ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 13,451 ಹೊಸ ಕೊವಿಡ್-19 ಪ್ರಕರಣಗಳು ಮತ್ತು 585 ಸಾವುಗಳು ವರದಿಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 3,42,15,653 ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ತಿಳಿಸಿದೆ.ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ವರದಿಯಾದ ಹೊಸ ಸೋಂಕುಗಳ ಪೈಕಿ ಕೇರಳದಲ್ಲಿ 7,163 ಹೊಸ ಪ್ರಕರಣಗಳು ವರದಿಯಾಗಿವೆ.ಮಹಾರಾಷ್ಟ್ರದಲ್ಲಿ 1,485 ಪ್ರಕರಣಗಳು ಮತ್ತು 38 ಸಾವುಗಳು ವರದಿ ಆಗಿದೆ. ಇದರೊಂದಿಗೆ, ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 1,62,661ಕ್ಕೆ ತಲುಪಿದೆ, ಇದು 242 ದಿನಗಳಲ್ಲಿ ಕಡಿಮೆ. ಸಕ್ರಿಯ ಪ್ರಕರಣಗಳು ಒಟ್ಟು ಪ್ರಕರಣಗಳಲ್ಲಿ ಶೇಕಡಾ 0.48 ರಷ್ಟಿದೆ, ಇದು ಮಾರ್ಚ್ 2020 ರಿಂದ ಕಡಿಮೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಅಕ್ಟೋಬರ್ 27 ರವರೆಗೆ ಪರೀಕ್ಷಿಸಲಾದ ಒಟ್ಟು ಮಾದರಿಗಳ ಸಂಖ್ಯೆ 60,44,98,405. ನಿನ್ನೆ 12,90,900 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಹೇಳಿದೆ.
COVID19 | India reports 16,156 new cases, 733 deaths in the last 24 hours; Active caseload stands at 1,60,989: Ministry of Health and Family Welfare pic.twitter.com/7RCXC5xQqx
— ANI (@ANI) October 28, 2021
ಅಂಡಮಾನ್ ಮತ್ತು ನಿಕೋಬಾರ್ ನಲ್ಲಿ 2 ಹೊಸ ಪ್ರಕರಣ ಪತ್ತೆ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕೇಂದ್ರಾಡಳಿತ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಎರಡು ಹೊಸ ಕೊವಿಡ್ ಪ್ರಕರಣಗಳನ್ನು ವರದಿ ಮಾಡಿದ್ದು ಇಲ್ಲಿ ಪ್ರಕರಣಗಳ ಸಂಖ್ಯೆ ಇದು 7,650 ಕ್ಕೆ ಏರಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಇಲ್ಲಿ ಭಾನುವಾರ, ಸೋಮವಾರ ಮತ್ತು ಮಂಗಳವಾರ ಯಾವುದೇ ಕೊವಿಡ್ ಪ್ರಕರಣ ದಾಖಲಾಗಿಲ್ಲ. ಕೇಂದ್ರಾಡಳಿತ ಪ್ರದೇಶವು ಈಗ ಐದು ಸಕ್ರಿಯ ಕೊವಿಡ್ ಪ್ರಕರಣಗಳನ್ನು ಹೊಂದಿದೆ ಮತ್ತು ಎಲ್ಲಾ ರೋಗಿಗಳು ದಕ್ಷಿಣ ಅಂಡಮಾನ್ ಜಿಲ್ಲೆಯಲ್ಲಿದ್ದಾರೆ. ಉತ್ತರ ಮತ್ತು ಮಧ್ಯ ಅಂಡಮಾನ್ ಮತ್ತು ನಿಕೋಬಾರ್ ಕೊರೊನಾವೈರಸ್ ಮುಕ್ತವಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕೊವಿಡ್ನಿಂದ ಇನ್ನೂ ಒಬ್ಬರು ಚೇತರಿಸಿಕೊಂಡಿದ್ದು ಒಟ್ಟು 7,516 ಮಂದಿ ಈವರೆಗೆ ಚೇತರಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಕಳೆದ 24 ಗಂಟೆಗಳಲ್ಲಿ ಯಾವುದೇ ಹೊಸ ಸಾವು ಸಂಭವಿಸದ ಕಾರಣ ಕೊವಿಡ್-19 ಸಾವಿನ ಸಂಖ್ಯೆ 129 ಆಗಿದೆ.
ಕೊವಿಡ್-19 ರ ಹೊಸ AY.4.2 ರೂಪಾಂತರವು ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತೆಲಂಗಾಣ, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರವನ್ನು ತಲುಪಿದೆ. ಇದು ಡೆಲ್ಟಾ ಪ್ಲಸ್ ರೂಪಾಂತರಿ ಕುಟುಂಬಕ್ಕೆ ಸೇರಿದೆ.
ಇದನ್ನೂ ಓದಿ: ಮಡಿಕೇರಿ: ನವೋದಯ ವಿದ್ಯಾಲಯದಲ್ಲಿ ಒಟ್ಟು 31 ಮಕ್ಕಳಿಗೆ ಕೊರೊನಾ ದೃಢ; ಶಾಲೆ ಸೀಲ್ಡೌನ್