ಭಾರತದಲ್ಲಿ ಶುಕ್ರವಾರ ಒಂದೇ ದಿನ 1 ಕೋಟಿ ಡೋಸ್ ಕೊರೊನಾ ಲಸಿಕೆ ನೀಡಿಕೆ; ಹೊಸ ದಾಖಲೆ ನಿರ್ಮಾಣ

Corona Vaccine: ಒಟ್ಟಾರೆ ಇಂದು 1 ಕೋಟಿ ಡೋಸ್ ಕೊವಿಡ್19 ಲಸಿಕೆ ನೀಡಿ ಹೊಸ ದಾಖಲೆ ಬರೆಯಲಾಗಿದೆ. ಈ ಮೊದಲು, ಜೂನ್ 21 ರಂದು ದೇಶದಲ್ಲಿ 88 ಲಕ್ಷ ಡೋಸ್ ಲಸಿಕೆ ನೀಡಿದ್ದೇ ಗರಿಷ್ಠ ದಾಖಲೆ ಆಗಿತ್ತು.

ಭಾರತದಲ್ಲಿ ಶುಕ್ರವಾರ ಒಂದೇ ದಿನ 1 ಕೋಟಿ ಡೋಸ್ ಕೊರೊನಾ ಲಸಿಕೆ ನೀಡಿಕೆ; ಹೊಸ ದಾಖಲೆ ನಿರ್ಮಾಣ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Aug 27, 2021 | 11:05 PM

ದೆಹಲಿ: ಶುಕ್ರವಾರ (ಆಗಸ್ಟ್ 27) ಭಾರತದಲ್ಲಿ 1 ಕೋಟಿ ಡೋಸ್ ಕೊರೊನಾ ಲಸಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 1 ಕೋಟಿ ಡೋಸ್ ಲಸಿಕೆ ನೀಡಿಕೆ ಆಗಿದ್ದು, ಇದೇ ಮೊದಲ ಬಾರಿಗೆ ಒಂದೇ ದಿ‌ನ 1 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇಂದು 1 ಕೋಟಿ 64 ಸಾವಿರ ಡೋಸ್ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಇಂದಿನಂತೆ ಒಟ್ಟು 62 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ದೇಶದ ಶೇಕಡಾ 50 ರಷ್ಟು ವಯಸ್ಕರಿಗೆ ಕನಿಷ್ಠ ಒಂದು ಡೋಸ್ ಲಸಿಕೆ ನೀಡಿಕೆ ಆಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಶುಕ್ರವಾರ 7 ಗಂಟೆ ವೇಳೆಗೆ 62,09,43,580 ಡೋಸ್ ಕೊರೊನಾ ಲಸಿಕೆ ನೀಡಿಕೆ ದಾಖಲಾಗಿದೆ.

ದೇಶದಲ್ಲಿ 18 ವರ್ಷ ಮೇಲ್ಪಟ್ಟ 94 ಕೋಟಿ ಜನರಿದ್ದಾರೆ. ಇದರ ಪೈಕಿ 47 ಕೋಟಿ ಮೊದಲ ಡೋಸ್ ಲಸಿಕೆ ನೀಡಿಕೆ ಸಂಪೂರ್ಣಗೊಂಡಿದೆ. ದೇಶದಲ್ಲಿ 14.17 ಕೋಟಿ ಜನರಿಗೆ ಎರಡು ಡೋಸ್ ಲಸಿಕೆ ನೀಡಿಕೆ ಪೂರ್ಣವಾಗಿದೆ. ಇಂದು ಒಂದೇ ದಿನ 60 ಲಕ್ಷ ಮಂದಿಗೆ ಮೊದಲ ಡೋಸ್ ಲಸಿಕೆ ನೀಡಿಕೆ ಆಗಿದೆ ಎಂದು ತಿಳಿದುಬಂದಿದೆ. ಇಂದು 23 ಲಕ್ಷ ಮಂದಿಗೆ ಎರಡನೇ ಡೋಸ್ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟಾರೆ ಇಂದು 1 ಕೋಟಿ ಡೋಸ್ ಕೊವಿಡ್19 ಲಸಿಕೆ ನೀಡಿ ಹೊಸ ದಾಖಲೆ ಬರೆಯಲಾಗಿದೆ. ಈ ಮೊದಲು, ಜೂನ್ 21 ರಂದು ದೇಶದಲ್ಲಿ 88 ಲಕ್ಷ ಡೋಸ್ ಲಸಿಕೆ ನೀಡಿದ್ದೇ ಗರಿಷ್ಠ ದಾಖಲೆ ಆಗಿತ್ತು.

ಆಗಸ್ಟ್ ತಿಂಗಳಲ್ಲಿ ಇದುವರೆಗೂ 15 ಕೋಟಿ ಡೋಸ್ ಲಸಿಕೆ ನೀಡಿಕೆ ಆಗಿದೆ. ಆಗಸ್ಟ್ ತಿಂಗಳಲ್ಲಿ 17 ಕೋಟಿ ಡೋಸ್ ಲಸಿಕೆ ನೀಡಿಕೆ ಗುರಿ ಇಟ್ಟುಕೊಳ್ಳಲಾಗಿತ್ತು. ತಿಂಗಳ ಮುಕ್ತಾಯಕ್ಕೆ ನಾಲ್ಕು ದಿನ ಉಳಿದಿರುವಂತೆ 15 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಮುಂಬರುವ, ಸಪ್ಟೆಂಬರ್ ತಿಂಗಳಲ್ಲಿ 20 ಕೋಟಿ ಡೋಸ್ ಕೊವಿಡ್-19 ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ.

ಕರ್ನಾಟಕ ಕೊರೊನಾ ವರದಿ ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 27) ಹೊಸದಾಗಿ 1,301 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,44,764 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,88,520 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 17 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,248 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 18,970 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 386 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,36,615 ಕ್ಕೆ ಏರಿಕೆಯಾಗಿದೆ. 12,36,615 ಸೋಂಕಿತರ ಪೈಕಿ 12,13,296 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,977 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,341 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಇದನ್ನೂ ಓದಿ: ಶಿಕ್ಷಕರ ದಿನಾಚರಣೆ ಹಿನ್ನೆಲೆ; ಎಲ್ಲಾ ಶಿಕ್ಷಕರಿಗೆ ಕೊರೊನಾ ಲಸಿಕೆ ನೀಡುವಂತೆ ಕೇಂದ್ರ ನಿರ್ದೇಶನ

ಕಾರ್ಮಿಕರು ಇರುವ ಸ್ಥಳದಲ್ಲೇ ಕೊವಿಡ್ ಲಸಿಕೆ, ಇ ಶ್ರಮ್ ಯೋಜನೆಯಡಿ 15 ರೂ ನೋಂದಣಿಗೆ 2 ಲಕ್ಷದವರೆಗೆ ಇನ್ಶೂರೆನ್ಸ್: ಸಚಿವ ಶಿವರಾಮ ಹೆಬ್ಬಾರ

Published On - 9:11 pm, Fri, 27 August 21

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್