Coronavirus cases in India: ದೇಶದಲ್ಲಿ 10,929 ಹೊಸ ಕೊವಿಡ್ ಪ್ರಕರಣ, 392 ಮಂದಿ ಸಾವು

Coronavirus: ಕಳೆದ 132 ದಿನಗಳಿಂದ ಕೊವಿಡ್ ಸೋಂಕಿತರ ಸಂಖ್ಯೆ ಭಾರತದಲ್ಲಿ 50 ಸಾವಿರವನ್ನು ದಾಟಿಲ್ಲ. ದೇಶದ ಪಾಸಿಟಿವಿಟಿ ದರ ಶೇಕಡಾ 1.35 ಆಗಿದೆ. ಕಳೆದ 33 ದಿನಗಳಿಂದ ಕೊರೊನಾ ಪಾಸಿಟಿವಿಟಿ ದರ ಶೇಕಡಾ 2 ಕ್ಕಿಂತ ಕಡಿಮೆ ಇದೆ.

Coronavirus cases in India: ದೇಶದಲ್ಲಿ 10,929 ಹೊಸ ಕೊವಿಡ್ ಪ್ರಕರಣ, 392 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Nov 06, 2021 | 12:15 PM

ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 10, 929 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಆ ಮೂಲಕ ದೇಶದಲ್ಲಿ ಒಟ್ಟು ಕೊವಿಡ್ 19 ಸೋಂಕಿತರ ಸಂಖ್ಯೆ 3,43,44,683 ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 392 ಮಂದಿ ಕೊರೊನಾದಿಂದ ಮರಣವನ್ನಪ್ಪಿದ್ದಾರೆ. ಅದರಂತೆ ಭಾರತದಲ್ಲಿ ಒಟ್ಟು 4,60,265 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಳೆದ 29 ದಿನಗಳಿಂದ 20,000 ಕ್ಕಿಂತ ಕಡಿಮೆ ದಾಖಲಾಗುತ್ತಿದೆ. ಕಳೆದ 132 ದಿನಗಳಿಂದ ಕೊವಿಡ್ ಸೋಂಕಿತರ ಸಂಖ್ಯೆ ಭಾರತದಲ್ಲಿ 50 ಸಾವಿರವನ್ನು ದಾಟಿಲ್ಲ. ದೇಶದ ಪಾಸಿಟಿವಿಟಿ ದರ ಶೇಕಡಾ 1.35 ಆಗಿದೆ. ಕಳೆದ 33 ದಿನಗಳಿಂದ ಕೊರೊನಾ ಪಾಸಿಟಿವಿಟಿ ದರ ಶೇಕಡಾ 2 ಕ್ಕಿಂತ ಕಡಿಮೆ ಇದೆ.

ದೇಶದಲ್ಲಿ ಶೇಕಡಾ 78.4 ರಷ್ಟು ಜನರಿಗೆ ಸಿಂಗಲ್ ಡೋಸ್ ಲಸಿಕೆ ನೀಡಲಾಗಿದೆ. ಶೇಕಡಾ 35.9 ರಷ್ಟು ಜನರಿಗೆ 2 ಡೋಸ್ ಲಸಿಕೆ ನೀಡಲಾಗಿದೆ. ವಯಸ್ಕರಲ್ಲಿ ಶೇಕಡಾ 35.9 ರಷ್ಟು ಜನರಿಗೆ 2ನೇ ಡೋಸ್ ಲಸಿಕೆ ನೀಡಲಾಗಿದೆ. ಕರ್ನಾಟಕದಲ್ಲಿ ಶೇಕಡಾ 90 ರಷ್ಟು ವಯಸ್ಕರಿಗೆ ಸಿಂಗಲ್ ಡೋಸ್ ಲಸಿಕೆ ನೀಡಲಾಗಿದೆ. ಶೇಕಡಾ 49.2 ರಷ್ಟು ಜನರಿಗೆ 2 ಡೋಸ್ ಲಸಿಕೆ ನೀಡಲಾಗಿದೆ.

ವಾಯುಮಾಲಿನ್ಯದಿಂದ ಕೊರೊನಾ ಹೆಚ್ಚಾಗಬಹುದು: ಡಾ.ರಣದೀಪ್ ಗುಲೇರಿಯಾ ಹೇಳಿಕೆ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಳವಾದ ಹಿನ್ನೆಲೆ, ವಾಯುಮಾಲಿನ್ಯದಿಂದ ಕೊರೊನಾ ಹೆಚ್ಚಾಗಬಹುದು ಎಂದು ದೆಹಲಿ ಏಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಹೇಳಿಕೆ ನೀಡಿದ್ದಾರೆ. ಮಾಲಿನ್ಯದ ಗಾಳಿಯಲ್ಲಿ ಹೆಚ್ಚು ಸಮಯ ವೈರಸ್ ಇರುತ್ತೆ. ಇಂತಹ ಗಾಳಿ ಸೇವನೆಯಿಂದ ಜನರು ಸೋಂಕಿಗೆ ತುತ್ತಾಗುತ್ತಾರೆ. ಹೃದಯ, ಕಿಡ್ನಿ ಸಮಸ್ಯೆ ಇರುವವರಿಗೆ ತೊಂದರೆ ಹೆಚ್ಚಾಗಲಿದೆ. ಹೈಪರ್ ಟೆನ್ಷನ್ ಇದ್ರೆ ಹೈರಿಸ್ಕ್ ಹೃದಯದ ಸಮಸ್ಯೆ ಸಾಧ್ಯತೆ ಇದೆ. ವಾಯುಮಾಲಿನ್ಯದಿಂದ ಕೊರೊನಾ ಸಾವು ಹೆಚ್ಚಾಗಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: AQI: ದೆಹಲಿಯಲ್ಲಿ 5 ವರ್ಷದಲ್ಲೇ ಅತಿಹೆಚ್ಚು ವಾಯುಮಾಲಿನ್ಯ; ಬೆಂಗಳೂರಿನ ವಾಯುಗುಣಮಟ್ಟ ಹೇಗಿದೆ? ಇಲ್ಲಿದೆ ವಿವರ

ಇದನ್ನೂ ಓದಿ: ಯುಎಸ್​ನಲ್ಲಿ 2-18 ವರ್ಷದವರಿಗೆ ಕೊವ್ಯಾಕ್ಸಿನ್​ ಲಸಿಕೆ ತುರ್ತು ಬಳಕೆಗೆ ಅನುಮತಿ ಕೋರಿದ ಒಕುಜೆನ್​ ಕಂಪನಿ

Published On - 12:14 pm, Sat, 6 November 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ