Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಮತ್ತೆ ಕೊರೊನಾ ಭೀತಿ: ದೇಶದಲ್ಲಿ ಹೊಸದಾಗಿ 702 ಪ್ರಕರಣಗಳು ಪತ್ತೆ

ಚಳಿಗಾಲದಲ್ಲಿ ಕೊರೊನಾ ತೀವ್ರತೆ ಹೆಚ್ಚುತ್ತಿದ್ದು, ಭಾರತದಲ್ಲಿ ಕೊರೊನಾ ವೈರಸ್ ತೀವ್ರ ಸ್ವರೂಪ ಪಡೆಯುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 702 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಆತಂಕ ಹೆಚ್ಚುತ್ತಿದೆ. ಏಕೆಂದರೆ ಇದಕ್ಕೂ ಒಂದು ದಿನ ಮೊದಲು ದೇಶದಲ್ಲಿ 529 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಮಾಹಿತಿ ನೀಡಿದೆ.

ಭಾರತದಲ್ಲಿ ಮತ್ತೆ ಕೊರೊನಾ ಭೀತಿ: ದೇಶದಲ್ಲಿ ಹೊಸದಾಗಿ 702 ಪ್ರಕರಣಗಳು ಪತ್ತೆ
ಕೊರೊನಾImage Credit source: Economic Times
Follow us
ನಯನಾ ರಾಜೀವ್
|

Updated on: Dec 29, 2023 | 12:27 PM

ಚಳಿಗಾಲದಲ್ಲಿ ಕೊರೊನಾ(Corona) ತೀವ್ರತೆ ಹೆಚ್ಚುತ್ತಿದ್ದು, ಭಾರತದಲ್ಲಿ ಕೊರೊನಾ ವೈರಸ್ ತೀವ್ರ ಸ್ವರೂಪ ಪಡೆಯುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 702 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ಆತಂಕ ಹೆಚ್ಚುತ್ತಿದೆ. ಏಕೆಂದರೆ ಇದಕ್ಕೂ ಒಂದು ದಿನ ಮೊದಲು ದೇಶದಲ್ಲಿ 529 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಮಾಹಿತಿ ನೀಡಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 702 ಹೊಸ ಕೊರೊನಾವೈರಸ್ ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು 4097 ದಾಟಿದೆ. ಈ ಅವಧಿಯಲ್ಲಿ, ದೇಶದ ವಿವಿಧ ರಾಜ್ಯಗಳಲ್ಲಿ ಕೋವಿಡ್ -19 ನಿಂದ ಒಟ್ಟು 6 ಜನರು ಸಾವನ್ನಪ್ಪಿದ್ದಾರೆ.

ಕೊರೊನಾ ವೈರಸ್‌ನಿಂದ ಮಹಾರಾಷ್ಟ್ರದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ದೆಹಲಿ, ಕರ್ನಾಟಕ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಒಬ್ಬ ರೋಗಿಯು ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಬುಧವಾರ 24 ಗಂಟೆಗಳಲ್ಲಿ 529 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿತ್ತು. ಈ ಅವಧಿಯಲ್ಲಿ ದೇಶದಲ್ಲಿ ಕೊರೊನಾ ವೈರಸ್‌ನಿಂದ 5 ಜನರು ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದಿ: ರಾಜ್ಯದಲ್ಲಿ ಇಂದು 125 ಜನರಿಗೆ ಕೊರೊನಾ ಸೋಂಕು ದೃಢ; ಮೂವರು ಸಾವು

ಅಷ್ಟೇ ಅಲ್ಲ ಈ ಅವಧಿಯಲ್ಲಿ ದೇಶದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ. ಬುಧವಾರದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ, ಕರ್ನಾಟಕದಲ್ಲಿ ಕೋವಿಡ್ -19 ನಿಂದ ಇಬ್ಬರು ಮತ್ತು ಗುಜರಾತ್‌ನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಕಳೆದ ಮೂರು ತಿಂಗಳಲ್ಲಿ ಮೊದಲ ಬಾರಿಗೆ ಮಹಾರಾಷ್ಟ್ರದಲ್ಲಿ ಕೊರೊನಾ ಸಾವಿನ ಪ್ರಕರಣಗಳು ವರದಿಯಾಗಿವೆ. ಕೊರೊನಾದ ಹೊಸ ರೂಪಾಂತರಿ ಜೆಎನ್.1 ರ ಎಷ್ಟು ಪ್ರಕರಣಗಳಿವೆ. ದೇಶದಲ್ಲಿ ಇದುವರೆಗೆ 110 ಹೊಸ ಪ್ರಕರಣಗಳು ದಾಖಲಾಗಿವೆ.ಗುಜರಾತ್‌ನಲ್ಲಿ ಇಲ್ಲಿಯವರೆಗೆ ದಾಖಲಾಗಿವೆ. ಗುಜರಾತ್‌ನಲ್ಲಿ 36, ಕರ್ನಾಟಕದಲ್ಲಿ 34, ಗೋವಾದಲ್ಲಿ 14, ಮಹಾರಾಷ್ಟ್ರದಲ್ಲಿ 9, ಕೇರಳದಲ್ಲಿ 6, ರಾಜಸ್ಥಾನದಲ್ಲಿ 4, ತಮಿಳುನಾಡಿನಲ್ಲಿ 4, ತೆಲಂಗಾಣದಲ್ಲಿ 3 ಮತ್ತು ದೆಹಲಿಯಲ್ಲಿ 1 ಪ್ರಕರಣಗಳು ದಾಖಲಾಗಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ