Coronavirus cases in India ದೇಶದಲ್ಲಿ 16,156 ಹೊಸ ಕೊವಿಡ್ ಪ್ರಕರಣ ಪತ್ತೆ, 585 ಮಂದಿ ಸಾವು

Covid 19: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ವರದಿಯಾದ ಹೊಸ ಸೋಂಕುಗಳ ಪೈಕಿ ಕೇರಳದಲ್ಲಿ 7,163 ಹೊಸ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ 1,485 ಪ್ರಕರಣಗಳು ಮತ್ತು 38 ಸಾವುಗಳು ವರದಿ ಆಗಿದೆ.

Coronavirus cases in India ದೇಶದಲ್ಲಿ 16,156 ಹೊಸ ಕೊವಿಡ್ ಪ್ರಕರಣ ಪತ್ತೆ, 585 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 28, 2021 | 10:35 AM

ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 13,451 ಹೊಸ ಕೊವಿಡ್-19 ಪ್ರಕರಣಗಳು ಮತ್ತು 585 ಸಾವುಗಳು ವರದಿಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 3,42,15,653 ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ತಿಳಿಸಿದೆ.ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ವರದಿಯಾದ ಹೊಸ ಸೋಂಕುಗಳ ಪೈಕಿ ಕೇರಳದಲ್ಲಿ 7,163 ಹೊಸ ಪ್ರಕರಣಗಳು ವರದಿಯಾಗಿವೆ.ಮಹಾರಾಷ್ಟ್ರದಲ್ಲಿ 1,485 ಪ್ರಕರಣಗಳು ಮತ್ತು 38 ಸಾವುಗಳು ವರದಿ ಆಗಿದೆ. ಇದರೊಂದಿಗೆ, ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 1,62,661ಕ್ಕೆ ತಲುಪಿದೆ, ಇದು 242 ದಿನಗಳಲ್ಲಿ ಕಡಿಮೆ. ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳಲ್ಲಿ ಶೇಕಡಾ 0.48 ರಷ್ಟಿದೆ, ಇದು ಮಾರ್ಚ್ 2020 ರಿಂದ ಕಡಿಮೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಅಕ್ಟೋಬರ್ 27 ರವರೆಗೆ ಪರೀಕ್ಷಿಸಲಾದ ಒಟ್ಟು ಮಾದರಿಗಳ ಸಂಖ್ಯೆ 60,44,98,405. ನಿನ್ನೆ 12,90,900 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಹೇಳಿದೆ. 

ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ 2 ಹೊಸ ಪ್ರಕರಣ ಪತ್ತೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕೇಂದ್ರಾಡಳಿತ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಎರಡು ಹೊಸ ಕೊವಿಡ್ ಪ್ರಕರಣಗಳನ್ನು ವರದಿ ಮಾಡಿದ್ದು ಇಲ್ಲಿ ಪ್ರಕರಣಗಳ ಸಂಖ್ಯೆ ಇದು 7,650 ಕ್ಕೆ ಏರಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಇಲ್ಲಿ ಭಾನುವಾರ, ಸೋಮವಾರ ಮತ್ತು ಮಂಗಳವಾರ ಯಾವುದೇ ಕೊವಿಡ್ ಪ್ರಕರಣ ದಾಖಲಾಗಿಲ್ಲ. ಕೇಂದ್ರಾಡಳಿತ ಪ್ರದೇಶವು ಈಗ ಐದು ಸಕ್ರಿಯ ಕೊವಿಡ್ ಪ್ರಕರಣಗಳನ್ನು ಹೊಂದಿದೆ ಮತ್ತು ಎಲ್ಲಾ ರೋಗಿಗಳು ದಕ್ಷಿಣ ಅಂಡಮಾನ್ ಜಿಲ್ಲೆಯಲ್ಲಿದ್ದಾರೆ. ಉತ್ತರ ಮತ್ತು ಮಧ್ಯ ಅಂಡಮಾನ್ ಮತ್ತು ನಿಕೋಬಾರ್ ಕೊರೊನಾವೈರಸ್ ಮುಕ್ತವಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕೊವಿಡ್​​ನಿಂದ ಇನ್ನೂ ಒಬ್ಬರು ಚೇತರಿಸಿಕೊಂಡಿದ್ದು ಒಟ್ಟು 7,516 ಮಂದಿ ಈವರೆಗೆ ಚೇತರಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಹೊಸ ಸಾವು ಸಂಭವಿಸದ ಕಾರಣ ಕೊವಿಡ್-19 ಸಾವಿನ ಸಂಖ್ಯೆ 129 ಆಗಿದೆ.

ಕೊವಿಡ್-19 ರ ಹೊಸ AY.4.2 ರೂಪಾಂತರವು ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರವನ್ನು ತಲುಪಿದೆ. ಇದು ಡೆಲ್ಟಾ ಪ್ಲಸ್ ರೂಪಾಂತರಿ ಕುಟುಂಬಕ್ಕೆ ಸೇರಿದೆ.

ಇದನ್ನೂ ಓದಿ: ಮಡಿಕೇರಿ: ನವೋದಯ ವಿದ್ಯಾಲಯದಲ್ಲಿ ಒಟ್ಟು 31 ಮಕ್ಕಳಿಗೆ ಕೊರೊನಾ ದೃಢ; ಶಾಲೆ ಸೀಲ್​ಡೌನ್

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?