Coronavirus cases in India: ಭಾರತದಲ್ಲಿ 15,786 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

Covid 19: ಗುರುವಾರ 13,24,263 ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದುವರೆಗೆ ದೇಶದಲ್ಲಿ ಕೊವಿಡ್ -19 ಪತ್ತೆಗಾಗಿ ನಡೆಸಿದ ಒಟ್ಟು 59,70,66,481 ಪರೀಕ್ಷೆಗಳನ್ನು ಮಾಡಲಾಗಿದೆ. ದೈನಂದಿನ ಧನಾತ್ಮಕ ದರವು 1.19 ಶೇಕಡಾ ದಾಖಲಾಗಿದೆ. ಕಳೆದ 53 ದಿನಗಳಿಂದ ಇದು ಶೇಕಡಾ ಮೂರು ಕ್ಕಿಂತ ಕಡಿಮೆ ಇದೆ.

Coronavirus cases in India: ಭಾರತದಲ್ಲಿ 15,786 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ಪ್ರಾತಿನಿಧಿಕ ಚಿತ್ರ

ದೆಹಲಿ: ಭಾರತದಲ್ಲಿ ಒಂದೇ ದಿನ 15,786 ಹೊಸ ಕೊವಿಡ್ -19 (Covid 19)  ಪ್ರಕರಣಗಳ ಏರಿಕೆಯನ್ನು ಕಂಡಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 3,41,43,236 ಕ್ಕೆ ತಲುಪಿದೆ. ಅದೇ ವೇಳೆ ಸಕ್ರಿಯ ಪ್ರಕರಣಗಳು 1,75,745 ಕ್ಕೆ ಇಳಿದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಬೆಳಿಗ್ಗೆ 8 ಗಂಟೆಗೆ ನವೀಕರಿಸಿದ ಮಾಹಿತಿಯ ಪ್ರಕಾರ 231 ಮಂದಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 4,53,042 ಕ್ಕೆ ಏರಿದೆ. ಹೊಸ ಕೊರೊನಾವೈರಸ್ ಸೋಂಕಿನ ದೈನಂದಿನ ಏರಿಕೆ 28 ದಿನಗಳವರೆಗೆ 30,000 ಕ್ಕಿಂತ ಕಡಿಮೆಯಿದೆ ಮತ್ತು 50,000 ಕ್ಕಿಂತ ಕಡಿಮೆ ದೈನಂದಿನ ಪ್ರಕರಣಗಳು ಸತತವಾಗಿ 117 ದಿನಗಳವರೆಗೆ ವರದಿಯಾಗಿವೆ.  ಸಕ್ರಿಯ ಪ್ರಕರಣಗಳು 1,75,745 ಕ್ಕೆ ಏರಿಕೆಯಾಗಿದ್ದು, ಒಟ್ಟು ಸೋಂಕುಗಳಲ್ಲಿ 0.51 ಶೇಕಡಾ ಆಗಿದೆ. ಇದು ಮಾರ್ಚ್ 2020 ರ ನಂತರ ಅತಿ ಕಡಿಮೆ. ರಾಷ್ಟ್ರೀಯ ಕೊವಿಡ್ -19 ಚೇತರಿಕೆಯ ಪ್ರಮಾಣವು 98.16 ಶೇಕಡಾ ದಾಖಲಾಗಿದೆ, ಇದು ಮಾರ್ಚ್ 2020 ರ ನಂತರ ಅತಿ ಹೆಚ್ಚು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

24 ಗಂಟೆಗಳ ಅವಧಿಯಲ್ಲಿ ಒಟ್ಟು ಸಕ್ರಿಯ ಕೊವಿಡ್ -19 ಪ್ರಕರಣಗಳಲ್ಲಿ 3,086 ಪ್ರಕರಣಗಳ ಇಳಿಕೆ ದಾಖಲಾಗಿದೆ.

ಅಲ್ಲದೆ, ಗುರುವಾರ 13,24,263 ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದುವರೆಗೆ ದೇಶದಲ್ಲಿ ಕೊವಿಡ್ -19 ಪತ್ತೆಗಾಗಿ ನಡೆಸಿದ ಒಟ್ಟು 59,70,66,481 ಪರೀಕ್ಷೆಗಳನ್ನು ಮಾಡಲಾಗಿದೆ. ದೈನಂದಿನ ಧನಾತ್ಮಕ ದರವು 1.19 ಶೇಕಡಾ ದಾಖಲಾಗಿದೆ. ಕಳೆದ 53 ದಿನಗಳಿಂದ ಇದು ಶೇಕಡಾ ಮೂರು ಕ್ಕಿಂತ ಕಡಿಮೆ ಇದೆ. ಸಾಪ್ತಾಹಿಕ ಧನಾತ್ಮಕ ದರವು ಸಹ 1.31 ಶೇಕಡಾ ದಾಖಲಾಗಿದೆ. ಕಳೆದ 119 ದಿನಗಳಿಂದ ಇದು ಶೇಕಡಾ ಮೂರು ಕ್ಕಿಂತ ಕಡಿಮೆ ಇದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಕಾಯಿಲೆಯಿಂದ ಚೇತರಿಸಿಕೊಂಡ ಜನರ ಸಂಖ್ಯೆ 3,35,14,449 ಕ್ಕೆ ಏರಿದೆ, ಆದರೆ ಪ್ರಕರಣದ ಸಾವಿನ ಪ್ರಮಾಣವು 1.33 ಶೇಕಡಾ ದಾಖಲಾಗಿದೆ. ರಾಷ್ಟ್ರವ್ಯಾಪಿ ಕೊವಿಡ್ -19 ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ ನೀಡಲಾದ ಒಟ್ಟು ಲಸಿಕೆ ಪ್ರಮಾಣಗಳು 100.59 ಕೋಟಿ ಮೀರಿದೆ.

ಭಾರತದ ಕೊವಿಡ್ ಪ್ರಕರಣಗಳ ಸಂಖ್ಯೆ ಆಗಸ್ಟ್ 7, 2020 ರಂದು 20 ಲಕ್ಷದ ಗಡಿ ದಾಟಿದೆ, ಆಗಸ್ಟ್ 23 ರಂದು 30 ಲಕ್ಷ, ಸೆಪ್ಟೆಂಬರ್ 5 ರಂದು 40 ಲಕ್ಷ ಮತ್ತು ಸೆಪ್ಟೆಂಬರ್ 16 ರಂದು 50 ಲಕ್ಷ. ಸೆಪ್ಟೆಂಬರ್ 28 ರಂದು 60 ಲಕ್ಷ, ಅಕ್ಟೋಬರ್ 11 ರಂದು 70 ಲಕ್ಷ ದಾಟಿದೆ. ಅಕ್ಟೋಬರ್ 29 ರಂದು 80 ಲಕ್ಷ ನವೆಂಬರ್ 20 ರಂದು 90 ಲಕ್ಷ ಮತ್ತು ಡಿಸೆಂಬರ್ 19 ರಂದು ಒಂದು ಕೋಟಿ ಗಡಿ ದಾಟಿತು. ಭಾರತ ಮೇ 4 ರಂದು ಎರಡು ಕೋಟಿ ಮತ್ತು ಜೂನ್ 23 ರಂದು ಮೂರು ಕೋಟಿ ದಾಟಿದೆ.

ಇದನ್ನೂ ಓದಿ: ಭಾರತದಲ್ಲಿ ಕೊವಿಡ್‌ಗೆ 50 ಲಕ್ಷ ಜನ ಬಲಿ, ಆದ್ರೆ 100 ಕೋಟಿ ಡೋಸ್ ನೀಡಿದ್ದಕ್ಕೆ ಸಂಭ್ರಮಿಸುತ್ತಿದ್ದಾರೆ: ಸಿದ್ದರಾಮಯ್ಯ ವ್ಯಂಗ್ಯ

Click on your DTH Provider to Add TV9 Kannada