಿ ವಾಯುಪಡೆಯ ವಾಯು ರಕ್ಷಣಾ ಕಾರ್ಯಾಚರಣೆ ಕೇಂದ್ರದಿಂದ ಭಾರತೀಯ ವಾಯು ಪ್ರದೇಶದೊಳಗೆ ಅತಿ ವೇಗದ ಹಾರುವ ವಸ್ತುವೊಂದು ಪತ್ತೆಯಾಗಿದೆ ಎಂದು ಇಫ್ತಿಕರ್ ಹೇಳಿದ್ದಾರೆ. ವಸ್ತುವು ಇದ್ದಕ್ಕಿದ್ದಂತೆ ಪಾಕಿಸ್ತಾನದ ಪ್ರದೇಶದ ಕಡೆಗೆ ಚಲಿಸಿತು ಮತ್ತು ಪಾಕಿಸ್ತಾನದ ವಾಯುಪ್ರದೇಶವನ್ನು ಉಲ್ಲಂಘಿಸಿತು. “ಘಟನೆಯು ಪ್ರಮುಖ ವಾಯುಯಾನ ದುರಂತಕ್ಕೆ ಕಾರಣವಾಗಬಹುದು ಮತ್ತು ನಾಗರಿಕರ ಸಾವುನೋವುಗಳಿಗೆ ಕಾರಣವಾಗಬಹುದು” ಎಂದು ಇಫ್ತಿಕರ್ ಹೇಳಿದ್ದಾರೆ.
ಇದನ್ನೂ ಓದಿ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಉತ್ತರ ಪ್ರದೇಶದಲ್ಲಿ ‘ಮಿಷನ್ ಬಿಜೆಪಿ’ ಮೂಲಕ ಕಾರ್ಯಕರ್ತರಲ್ಲಿ ಚೈತನ್ಯ ತುಂಬಿದ್ದು ಹೀಗೆ
Published On - 8:01 pm, Fri, 11 March 22