Coronavirus cases in India: ಸತತ ಎರಡನೇ ದಿನ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 20,000 ಕ್ಕಿಂತ ಕಡಿಮೆ, 378 ಮಂದಿ ಸಾವು

Covid 19: ಕಳೆದ ಎರಡು ದಿನಗಳಿಂದ ದೇಶವು 20,000 ಕ್ಕಿಂತ ಕಡಿಮೆ ಪ್ರಕರಣಗಳನ್ನು ವರದಿ ಮಾಡುತ್ತಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2.82 ಲಕ್ಷಕ್ಕೆ ಇಳಿದಿದೆ. ಅತಿ ಹೆಚ್ಚು ಪ್ರಕರಣಗಳನ್ನು ನೀಡುತ್ತಿರುವ ಕೇರಳದಲ್ಲಿ ಮಂಗಳವಾರ 11,196 ಪ್ರಕರಣಗಳು ಮತ್ತು 149 ಸಾವುಗಳು ವರದಿ ಆಗಿದೆ.

Coronavirus cases in India: ಸತತ ಎರಡನೇ ದಿನ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 20,000 ಕ್ಕಿಂತ ಕಡಿಮೆ,  378 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 29, 2021 | 10:40 AM

ದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 18,870 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಮತ್ತು 378 ಸಾವುಗಳು ವರದಿಯಾಗಿವೆ. ಕಳೆದ ಎರಡು ದಿನಗಳಿಂದ ದೇಶವು 20,000 ಕ್ಕಿಂತ ಕಡಿಮೆ ಪ್ರಕರಣಗಳನ್ನು ವರದಿ ಮಾಡುತ್ತಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2.82 ಲಕ್ಷಕ್ಕೆ ಇಳಿದಿದೆ. ಅತಿ ಹೆಚ್ಚು ಪ್ರಕರಣಗಳನ್ನು ನೀಡುತ್ತಿರುವ ಕೇರಳದಲ್ಲಿ ಮಂಗಳವಾರ 11,196 ಪ್ರಕರಣಗಳು ಮತ್ತು 149 ಸಾವುಗಳು ವರದಿಯಾಗಿದ್ದರೆ, ಮಹಾರಾಷ್ಟ್ರ ಮತ್ತು ಹರ್ಯಾಣ ತಲಾ 64 ಸಾವು ವರದಿ ಮಾಡಿದೆ. ಕೊವಿಡ್ -19 ವ್ಯಾಕ್ಸಿನೇಷನ್ ಡ್ರೈವ್ ಅನ್ನು ಜಾರಿಗೆ ತಂದ ಎಂಟು ತಿಂಗಳ ನಂತರ, ಭಾರತವು ಮಂಗಳವಾರ ಲಸಿಕೆಯ ಎರಡೂ ಡೋಸ್‌ಗಳನ್ನು ಅಂದಾಜು ವಯಸ್ಕ ಜನಸಂಖ್ಯೆಯ ಸುಮಾರು ಶೇ25 ರಷ್ಟು ಪೂರ್ಣಗೊಳಿಸಿತು.

ತಾತ್ಕಾಲಿಕ ಮಾಹಿತಿಯ ಪ್ರಕಾರ, ಮಂಗಳವಾರ 53 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದ್ದು, ಒಟ್ಟು ಸಂಖ್ಯೆಯನ್ನು 87.59 ಕೋಟಿಗೆ ತಲುಪಿದೆ. ಮಂಗಳವಾರದ ಲಸಿಕೆಗಳೊಂದಿಗೆ, ಅಂದಾಜು ವಯಸ್ಕ ಜನಸಂಖ್ಯೆಯ ಶೇ68 ರಷ್ಟು ಜನರು ತಮ್ಮ ಮೊದಲ ಡೋಸ್ ಪಡೆದಿದ್ದಾರೆ ಮತ್ತು ಶೇ 24.61ರಷ್ಟು ಮಂದಿ ಸಂಪೂರ್ಣವಾಗಿ ಲಸಿಕೆಯನ್ನು ಪಡೆದಿದ್ದಾರೆ.

ಏತನ್ಮಧ್ಯೆ, ಕೇಂದ್ರವು ಅಂತಾರಾಷ್ಟ್ರೀಯ ವಿಮಾನಗಳ ಮೇಲಿನ ನಿಷೇಧವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಿದೆ. ಆದಾಗ್ಯೂ, ಕೇಂದ್ರವು “ಅಂತರರಾಷ್ಟ್ರೀಯ ನಿಗದಿತ ವಿಮಾನಗಳನ್ನು ಆಯ್ದ ಮಾರ್ಗಗಳಲ್ಲಿ  ಪ್ರಾಧಿಕಾರವು ಕೇಸ್ ಟು ಕೇಸ್ ಆಧಾರದ ಮೇಲೆ ಅನುಮತಿಸಬಹುದು” ಎಂದು ಹೇಳಿದೆ. ಕೇಂದ್ರವು ಮಂಗಳವಾರ ರಾಷ್ಟ್ರವ್ಯಾಪಿ ಕೊವಿಡ್ ನಿಯಂತ್ರಣ ಕ್ರಮಗಳನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಿದೆ.

ತಮಿಳುನಾಡಿನಲ್ಲಿ ವಿದ್ಯಾರ್ಥಿಗಳಿಗೆ ನವೆಂಬರ್ 1 ರಿಂದ ಶಾಲೆ ಶುರು ಒಂದೂವರೆ ವರ್ಷದ ನಂತರ 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತರಗತಿಗಳು ನವೆಂಬರ್ 1 ರಿಂದ ಪುನರಾರಂಭಗೊಳ್ಳಲಿವೆ ಎಂದು ತಮಿಳುನಾಡು ಸರ್ಕಾರ ಮಂಗಳವಾರ ಹೇಳಿದೆ. ಕೊವಿಡ್ -19 ಸಾಂಕ್ರಾಮಿಕ ರೋಗವನ್ನು ಎದುರಿಸಲು ನಡೆಯುತ್ತಿರುವ ಕ್ರಮಗಳನ್ನು ಪರಿಶೀಲಿಸಲು ಮುಖ್ಯಮಂತ್ರಿ ಎಂ. ಕೆ.ಸ್ಟಾಲಿನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ, ಸರ್ಕಾರವು ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಮತ್ತು ಧಾರ್ಮಿಕ ಸಭೆಗಳ ಮೇಲೆ ನಿಷೇಧವನ್ನು ಮುಂದುವರಿಸುವುದಾಗಿ ಹೇಳಿದೆ.

ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಪೂಜಾ ಸ್ಥಳಗಳನ್ನು ಮುಚ್ಚಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ವೈದ್ಯಕೀಯ ತಜ್ಞರು, ಶಿಕ್ಷಣತಜ್ಞರು ಮತ್ತು ಪೋಷಕರ ಪ್ರತಿಕ್ರಿಯೆಯನ್ನು ಪರಿಗಣಿಸಿ, ಎಲ್ಲಾ ಶಾಲೆಗಳಲ್ಲಿನ ಮಕ್ಕಳಿಗೆ ದೈಹಿಕ ತರಗತಿಗಳು (ಸರ್ಕಾರ ನಡೆಸುತ್ತಿರುವ, ರಾಜ್ಯ-ಅನುದಾನಿತ ಮತ್ತು ಇತರ ಮಂಡಳಿಗಳು) ನವೆಂಬರ್ 1 ರಿಂದ ಪುನರಾರಂಭಗೊಳ್ಳಲಿದೆ ಎಂದು ಸರ್ಕಾರ ಹೇಳಿದೆ.

ವೈರಸ್ ಹರಡುವುದನ್ನು ತಡೆಗಟ್ಟಲು ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನಗಳನ್ನು ಅನುಸರಿಸುವ ಮೂಲಕ ತರಗತಿಗಳನ್ನು ನಡೆಸಲಾಗು%A

ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ