Omicron: ದೇಶದಲ್ಲಿ ಒಮಿಕ್ರಾನ್ ಉಪತಳಿ BF.7 ಮೂರು ಪ್ರಕರಣ ಪತ್ತೆ; ಭಯಬೇಡ, ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದ ಕೇಂದ್ರ ಸರ್ಕಾರ

ಚೀನಾದಲ್ಲಿ ವರದಿಯಾಗಿರುವ ಪ್ರಕರಣಗಳಲ್ಲಿ ಹೆಚ್ಚಿನದ್ದು BF.7 ಉಪತಳಿಯಿಂದಾಗಿ ಉಂಟಾದ ಕೋವಿಡ್ ಪ್ರಕರಣಗಳಾಗಿವೆ. ಬೀಜಿಂಗ್ ಮತ್ತು ಇನ್ನಿತರ ನಗರಗಳಲ್ಲಿಯೂ ಕೋವಿಡ್ ಉಲ್ಬಣಕ್ಕೆ ಇದೇ ಉಪತಳಿ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ

Omicron: ದೇಶದಲ್ಲಿ ಒಮಿಕ್ರಾನ್ ಉಪತಳಿ BF.7 ಮೂರು ಪ್ರಕರಣ ಪತ್ತೆ; ಭಯಬೇಡ, ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದ ಕೇಂದ್ರ ಸರ್ಕಾರ
ಪ್ರಾತಿನಿಧಿಕ ಚಿತ್ರImage Credit source: PTI
Follow us
TV9 Web
| Updated By: Digi Tech Desk

Updated on:Dec 21, 2022 | 8:17 PM

ಇಲ್ಲಿಯವರಗೆ ಭಾರತದಲ್ಲಿ ಒಮಿಕ್ರಾನ್ ಉಪತಳಿ BF.7ನ (Omicron subvariant BF.7) ಮೂರು ಪ್ರಕರಣಗಳು ಪತ್ತೆಯಾಗಿವೆ. ಎರಡು ಪ್ರಕರಣ ಗುಜರಾತಿನಲ್ಲಿ ಪತ್ತೆಯಾಗಿದ್ದು ಒಂದು ಒಡಿಶಾದಲ್ಲಿ ಪತ್ತೆಯಾಗಿದೆ ಎಂದು ಪಿಟಿಐ ವರದಿ ಮಾಡಿದೆ.ಚೀನಾದಲ್ಲಿ ಕೋವಿಡ್ ಪ್ರಕರಣಗಳು (Covid-19) ಉಲ್ಬಣವಾದ ಹೊತ್ತಲ್ಲೇ ದೇಶದಲ್ಲಿ ಹೊಸ ಪ್ರಕರಣ ಪತ್ತೆಯಾಗಿದೆ. ಗುಜರಾತಿನಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಒಮಿಕ್ರಾನ್ ಉಪತಳಿ BF.7 ಪತ್ತೆಯಾಗಿರುವುದಾಗಿ ಗುಜರಾತ್ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್ ಹೇಳಿತ್ತು. ಇಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ (Mansukh mandaviya) ಪರಿಶೀಲನಾ ಸಭೆ ನಡೆಸಿದ್ದು, ದೇಶದಲ್ಲಿ ಕೋವಿಡ್ ಪ್ರಕರಣದಲ್ಲಿ ಹೆಚ್ಚಳವೇನೂ ಆಗಿಲ್ಲ. ಆದರೆ ಈಗಿರುವ ಮತ್ತು ಮುಂಬರುವ ರೂಪಾಂತರಿಗಳನ್ನು ಪತ್ತೆ ಹಚ್ಚಲು ಕಟ್ಟುನಿಟ್ಟಿನ ನಿಗಾ ಬೇಕು ಎಂದು ಹೇಳಿದ್ದಾರೆ. ಚೀನಾದಲ್ಲಿ ವರದಿಯಾಗಿರುವ ಪ್ರಕರಣಗಳಲ್ಲಿ ಹೆಚ್ಚಿನದ್ದು BF.7 ಉಪತಳಿಯಿಂದಾಗಿ ಉಂಟಾದ ಕೋವಿಡ್ ಪ್ರಕರಣಗಳಾಗಿವೆ. ಬೀಜಿಂಗ್ ಮತ್ತು ಇನ್ನಿತರ ನಗರಗಳಲ್ಲಿಯೂ ಕೋವಿಡ್ ಉಲ್ಬಣಕ್ಕೆ ಇದೇ ಉಪತಳಿ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಚೀನಾದಲ್ಲಿ BF.7 ನ ಹೆಚ್ಚಿನ ಪ್ರಸರಣವು ಹಿಂದಿನ ಸೋಂಕಿನಿಂದ ಚೀನೀ ಜನಸಂಖ್ಯೆಯಲ್ಲಿ ಕಡಿಮೆ ಮಟ್ಟದ ರೋಗನಿರೋಧಕ ಶಕ್ತಿ ಮತ್ತು ಪ್ರಾಯಶಃ ವ್ಯಾಕ್ಸಿನೇಷನ್ ಕೂಡ ಕಾರಣವಾಗಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಂಗಳವಾರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್  ಎಲ್ಲಾ ರಾಜ್ಯಗಳಿಗೆ ಬರೆದ ಪತ್ರದಲ್ಲಿ ಪಾಸಿಟಿವ್ ಪ್ರಕರಣಗಳ ಮಾದರಿಗಳ ಜೀನೋಮ್ ಅನುಕ್ರಮವನ್ನು ಹೆಚ್ಚಿಸಲು ಒತ್ತಾಯಿಸಿದ್ದಾರೆ. ಪ್ರಸ್ತುತ ಚೀನಾ ಜೊತೆಗೆ ಜಪಾನ್, ಅಮೆರಿಕ, ಕೊರಿಯಾ ಮತ್ತು ಬ್ರೆಜಿಲ್ ದೇಶಗಳಲ್ಲಿಯೂ ಕೊರೊನಾ ಸೋಂಕು ವ್ಯಾಪಿಸಿದೆ. ಈ ಹಿನ್ನೆಲೆಯಲ್ಲಿ ಜಿನೋಮ್ ಸೀಕ್ವೆನ್ಸಿಂಗ್ ಬಗ್ಗೆ ಭಾರತ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವು ಮಹತ್ವ ಪಡೆದಿದೆ. ಜಿನೋಮ್ ಸೀಕ್ವೆನ್ಸಿಂಗ್​ ಪ್ರಮಾಣವು ಹೆಚ್ಚಾದರೆ ಮಾತ್ರ ದೇಶದಲ್ಲಿ ಹರಡುತ್ತಿರುವ ಹೊಸ ರೂಪಾಂತರಿಗಳನ್ನು ಪತ್ತೆ ಮಾಡಲು ಹಾಗೂ ಸಮುದಾಯ ಆರೋಗ್ಯಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಸಕಾಲದಲ್ಲಿ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯಗಳಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಕೋವಿಡ್ ಇನ್ನೂ ಮುಗಿದಿಲ್ಲ, ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ನಾವು ಸಿದ್ಧ: ಮನ್ಸುಖ್ ಮಾಂಡವಿಯ

ಕೊವಿಡ್ ತಪಾಸಣೆಯನ್ನು ಹೆಚ್ಚಿಸಬೇಕು. ಪಾಸಿಟಿವ್ ಬಂದ ಎಲ್ಲ ಮಾದರಿಗಳನ್ನೂ ಜಿನೋಮ್ ಸೀಕ್ವೆನ್ಸಿಂಗ್​ಗಾಗಿ ಇನ್​ಸಾಕಾಗ್ ಪ್ರಯೋಗಾಲಯಗಳಿಗೆ (lGSLs – INSACOG Genome Sequencing Laboratories) ಕಡ್ಡಾಯವಾಗಿ ಕಳುಹಿಸಿಕೊಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಚೀನಾ ಸೇರಿದಂತೆ ವಿಶ್ವದ ಇತರ ದೇಶಗಳ ಕೊವಿಡ್ ಸೋಂಕು ಪ್ರಕರಣಗಳ ಅಂಕಿಅಂಶ ಮತ್ತು ಆರೋಗ್ಯ ಪರಿಸ್ಥಿತಿಯನ್ನು ಗಮನಿಸಲು ಕೇಂದ್ರ ಸರ್ಕಾರವು ಆಂತರಿಕ ಕಾರ್ಯಪಡೆಯೊಂದನ್ನು ರಚಿಸಿದೆ. ಈ ಸಮಿತಿಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿದ್ದು, ಭಾರತದ ಮೇಲಿನ ಪರಿಣಾಮ ಮತ್ತು ಸ್ಥಳೀಯವಾಗಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಕಣ್ಗಾವಲು ಇರಿಸಲು, ತುರ್ತು ನಿರ್ಧಾರ ತೆಗೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

ವರದಿಗಳ ಪ್ರಕಾರ, ರೂಪಾಂತರವು ಈಗಾಗಲೇ ಜರ್ಮನಿ, ಡೆನ್ಮಾರ್ಕ್, ಬೆಲ್ಜಿಯಂ ಮತ್ತು ಫ್ರಾನ್ಸ್‌ನಲ್ಲಿ ಪತ್ತೆಯಾಗಿದೆ. BF.7 ಒಮಿಕ್ರಾನ್ ರೂಪಾಂತರದ BA.5 ನ ಉಪ ತಳಿಯಾಗಿದ್ದು ಸೋಂಕನ್ನು ಉಂಟುಮಾಡುವ ಹೆಚ್ಚಿನ ಸಾಮರ್ಥ್ಯವಿರುವ ಮತ್ತು ಸುಲಭವಾಗಿ ಹರಡುವ ತಳಿಯಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:00 pm, Wed, 21 December 22