3 ತಿಂಗಳ ನಂತರ ಅಬ್ಬರಿಸುತ್ತಿದೆ ಕೊರೊನಾ, ಒಂದೇ ದಿನ 26 ಸಾವಿರಕ್ಕೂ ಹೆಚ್ಚು ಕೇಸ್​ಗಳು; ಮತ್ತೊಮ್ಮೆ ಲಾಕ್​ಡೌನ್ ಅನಿವಾರ್ಯ?

Covid-19 Updates: 24 ಗಂಟೆಯಲ್ಲಿ 118 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1,58,725. ನಿನ್ನೆ ಒಂದೇ ದಿನ 161 ಜನರು ಕೊವಿಡ್​ನಿಂದ ಸಾವನ್ನಪ್ಪಿದ್ದರು.

3 ತಿಂಗಳ ನಂತರ ಅಬ್ಬರಿಸುತ್ತಿದೆ ಕೊರೊನಾ, ಒಂದೇ ದಿನ 26 ಸಾವಿರಕ್ಕೂ ಹೆಚ್ಚು ಕೇಸ್​ಗಳು; ಮತ್ತೊಮ್ಮೆ ಲಾಕ್​ಡೌನ್ ಅನಿವಾರ್ಯ?
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on:Mar 15, 2021 | 11:34 AM

ದೇಶದಲ್ಲಿ ಮತ್ತೊಮ್ಮೆ ಲಾಕ್​ಡೌನ್ (Lockdown)​ ಜಾರಿಮಾಡುವ ಪರಿಸ್ಥಿತಿ ಎದುರಾಗುತ್ತಿದೆಯಾ? ದಿನದಿನವೂ ಏರುತ್ತಿರುವ ಕೊವಿಡ್ (Covid 19)​ ಸೋಂಕಿತರ ಸಂಖ್ಯೆಯನ್ನು ಗಮನಿಸಿದಾಗ ಹೀಗೊಂದು ಆತಂಕ ನಿಶ್ಚಿತವಾಗಿ ಮೂಡುತ್ತದೆ. ಕಳೆದ 24ಗಂಟೆಯಲ್ಲಿ 26,291 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಕಳೆದ ಮೂರು ತಿಂಗಳಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಪ್ರಮಾಣದ ಸೋಂಕಿತರು ಒಂದೇ ದಿನ ಪತ್ತೆಯಾಗಿದ್ದಾರೆ. 2020ರ ಡಿಸೆಂಬರ್​ 20ರಂದು 26,624 ಕೊರೊನಾ ಸೋಂಕಿನ ಕೇಸ್​ಗಳು ದಾಖಲಾಗಿದ್ದವು. ಅದಾದ ಬಳಿಕ ಮೊನ್ನೆ ಮಾರ್ಚ್​ 13ರಂದು 24 ಸಾವಿರ ಗಡಿದಾಟಿತ್ತು. ನಿನ್ನೆಯೂ ಸಹ 25,320 ಕೇಸ್​ ದಾಖಲಾಗಿತ್ತು. ನಿನ್ನೆಗಿಂತಲೂ ಇಂದು ಸಾವಿರಕ್ಕೂ ಹೆಚ್ಚು ಕೇಸ್​ಗಳು ದಾಖಲಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಫೆಬ್ರುವರಿ ಕೊನೇ ವಾರದಿಂದಲೂ ಒಂದು ದಿನದಲ್ಲಿ ದಾಖಲಾಗುವ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ದೇಶದ ಒಟ್ಟು ಸೋಂಕಿತರ ಸಂಖ್ಯೆ 1,13,85,339ಕ್ಕೆ ತಲುಪಿದೆ. ಅದರಲ್ಲಿ 2,19,262 ಸಕ್ರಿಯ ಪ್ರಕರಣಗಳಾಗಿವೆ. ಹಾಗೇ 24 ಗಂಟೆಯಲ್ಲಿ 118 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1,58,725. ನಿನ್ನೆ ಒಂದೇ ದಿನ 161 ಜನರು ಕೊವಿಡ್​ನಿಂದ ಸಾವನ್ನಪ್ಪಿದ್ದರು. ಇನ್ನು ಒಂದೇ ದಿನದಲ್ಲಿ 17,445 ಜನರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಅಲ್ಲಿಗೆ, ಒಟ್ಟಾರೆ ಚೇತರಿಕೆ ಕಂಡವರ ಸಂಖ್ಯೆ 1,10,07,352ರಷ್ಟಾಗಿದೆ.

ಭರದಿಂದ ಸಾಗುತ್ತಿದೆ ವ್ಯಾಕ್ಸಿನೇಶನ್​ ದೇಶದಲ್ಲಿ ಎರಡನೇ ಹಂತದ ಕೊರೊನಾ ಲಸಿಕೆ ವಿತರಣೆ ಅಭಿಯಾನ ಭರದಿಂದ ಸಾಗುತ್ತಿದೆ. ಜ.16ರಿಂದ ಮೊದಲ ಹಂತದಲ್ಲಿ, ಕೊವಿಡ್​ -19 ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿತ್ತು. ಅದಾದ ಬಳಿಕೆ 2ನೇ ಹಂತದ ಲಸಿಕೆ ವಿತರಣೆ ಫೆ.2ರಿಂದ ಶುರುವಾಗಿದೆ. ಸದ್ಯ 60ವರ್ಷ ಮೇಲ್ಪಟ್ಟವರಿಗೆ, 45 ವರ್ಷ ಮೇಲ್ಪಟ್ಟು, ಇತರೆ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಲಸಿಕೆ ನೀಡಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 2,99,08,038 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಹಾಗೇ ಇನ್ನೊಂದು ಕಡೆ ಕೊವಿಡ್​-19 ಟೆಸ್ಟ್​ ಕೂಡ ವೇಗವಾಗಿ ನಡೆಯುತ್ತಿದೆ. ಇಂದಿನವರೆಗೆ ಒಟ್ಟು 22,74,07,413 ಮಾದರಿಗಳನ್ನು ತಪಾಸಣೆ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.

ಇದನ್ನೂ ಓದಿ: ದೇಶದಲ್ಲಿ ಮತ್ತೆ ಕೊರೊನಾತಂಕ: ನಿನ್ನೆಗಿಂತಲೂ ಇಂದು ಹೆಚ್ಚು ಕೇಸ್​ಗಳು ದಾಖಲು..ಸಾವಿನ ಸಂಖ್ಯೆಯಲ್ಲೂ ಏರಿಕೆ

‘ಕುಂಭಮೇಳಕ್ಕೆ ಬರುವವರು ಕೊವಿಡ್​-19 ನೆಗೆಟಿವ್​ ರಿಪೋರ್ಟ್​ ತರುವ ಅಗತ್ಯವಿಲ್ಲ’ -ಉತ್ತರಾಖಂಡ ನೂತನ ಸಿಎಂ ತಿರತ್​ ಸಿಂಗ್​ ರಾವತ್​

Published On - 11:15 am, Mon, 15 March 21

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?