ಈಜಿಪ್ಟ್ನ ರಫಾ ಮೂಲಕ ಗಾಜಾಗೆ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿದ ಭಾರತ
ಇಸ್ರೇಲ್ನ ದಾಳಿಯಿಂದ ಹಾನಿಗೊಳಗಾದ ಗಾಜಾಕ್ಕೆ ಭಾರತವು ಈಜಿಪ್ಟ್ನ ರಫಾ ಕ್ರಾಸಿಂಗ್ ಮೂಲಕ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿದೆ. ಅದರಲ್ಲಿ ಅಗತ್ಯವಾದ ಔಷಧಿಗಳು, ಶಸ್ತ್ರ ಚಿಕಿತ್ಸೆಗೆ ಬೇಕಾದ ಸಾಮಗ್ರಿಗಳು, ಟೆಂಟ್ಗಳು, ಟಾರ್ಪಲಿನ್ ಇತರೆ ವಸ್ತುಗಳನ್ನು ಕಳುಹಿಸಿದೆ ಈ ಕುರಿತು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.
ಇಸ್ರೇಲ್ನ ದಾಳಿಯಿಂದ ಹಾನಿಗೊಳಗಾದ ಗಾಜಾಕ್ಕೆ ಭಾರತವು ಈಜಿಪ್ಟ್ನ ರಫಾ ಕ್ರಾಸಿಂಗ್ ಮೂಲಕ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿದೆ. ಅದರಲ್ಲಿ ಅಗತ್ಯವಾದ ಔಷಧಿಗಳು, ಶಸ್ತ್ರ ಚಿಕಿತ್ಸೆಗೆ ಬೇಕಾದ ಸಾಮಗ್ರಿಗಳು, ಟೆಂಟ್ಗಳು, ಟಾರ್ಪಲಿನ್ ಇತರೆ ವಸ್ತುಗಳನ್ನು ಕಳುಹಿಸಿದೆ ಈ ಕುರಿತು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.
ಹಮಾಸ್ ಉಗ್ರರು ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ರಾಕೆಟ್ ದಾಳಿ ನಡೆಸಿತ್ತು. ಇದರಲ್ಲಿ 1500ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಇದೀಗ ಇಸ್ರೇಲ್ ಗಾಜಾದ ಮೇಲೆ ಪ್ರತಿ ದಾಳಿ ನಡೆಸುತ್ತಿದೆ. ಗಾಜಾದ ವೆಸ್ಟ್ ಬ್ಯಾಂಕ್ನ ಜೆನಿನ್ ನಗರದಲ್ಲಿರುವ ಅಲ್-ಅನ್ಸಾರ್ ಮಸೀದಿ ಸಂಕೀರ್ಣದಲ್ಲಿರುವ ಭಯೋತ್ಪಾದಕ ಸಂಘಟನೆ ಹಮಾಸ್ ಹಾಗೂ ಇಸ್ಲಾಮಿಕ್ ಜಿಹಾದ್ ಕಮಾಂಡ್ ಸೆಂಟರ್ ಮೇಲೆ ಇಸ್ರೇಲಿ ಸೇನೆ ವೈಮಾನಿಕ ದಾಳಿ ನಡೆಸಿದೆ.
ಈ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ವೈದ್ಯರನ್ನು ಉಲ್ಲೇಖಿಸಿ ಮಾಧ್ಯಮ ವರದಿ ಮಾಡಿದೆ. ಆದರೆ, ಇದು ಇನ್ನೂ ದೃಢಪಟ್ಟಿಲ್ಲ. ಇದಕ್ಕೂ ಮುನ್ನ ನೂರ್ ಶಮ್ಸ್ ನಿರಾಶ್ರಿತರ ಶಿಬಿರದಲ್ಲಿ ಇಸ್ರೇಲ್ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಐವರು ಮಕ್ಕಳು ಸೇರಿದಂತೆ 13 ಪ್ಯಾಲೆಸ್ತೀನ್ ಪ್ರಜೆಗಳು ಸಾವನ್ನಪ್ಪಿದ್ದರು.
ಗಾಜಾ ನಗರದ ಜನರು ತಮ್ಮ ಸುರಕ್ಷತೆಗಾಗಿ ದಕ್ಷಿಣ ಗಾಜಾದ ಕಡೆಗೆ ವಲಸೆ ಹೋಗುವಂತೆ ಇಸ್ರೇಲ್ ಕೇಳಿಕೊಂಡಿತ್ತು. ಹಮಾಸ್ ಗುಂಪು ಇಬ್ಬರು ಅಮೆರಿಕದ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಮತ್ತೊಮ್ಮೆ ಗಾಜಾವನ್ನು ವಶಪಡಿಸಿಕೊಳ್ಳುವವರೆಗೆ ಯುದ್ಧವನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
🇮🇳 sends Humanitarian aid to the people of 🇵🇸!
An IAF C-17 flight carrying nearly 6.5 tonnes of medical aid and 32 tonnes of disaster relief material for the people of Palestine departs for El-Arish airport in Egypt.
The material includes essential life-saving medicines,… pic.twitter.com/28XI6992Ph
— Arindam Bagchi (@MEAIndia) October 22, 2023
ಹಮಾಸ್ ಹೋರಾಟಗಾರರು ಮಸೀದಿಯನ್ನು ಕಮಾಂಡ್ ಸೆಂಟರ್ ಮಾಡಿದ್ದಾರೆ ಎಂದು ಭದ್ರತಾ ಗುಪ್ತಚರ ಮಾಹಿತಿ ಲಭ್ಯವಾಗಿತ್ತು ಎಂದು ಇಸ್ರೇಲ್ ರಕ್ಷಣಾ ಪಡೆ ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದೆ. ಅಕ್ಟೋಬರ್ 7 ರಂದು ಮೊದಲ ಬಾರಿಗೆ ಹಮಾಸ್ ಭಯೋತ್ಪಾದಕರು ಇಸ್ರೇಲ್ ಮೇಲೆ 5 ಸಾವಿರ ರಾಕೆಟ್ಗಳಿಂದ ದಾಳಿ ನಡೆಸಿದರು, ಅದರಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಗಾಜಾ ಮೇಲೆ ಇಸ್ರೇಲ್ ಸೈನಿಕರು ದಾಳಿ ನಡೆಸಿದ್ದಾರೆ.
ಮತ್ತಷ್ಟು ಓದಿ: Israel Gaza War: ಗಾಜಾದ ವೆಸ್ಟ್ ಬ್ಯಾಂಕ್ನ ಅಲ್-ಅನ್ಸಾರ್ ಮಸೀದಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ಅದರಲ್ಲಿ 1300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ, ಕಳೆದ 24 ಗಂಟೆಗಳಲ್ಲಿ 68 ಹಮಾಸ್ ಉಗ್ರರನ್ನು ಬಂಧಿಸಲಾಗಿದೆ. 81 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ. ಲೆಬನಾನ್ ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ದೃಷ್ಟಿಯಿಂದ, ಶನಿವಾರದಂದು US ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರು ಲೆಬನಾನ್‌ನ ಹಂಗಾಮಿ ಪ್ರಧಾನ ಮಂತ್ರಿ ನಜೀಬ್ ಮಿಕಾಟಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ