AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Volodymyr Zelensky: ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯಿಂದ ಪ್ರಧಾನಿ ಮೋದಿಗೆ ಪತ್ರ, ಸಹಾಯಕ್ಕೆ ಮನವಿ

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ(Volodymyr Zelensky)  ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಮಾನವೀಯ ಆಧಾರದಲ್ಲಿ ಸಹಾಯ ಮಾಡುವಂತೆ ಕೋರಿದ್ದಾರೆ.

Volodymyr Zelensky: ಉಕ್ರೇನ್​ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯಿಂದ ಪ್ರಧಾನಿ ಮೋದಿಗೆ ಪತ್ರ, ಸಹಾಯಕ್ಕೆ ಮನವಿ
ವೊಲೊಡಿಮಿರ್ ಝೆಲೆನ್ಸ್ಕಿ, ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Apr 12, 2023 | 9:40 AM

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ(Volodymyr Zelensky)  ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಮಾನವೀಯ ಆಧಾರದಲ್ಲಿ ಸಹಾಯ ಮಾಡುವಂತೆ ಕೋರಿದ್ದಾರೆ.  ಉಕ್ರೇನ್‌ನ ಉಪ ವಿದೇಶಾಂಗ ಸಚಿವ ಎಮಿನಿ ಝಪರೋವಾ ಅವರು ಭಾರತದಲ್ಲಿ ಇರುವ ಸಮಯದಲ್ಲಿ ಅವರು ಈ ಪತ್ರವನ್ನು ಬರೆದಿದ್ದಾರೆ. ಔಷಧಗಳು ಮತ್ತು ವೈದ್ಯಕೀಯ ಉಪಕರಣಗಳು ಸೇರಿದಂತೆ ಹೆಚ್ಚುವರಿ ಮೂಲಭೂತ ಅಗತ್ಯಗಳನ್ನು ಪೂರೈಸುವಂತೆ ಉಕ್ರೇನ್ ವಿನಂತಿಸಿದೆ.

ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾಗಿ ಈಗಾಗಲೇ ಬರೋಬ್ಬರಿ 1 ವರ್ಷ ಕಳೆದಿದೆ. ಕೆಲವೇ ವಾರದಲ್ಲಿ ಯುದ್ಧ ಮುಗಿಯಲಿದೆ ಎಂಬ ವಿಶ್ವಾಸದಲ್ಲಿದ್ದ ಜಗತ್ತಿಗೆ ಇದು ಬೇಸರ ತರಿಸಿದೆ. ರಷ್ಯಾ ಮತ್ತು ಉಕ್ರೇನ್ ನಡುವೆ ತಿಕ್ಕಾಟ ಹೆಚ್ಚಾದಷ್ಟು ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ಹೀಗಾಗಿ ಯುದ್ಧಕ್ಕೆ ಅಂತ್ಯ ಹಾಡಲು ಭಾರತವೂ ಸೇರಿದಂತೆ ಜಗತ್ತಿನ ಬಲಿಷ್ಠ ರಾಷ್ಟ್ರಗಳ ಬಳಿ ಉಕ್ರೇನ್ ಮನವಿ ಮಾಡುತ್ತಿದೆ.

ಮತ್ತಷ್ಟು ಓದಿ: Volodymyr Zelensky: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಮ್ಮ ಆತ್ಮೀಯರಿಂದಲೇ ಕೊಲೆಯಾಗುತ್ತಾರೆ: ವೊಲೊಡಿಮಿರ್ ಝೆಲೆನ್ಸ್ಕಿ

ನಾನು ಭಾರತಕ್ಕೆ ಬಂದಿರುವ ಒಂದು ಸಂದೇಶವಿದೆ. ಉಕ್ರೇನ್ ನಿಜವಾಗಿಯೂ ಭಾರತ ಮತ್ತು ಉಕ್ರೇನ್ ಹತ್ತಿರ ಇರಬೇಕೆಂದು ಬಯಸುತ್ತದೆ. ನಾವು ಭಾರತದೊಂದಿಗೆ ಹೊಸ ಸಂಬಂಧವನ್ನು ಪ್ರಾರಂಭಿಸಲು ಬಯಸುತ್ತೇವೆ. ಉಕ್ರೇನ್‍ನ ಸಚಿವರೊಬ್ಬರು ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿರುವುದು ವಿಶೇಷ. ಅದರಲ್ಲೂ ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಆರಂಭವಾದ ನಂತರ ಇದೇ ಮೊದಲು ಪೂರ್ವ ಯುರೋಪ್ ರಾಷ್ಟ್ರದ ಪ್ರತಿನಿಧಿಯೊಬ್ಬರು ಭಾರತಕ್ಕೆ ಆಗಮಿಸುತ್ತಿದ್ದಾರೆ.

ಎಮಿನಿ ಝಪರೋವಾ ಮೊದಲಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಸಂಜಯ್ ವರ್ಮಾ ಅವರೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಭಾರತದ ಸಾಧನೆಯನ್ನು ಹಾಡಿ ಹೊಗಳಿದ್ದಾರೆ. ಈಗಾಗಲೇ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಕೂಡ ರಷ್ಯಾ ಜೊತೆ ಮಾತನಾಡಿ ಯುದ್ಧ ಅಂತ್ಯಗೊಳಿಸಲು ಮನವಿ ಮಾಡಿದ್ದಾರೆ. ಹಾಗೇ ಯುರೋಪಿನ ಇತರ ರಾಷ್ಟ್ರಗಳಿಂದಲೂ ಈ ವಿಚಾರದಲ್ಲಿ ಭಾರತ ಮಧ್ಯಪ್ರವೇಶ ಮಾಡಬೇಕು ಎಂಬ ಬೇಡಿಕೆ ಇಟ್ಟಿವೆ.

ಭಾರತ ಹಾಗೂ ಉಕ್ರೇನ್ ಸಂಬಂಧದ ಬಗ್ಗೆ ಮುಕ್ತವಾಗಿ ಮಾತನಾಡಿರುವ ಉಕ್ರೇನ್‌ನ ಉಪ ವಿದೇಶಾಂಗ ಸಚಿವೆ ಎಮಿನಿ ಝಪರೋವಾ, ಭಾರತದ ಜೊತೆ ಪಯಣಿಸುವುದು ಉಕ್ರೇನ್‌ಗೆ ಬಹುಮುಖ್ಯವಾದ ಸಂಗತಿ.

ಭಾರತ ಜಗತ್ತಿನ ಶಕ್ತಿಶಾಲಿ ರಾಷ್ಟ್ರವಾಗಿದ್ದು, ವಿಶ್ವ ಗುರುವಿನ ಸ್ಥಾನವನ್ನು ಅಲಂಕರಿಸಿದೆ ಎನ್ನುವ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತ ಬೆಳೆದು ನಿಂತಿರುವ ಪರಿಯನ್ನು ವಿವರಿಸಿದ್ದಾರೆ. ಇದೇ ವೇಳೆ ಹಲವು ದ್ವಿಪಕ್ಷೀಯ ವಿಚಾರಗಳು ಹಾಗೂ ವ್ಯಾಪಾರ ಸಂಬಂಧಿ ವಿಷಯಗಳು ಚರ್ಚೆಯಾದವು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ