AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂಧೂ ಜಲ ಒಪ್ಪಂದದ ಕುರಿತು ಪಾಕಿಸ್ತಾನದ ಪರ ತೀರ್ಪು ನೀಡಿದ ಮಧ್ಯಸ್ಥಿಕೆ ನ್ಯಾಯಾಲಯ; ಆದೇಶ ತಿರಸ್ಕರಿಸಿದ ಭಾರತ

ಸಿಂಧೂ ನದಿ ನೀರು ಒಪ್ಪಂದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಪರವಾಗಿ ಕಾನೂನುಬಾಹಿರವಾಗಿ ರಚಿತಗೊಂಡ ಮಧ್ಯಸ್ಥಿಕೆ ನ್ಯಾಯಾಲಯ ನೀಡಿರುವ ತೀರ್ಪನ್ನು ಭಾರತ ಸಂಪೂರ್ಣವಾಗಿ ತಿರಸ್ಕರಿಸಿದೆ. 1960ರ ಸಿಂಧೂ ನದಿ ನೀರು ಒಪ್ಪಂದವನ್ನು ಅಮಾನತುಗೊಳಿಸುವ ಭಾರತದ ನಿರ್ಧಾರವು ಮುಂದೆ ಕೂಡ ಜಾರಿಯಲ್ಲಿರುತ್ತದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.

ಸಿಂಧೂ ಜಲ ಒಪ್ಪಂದದ ಕುರಿತು ಪಾಕಿಸ್ತಾನದ ಪರ ತೀರ್ಪು ನೀಡಿದ ಮಧ್ಯಸ್ಥಿಕೆ ನ್ಯಾಯಾಲಯ; ಆದೇಶ ತಿರಸ್ಕರಿಸಿದ ಭಾರತ
Salal DamImage Credit source: PTI
ಸುಷ್ಮಾ ಚಕ್ರೆ
|

Updated on: Aug 31, 2026 | 7:30 PM

Share

ನವದೆಹಲಿ, ಆಗಸ್ಟ್ 31: ಸಿಂಧೂ ನದಿ ನೀರು ಒಪ್ಪಂದಕ್ಕೆ (Indus Waters Treaty) ಸಂಬಂಧಿಸಿದಂತೆ ಮಧ್ಯಸ್ಥಿಕೆ ನ್ಯಾಯಾಲಯ ನೀಡಿರುವ ಆದೇಶವನ್ನು ಭಾರತ ಇಂದು (ಆಗಸ್ಟ್ 31) ಸಂಪೂರ್ಣವಾಗಿ ತಿರಸ್ಕರಿಸಿದೆ. ಈ ಸಂಸ್ಥೆಯನ್ನು ಕಾನೂನುಬಾಹಿರವಾಗಿ ರಚಿಸಲಾಗಿದೆ ಮತ್ತು ಭಾರತದ ಸಾರ್ವಭೌಮ ನಿರ್ಧಾರಗಳ ಮೇಲೆ ತೀರ್ಪು ನೀಡಲು ಇದಕ್ಕೆ ಯಾವುದೇ ಅಧಿಕಾರ ವ್ಯಾಪ್ತಿಯಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಕಳೆದ ವರ್ಷ ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಾದ ನಂತರ, ಪಾಕಿಸ್ತಾನದ ಗಡಿಯಲ್ಲಿ ಭಯೋತ್ಪಾದನೆಗೆ ನೀಡುತ್ತಿರುವ ಬೆಂಬಲವನ್ನು ವಿರೋಧಿಸಿ ಭಾರತವು 1960ರ ಸಿಂಧೂ ನದಿ ನೀರು ಒಪ್ಪಂದವನ್ನು ಅಮಾನತುಗೊಳಿಸುವುದು ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿತ್ತು.

ಮಧ್ಯಸ್ಥಿಕೆ ನ್ಯಾಯಾಲಯದ ಅಸ್ತಿತ್ವದ ಬಗ್ಗೆ ಭಾರತ ಆಕ್ಷೇಪ:

“ವಿಶ್ವಬ್ಯಾಂಕ್ ಒಪ್ಪಂದದ ನಿಯಮಗಳನ್ನು ನೇರವಾಗಿ ಉಲ್ಲಂಘಿಸಿ ಈ ನ್ಯಾಯಾಲಯವನ್ನು ರಚಿಸಿದೆ. ಭಾರತವು ಈ ಸಂಸ್ಥೆಯ ಅಸ್ತಿತ್ವವನ್ನು ಕಾನೂನುಬದ್ಧವಾಗಿ ಎಂದಿಗೂ ಒಪ್ಪಿಕೊಂಡಿಲ್ಲ. ಹೀಗಾಗಿ, ಅದರ ಯಾವುದೇ ನಿರ್ಧಾರಗಳಿಗೆ ಪ್ರಾಮುಖ್ಯತೆ ನೀಡುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಹಾಗೇ, ಭಾರತದ ಸಾರ್ವಭೌಮ ನಿರ್ಧಾರಗಳ ಮೇಲಾಗಲಿ ಅಥವಾ ಜಮ್ಮು-ಕಾಶ್ಮೀರದಲ್ಲಿ ಭಾರತ ಕೈಗೆತ್ತಿಕೊಳ್ಳುತ್ತಿರುವ ಜಲವಿದ್ಯುತ್ ಯೋಜನೆಗಳ ಮೇಲಾಗಲಿ ಮಧ್ಯಸ್ಥಿಕೆ ನ್ಯಾಯಾಲಯಕ್ಕೆ ಯಾವುದೇ ಅಧಿಕಾರವಿಲ್ಲ” ಎಂದು ಭಾರತ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ವೇಳೆ ಭಾರತ ಪಾಕಿಸ್ತಾನದ ಕಿರಾನಾ ಹಿಲ್ಸ್ ಪರಮಾಣು ಕೇಂದ್ರದ ಮೇಲೆ ದಾಳಿ ಮಾಡಿತ್ತಾ?

“ಮಧ್ಯಸ್ಥಿಕೆ ನ್ಯಾಯಾಲಯದ ಅಸ್ತಿತ್ವವನ್ನು ಕಾನೂನುಬದ್ಧವಾಗಿ ಎಂದಿಗೂ ಒಪ್ಪಿಕೊಂಡಿಲ್ಲ. ಈ ಸಂಸ್ಥೆಯ ಸ್ಥಾಪನೆಯೇ ಸಿಂಧೂ ಒಪ್ಪಂದದ ತೀವ್ರ ಉಲ್ಲಂಘನೆಯಾಗಿದೆ ಎಂದು ಭಾರತ ಸತತವಾಗಿ ಪ್ರತಿಪಾದಿಸುತ್ತಾ ಬಂದಿದೆ. ಆದ್ದರಿಂದ, ಭಾರತವು ಈ ಸಂಸ್ಥೆಯ ಮುಂದೆ ಎಂದಿಗೂ ಹಾಜರಾಗಿಲ್ಲ ಮತ್ತು ಅದರ ಹಿಂದಿನ ಯಾವುದೇ ನಿರ್ಧಾರಗಳನ್ನು ಪರಿಗಣಿಸಿಲ್ಲ” ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಗಡಿಯಲ್ಲಿನ ಭಯೋತ್ಪಾದನೆಗೆ ಪಾಕಿಸ್ತಾನ ನೀಡುತ್ತಿರುವ ಬೆಂಬಲವನ್ನು ವಿರೋಧಿಸಿ ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ತಡೆಹಿಡಿದಿದ್ದು, ಆ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಭಾರತ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಆಪರೇಷನ್ ಸಿಂಧೂರ್ ವೇಳೆ S-400 ಕ್ಷಿಪಣಿ ಪತ್ತೆಗೆ ಪಾಕಿಸ್ತಾನದಿಂದ ಗೂಢಚಾರರ ನಿಯೋಜನೆ; ಭಾರತದ ಏರ್ ಮಾರ್ಷಲ್

ಮಧ್ಯಸ್ಥಿಕೆ ನ್ಯಾಯಾಲಯ ನೀಡಿದ ತೀರ್ಪೇನು?:

ಮಧ್ಯಸ್ಥಿಕೆ ನ್ಯಾಯಾಲಯವು ತನ್ನ ಪತ್ರಿಕಾ ಪ್ರಕಟಣೆಯಲ್ಲಿ, ಸಿಂಧೂ ಒಪ್ಪಂದವನ್ನು ಅಮಾನತುಗೊಳಿಸಲು ಭಾರತ ನೀಡಿದ ಕಾರಣಗಳನ್ನು ಪರಿಶೀಲಿಸಲಾಗಿದ್ದು, ಒಪ್ಪಂದವನ್ನು ರದ್ದುಗೊಳಿಸಲು ಅಥವಾ ಅಮಾನತುಗೊಳಿಸಲು ಈ ಕಾರಣಗಳು ಸಮರ್ಥನೀಯವಲ್ಲ ಎಂದು ಹೇಳಿದೆ. ಭಾರತವು ಒಪ್ಪಂದದ ನಿಯಮಗಳಿಗೆ ಬದ್ಧವಾಗಿರಬೇಕು ಮತ್ತು ಪಶ್ಚಿಮದ ನದಿಗಳಲ್ಲಿ ಜಲವಿದ್ಯುತ್ ಯೋಜನೆಗಳ ವಿನ್ಯಾಸ ಹಾಗೂ ಕಾರ್ಯಾಚರಣೆಗೆ ಸಂಬಂಧಿಸಿದ ನಿಯಮಗಳನ್ನು ಪಾಲಿಸಬೇಕು ಎಂದು ಕೋರ್ಟ್ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ