AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿದಿದೆ; ಅಮಿತ್ ಶಾ ಭೇಟಿಗೆ ತಕರಾರು ತೆಗೆದ ಚೀನಾಕ್ಕೆ ಭಾರತ ಖಡಕ್ ಉತ್ತರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ 2 ದಿನಗಳ ಅರುಣಾಚಲ ಪ್ರವಾಸಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾಕ್ಕೆ ಭಾರತ ಕಟುವಾಗಿ ತಿರುಗೇಟು ನೀಡಿದೆ.

ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿದಿದೆ; ಅಮಿತ್ ಶಾ ಭೇಟಿಗೆ ತಕರಾರು ತೆಗೆದ ಚೀನಾಕ್ಕೆ ಭಾರತ ಖಡಕ್ ಉತ್ತರ
ಅರುಣಾಚಲ ಪ್ರದೇಶದಲ್ಲಿ ಅಮಿತ್ ಶಾImage Credit source: PTI
ಗಣಪತಿ ಶರ್ಮಾ
|

Updated on: Apr 11, 2023 | 8:32 PM

Share

ಮುಖ್ಯಾಂಶಗಳು

  • ಅಮಿತ್ ಶಾ ಅವರ ಅರುಣಾಚಲ ಪ್ರವಾಸಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾಕ್ಕೆ ಭಾರತ ಕಟುವಾಗಿ ತಿರುಗೇಟು.
  • ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿದಿದೆ.
  • ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿಯೇ ಇತ್ತು, ಇದೆ ಮತ್ತು ಇರಲಿದೆ; ವಿದೇಶಾಂಗ ಇಲಾಖೆ ಸ್ಪಷ್ಟೋಕ್ತಿ.

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ 2 ದಿನಗಳ ಅರುಣಾಚಲ ಪ್ರವಾಸಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಚೀನಾಕ್ಕೆ ಭಾರತ ಕಟುವಾಗಿ ತಿರುಗೇಟು ನೀಡಿದೆ. ಚೀನಾದ ಹೇಳಿಕೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿರುವ ವಿದೇಶಾಂಗ ಸಚಿವಾಲಯ, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿಯೇ ಉಳಿದಿದೆ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಭಾರತೀಯ ನಾಯಕರು ಇತರ ಯಾವುದೇ ರಾಜ್ಯಗಳಿಗೆ ಭೇಟಿ ನೀಡುವ ರೀತಿಯಲ್ಲಿಯೇ ಅರುಣಾಚಲ ಪ್ರದೇಶಕ್ಕೆ ನಿಯಮಿತವಾಗಿ ಭೇಟಿ ನೀಡುತ್ತಾರೆ. ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗವಾಗಿಯೇ ಇತ್ತು, ಇದೆ ಮತ್ತು ಇರಲಿದೆ. ಚೀನಾದ ಆಕ್ಷೇಪಣೆಗಳನ್ನು ಒಪ್ಪಲಾಗದು ಮತ್ತು ಅದು ವಾಸ್ತವವನ್ನು ಬದಲಾಯಿಸಲಾರದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.

ಸೋಮವಾರ ಅಮಿತ್ ಶಾ ಅರುಣಾಚಲ ಪ್ರದೇಶಕ್ಕೆ ತೆರಳಿದ್ದರು. ಅದೇ ದಿನ, ಶಾ ಭೇಟಿಯನ್ನು ವಿರೋಧಿಸಿದ್ದ ಚೀನಾ, ಇದು ನಮ್ಮ ಸಾರ್ವಭೌಮತ್ವದ ಉಲ್ಲಂಘನೆ ಎಂದು ಹೇಳಿತ್ತು. ಅರುಣಾಚಲ ಪ್ರದೇಶ ಚೀನಾದ ಭಾಗವೆಂದು ಆ ದೇಶದ ವಿದೇಶಾಂಗ ಇಲಾಖೆ ಪ್ರತಿಪಾದಿಸಿತ್ತು.

ಇದನ್ನೂ ಓದಿ: Amit Shah: ‘ಒಂದು ಇಂಚು ನೆಲವನ್ನೂ ಬಿಟ್ಟುಕೊಡಲ್ಲ’- ಚೀನಾ ಕ್ಯಾತೆ ಮಧ್ಯೆಯೂ ಅರುಣಾಚಲದಲ್ಲಿ ಅಮಿತ್ ಶಾ ಗುಡುಗು

ಅರುಣಾಚಲ ಪ್ರದೇಶಕ್ಕೆ ಭಾರತದ ಸಚಿವರ ಭೇಟಿಯು ಚೀನಾದ ಪ್ರಾದೇಶಿಕ ಸಾರ್ವಭೌಮತ್ವವನ್ನು ಉಲ್ಲಂಘಿಸಿದೆ. ಗಡಿಯಲ್ಲಿ ಶಾಂತಿ ನೆಲೆಸಲು ಇದು ಒಳ್ಳೆಯದಲ್ಲ ಎಂದು ಚೀನಾ ವಿದೇಶಾಂಗ ಇಲಾಖೆ ಹೇಳಿತ್ತು. ಅರುಣಾಚಲ ಪ್ರದೇಶವನ್ನು ತನ್ನದು ಎಂದು ಹೇಳಿಕೊಳ್ಳುವ ಚೀನಾ ಅದನ್ನು ದಕ್ಷಿಣ ಟಿಬೆಟ್ ಎಂದು ಕರೆಯುತ್ತದೆ. ಇತ್ತೀಚೆಗಷ್ಟೇ ಅರುಣಾಚಲ ಪ್ರದೇಶದ ಹಲವು ಸ್ಥಳಗಳ ಹೆಸರನ್ನು ಚೀನಾ ಬದಲಾಯಿಸಿದ್ದು ವಿಶ್ವಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಚೀನಾ ಸರ್ಕಾರವು ಅರುಣಾಚಲ ಪ್ರದೇಶದ ಹೆಸರು ಬದಲಾಯಿಸಿದೆ ಎಂದ ಮಾತ್ರಕ್ಕೆ ವಾಸ್ತವ ಬದಲಾಗದು. ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದು ಭಾರತ ಹೇಳಿತ್ತು. ಚೀನಾದ ನಡೆಗೆ ಅಮೆರಿಕವೂ ಆಕ್ಷೇಪ ವ್ಯಕ್ತಪಡಿಸಿತ್ತು.

ಅಮಿತ್ ಶಾ ಕೂಡ ಅರುಣಾಚಲ ಪ್ರದೇಶದಿಂದಲೇ ಚೀನಾಕ್ಕೆ ಸ್ಪಷ್ಟ ಸಂದೇಶ ನೀಡಿದ್ದರು. ಭಾರತದ ನೆಲವನ್ನು ಯಾರು ಬೇಕಾದರೂ ಅತಿಕ್ರಮಿಸುವ ಕಾಲ ಇದಲ್ಲ ಎಂದು ಹೇಳಿದ್ದರು. ದೇಶದ ಒಂದು ಇಂಚು ಭೂಮಿಯನ್ನೂ ಯಾರೂ ಕಬಳಿಸಲು ಸಾಧ್ಯವಿಲ್ಲ. ಚೀನಾ ಇನ್ನು ಮುಂದೆ ಸೂಜಿಯ ತುದಿಯಷ್ಟು ಭೂಮಿಯನ್ನು ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದರು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್