Covid Cases In India: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 756 ಹೊಸ ಕೊರೊನಾ ಪ್ರಕರಣಗಳು ಪತ್ತೆ

|

Updated on: Jan 07, 2024 | 12:54 PM

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 756 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಸಕ್ರಿಯ ಪ್ರಕರಣಗಳು 40,49ಕ್ಕೆ ಏರಿಕೆಯಾಗಿದೆ. ನಿನ್ನೆಗೆ ಹೋಲಿಸಿದರೆ 138 ಪ್ರಕರಣಗಳು ಇಳಿಕೆಯಾದಂತಾಗಿದೆ. ಕಳೆದ ಒಂದು ದಿನದಲ್ಲಿ ಐವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

Covid Cases In India: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 756 ಹೊಸ ಕೊರೊನಾ ಪ್ರಕರಣಗಳು ಪತ್ತೆ
ಕೊರೊನಾವೈರಸ್
Follow us on

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 756 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಸಕ್ರಿಯ ಪ್ರಕರಣಗಳು 40,49ಕ್ಕೆ ಏರಿಕೆಯಾಗಿದೆ. ನಿನ್ನೆಗೆ ಹೋಲಿಸಿದರೆ 138 ಪ್ರಕರಣಗಳು ಇಳಿಕೆಯಾದಂತಾಗಿದೆ. ಕಳೆದ ಒಂದು ದಿನದಲ್ಲಿ ಐವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಕೇರಳ, ಮಹಾರಾಷ್ಟ್ರದಲ್ಲಿ ತಲಾ 2 ಹಾಗೂ ಜಮ್ಮು ಕಾಶ್ಮೀರದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ 154 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ, ಇಬ್ಬರು ಮೃತಪಟ್ಟಿದ್ದಾರೆ. ಇದೀಗ 139 ಜೆಎನ್​.1 ಪ್ರಕರಣಗಳು ಪತ್ತೆಯಾಗಿವೆ.
14,790 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ, ಇದರಲ್ಲಿ 12,369 ರಾಪಿಡ್ ಆಂಟಿಜೆನ್ ಪರೀಕ್ಷೆ ಮತ್ತು 2421 ಆರ್​ಟಿಪಿಸಿಆರ್​ ವಿಧಾನ ಮೂಲಕ ಪರೀಕ್ಷೆ ನಡೆಸಲಾಗಿದೆ.

ಮುಂಬೈನಲ್ಲಿ ಕಳೆದ ವರ್ಷ ಆಗಸ್ಟ್​ನಲ್ಲಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದ ಬಳಿಕ ಇದೀಗ ಮತ್ತೊಂದು ಸಾವು ಸಂಭವಿಸಿದೆ. ಶನಿವಾರ 29 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ, ಕೋಲ್ಕತ್ತಾದ ಕನಿಷ್ಠ ಮೂರು ಖಾಸಗಿ ಆಸ್ಪತ್ರೆಗಳಲ್ಲಿ ಈಗ 13 ಕೋವಿಡ್ ರೋಗಿಗಳನ್ನು ದಾಖಲಿಸಲಾಗಿದೆ.

ಮತ್ತಷ್ಟು ಓದಿ:ರಾಜ್ಯದಲ್ಲಿ ಇಂದು 297 ಜನರಿಗೆ ಕೊರೊನಾ ಸೋಂಕು ದೃಢ; ಬೆಂಗಳೂರಿನಲ್ಲೆಷ್ಟು ಗೊತ್ತಾ?

ಅದರಲ್ಲಿ ಹೆಚ್ಚಿನವರು ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ, ರಾಜ್ಯದಲ್ಲಿ ಈಗ 100 ಕ್ಕೂ ಹೆಚ್ಚು ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಕಳೆದ ತಿಂಗಳು, ಆರೋಗ್ಯ ಇಲಾಖೆಯು ಜೀನೋಮ್ ಅನುಕ್ರಮಕ್ಕಾಗಿ 30 ಮಾದರಿಗಳನ್ನು ಕಳುಹಿಸಿದೆ.
ಭಾರತದಲ್ಲಿ ಇಲ್ಲಿಯವರೆಗೆ 220,67,81,345 ಲಸಿಕೆಗಳನ್ನು ನೀಡಲಾಗಿದೆ.

ಕರ್ನಾಟಕದಲ್ಲಿ ಒಟ್ಟು 297 ಸಕಾರಾತ್ಮಕ ಪ್ರಕರಣಗಳು ವರದಿಯಾಗಿದೆ, 4 ಗಂಟೆಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಆರೋಗ್ಯ ಮತ್ತು ಕಲ್ಯಾಣ ಇಲಾಖೆಯ ವರದಿಯ ಪ್ರಕಾರ ಒಟ್ಟು ಸಕ್ರಿಯ ರೋಗಿಗಳು 1136 ಇದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ