Coronavirus Cases in India: ದೇಶದಲ್ಲಿ 1 ಲಕ್ಷ ಹೊಸ ಕೊವಿಡ್ ಪ್ರಕರಣ, 2,427 ಮಂದಿ ಸಾವು

Covid 19: ದೆಹಲಿಯಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ಮತ್ತಷ್ಟು ಸಡಿಲಗೊಳಿಸಲಾಗಿದೆ. ಇಂದಿನಿಂದ ದೆಹಲಿಯಲ್ಲಿ ಮಾರುಕಟ್ಟೆಗಳು ಬೆಸ-ಸಮ ಸಂಖ್ಯೆ ಆಧಾರದಲ್ಲಿ ತೆರೆದುಕೊಳ್ಳುತ್ತವೆ. ಖಾಸಗಿ ಕಚೇರಿಗಳು ಸಹ ಮತ್ತೆ ತೆರೆಯುತ್ತಿವೆ

Coronavirus Cases in India: ದೇಶದಲ್ಲಿ 1 ಲಕ್ಷ ಹೊಸ ಕೊವಿಡ್ ಪ್ರಕರಣ, 2,427 ಮಂದಿ ಸಾವು
ಹೈದರಾಬಾದ್ ನಲ್ಲಿ ಕೊರೊನಾ ಜಾಗೃತಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 07, 2021 | 10:37 AM

ದೆಹಲಿ: ಭಾರತದಲ್ಲಿ ಸೋಮವಾರ 1,00,636 ಹೊಸ ಕೊವಿಡ್ -19 ಪ್ರಕರಣಗಳು ಮತ್ತು 2,427 ಸಾವು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ. ಒಟ್ಟು ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ ಈಗ 2,89,09,975 ಕ್ಕೆ ತಲುಪಿದ್ದು ಸಾವಿನ ಸಂಖ್ಯೆ 3,49,186 ಕ್ಕೆ ಏರಿದೆ. ದೇಶದಲ್ಲಿ 14,01,609 ಸಕ್ರಿಯ ಪ್ರಕರಣಗಳಿದ್ದು, 2,71,59,180 ಜನರು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 23,27,86,482 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಏತನ್ಮಧ್ಯೆ, ವೇಗವಾಗಿ ಸುಧಾರಿಸುತ್ತಿರುವ ಕೊರೊನಾವೈರಸ್ ಪರಿಸ್ಥಿತಿಯ ಮಧ್ಯೆ, 7 ದಿನಗಳ ಸಾವಿನ ಸಂಖ್ಯೆ ಆರು ವಾರಗಳಲ್ಲಿ ಮೊದಲ ಬಾರಿಗೆ 3,000 ಕ್ಕಿಂತ ಕಡಿಮೆಯಾಗಿದೆ. ಮೇ 21 ರಂದು ಸುಮಾರು 4,200 ರ ಗರಿಷ್ಠ ಮಟ್ಟವನ್ನು ತಲುಪಿದ ನಂತರ ಸರಾಸರಿ ಸಾವಿನ ಸಂಖ್ಯೆ ಸ್ಥಿರ ಕುಸಿತವನ್ನು ತೋರಿಸುತ್ತಿದೆ. ಶನಿವಾರ ಈ ಸರಾಸರಿ 2,970 ಕ್ಕೆ ಇಳಿದಿದೆ. ಹೊಸ ಪ್ರಕರಣಗಳು ಮತ್ತು ಸಾವು ಪ್ರಕರಣಗಳ ನಡುವೆ ಸಾಮಾನ್ಯವಾಗಿ ಎರಡು-ಮೂರು ವಾರಗಳ ಅಂತರವಿದೆ. ದೈನಂದಿನ ಪ್ರಕರಣಗಳ ಸಂಖ್ಯೆ ಮೇ 6 ರಂದು 4.14 ಲಕ್ಷಕ್ಕೆ ಏರಿತು ನಂತರ ಸಂಖ್ಯೆಗಳು ಸ್ಥಿರವಾಗಿ ಕಡಿಮೆಯಾಗುತ್ತಿವೆ.

ದೆಹಲಿಯಲ್ಲಿ ಲಾಕ್‌ಡೌನ್ ನಿರ್ಬಂಧಗಳನ್ನು ಮತ್ತಷ್ಟು ಸಡಿಲಗೊಳಿಸಲಾಗಿದೆ. ಇಂದಿನಿಂದ ದೆಹಲಿಯಲ್ಲಿ ಮಾರುಕಟ್ಟೆಗಳು ಬೆಸ-ಸಮ ಸಂಖ್ಯೆ ಆಧಾರದಲ್ಲಿ ತೆರೆದುಕೊಳ್ಳುತ್ತವೆ. ಖಾಸಗಿ ಕಚೇರಿಗಳು ಸಹ ಮತ್ತೆ ತೆರೆಯುತ್ತಿವೆ ಮತ್ತು ದೆಹಲಿ ಮೆಟ್ರೋ ಶೇಕಡಾ 50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯಾಚರಣೆಯನ್ನು ಪುನರಾರಂಭಿಸಲಿದೆ. ಬಸ್ ಸೇವೆಗಳು ಮುಂಬೈನಲ್ಲಿ ಪುನರಾರಂಭಗೊಳ್ಳಲು ಸಜ್ಜಾಗಿದೆ.

ಕಳೆದ 24 ಗಂಟೆಗಳಲ್ಲಿ 1,390,916  ಕೊವಿಡ್  ಲಸಿಕೆ ಡೋಸ್ ನೀಡಲಾಗಿದೆ ಎಂದು ಅಂಕಿ ಅಂಶ ತೋರಿಸಿದೆ. ಇದುವರೆಗೆ 232,786,482 ಒಟ್ಟು ಡೋಸ್ ಲಸಿಕೆ ನೀಡಲಾಗಿದೆ.  ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಜೂನ್ 6 ರಂದು 1,587,589 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಜೂನ್ 5 ರಂದು 2,036,311 ಕ್ಕೆ ಹೋಲಿಸಿದರೆ, ಒಟ್ಟು 336,334,111 ಮಾದರಿಗಳನ್ನು ಇಲ್ಲಿಯವರೆಗೆ ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ಅಂಕಿಅಂಶಗಳು ತಿಳಿಸಿವೆ.

ಇದನ್ನೂ ಓದಿ: ಕೊರೊನಾದಿಂದ ಉಂಟಾದ ಹೆಚ್ಚಿನ ಸಾವುಗಳು ಸೋಂಕು ದೃಢಪಟ್ಟ 10 ದಿನಗಳ ಬಳಿಕ ಸಂಭವಿಸಿದೆ; ಕೊವಿಡ್ 2ನೇ ಅಲೆಯ ವಿಶೇಷ ವರದಿ ಇಲ್ಲಿದೆ

ಇದನ್ನೂ ಓದಿ: World Food Safety Day 2021: ಮನೆಯಲ್ಲಿ ಆಹಾರವನ್ನು ಸುರಕ್ಷಿತವಾಗಿರಿಸುವುದು ಹೇಗೆ?

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ