ಕಾಶ್ಮೀರದ ಕುರಿತು ಪಾಕ್ ಸೇನಾ ಮುಖ್ಯಸ್ಥರ ಹೇಳಿಕೆಗೆ ಭಾರತ ತಿರುಗೇಟು

ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರು ಕಾಶ್ಮೀರವನ್ನು ಪಾಕಿಸ್ತಾನದ "ಕುತ್ತಿಗೆಯ ರಕ್ತನಾಳ" ಎಂದು ಕರೆದಿದ್ದರು. ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರ ಹೇಳಿಕೆಗೆ ತೀಕ್ಷ್ಣವಾದ ತಿರುಗೇಟು ನೀಡಿರುವ ಭಾರತ, ಕಾಶ್ಮೀರ ಮತ್ತು ಪಾಕಿಸ್ತಾನದ ನಡುವಿನ ಏಕೈಕ ಕೊಂಡಿ ಎಂದರೆ ಇಸ್ಲಾಮಾಬಾದ್ ಆ ಪ್ರದೇಶದ ಒಂದು ಭಾಗವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವುದಾಗಿದೆ. ಆದಷ್ಟು ಬೇಗ ಅದನ್ನು ಖಾಲಿ ಮಾಡಬೇಕು ಎಂದು ಭಾರತ ಪ್ರತಿಪಾದಿಸಿದೆ. ಪಾಕ್ ಸೇನಾ ಮುಖ್ಯಸ್ಥರ ಈ ಹೇಳಿಕೆಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಮತ್ತೊಮ್ಮೆ ವಿವಾದ ಶುರುವಾಗಿದೆ.

ಕಾಶ್ಮೀರದ ಕುರಿತು ಪಾಕ್ ಸೇನಾ ಮುಖ್ಯಸ್ಥರ ಹೇಳಿಕೆಗೆ ಭಾರತ ತಿರುಗೇಟು
Jaiswal
Updated By: ಸುಷ್ಮಾ ಚಕ್ರೆ

Updated on: Apr 17, 2025 | 8:04 PM

ಶ್ರೀನಗರ, ಏಪ್ರಿಲ್ 17: ಕಾಶ್ಮೀರವು ಇಸ್ಲಾಮಾಬಾದ್‌ನ “ಕುತ್ತಿಗೆಯ ರಕ್ತನಾಳ” ಎಂದು ಹೇಳಿಕೊಂಡ ಪಾಕಿಸ್ತಾನಿ ಸೇನಾ ಮುಖ್ಯಸ್ಥರ (Pakistan Army chief) ಹೇಳಿಕೆಗೆ ಭಾರತ ಇಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ (Ranadheer Jaiswal) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ಪಾಕಿಸ್ತಾನದೊಂದಿಗಿನ ಕಾಶ್ಮೀರದ ಏಕೈಕ ಸಂಬಂಧವೆಂದರೆ ಆ ದೇಶವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳನ್ನು ಖಾಲಿ ಮಾಡುವುದು ಎಂದು ಹೇಳಿದ್ದಾರೆ.

“ನಮ್ಮ ರಕ್ತನಾಳದಲ್ಲಿ ವಿದೇಶಿಯರಿರುವುದು ಹೇಗೆ ಸಾಧ್ಯ? ಇದು ಭಾರತದ ಕೇಂದ್ರಾಡಳಿತ ಪ್ರದೇಶ. ಪಾಕಿಸ್ತಾನದೊಂದಿಗಿನ ಅದರ ಏಕೈಕ ಸಂಬಂಧವೆಂದರೆ ಆ ದೇಶವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶಗಳನ್ನು ಬಿಟ್ಟುಕೊಡುವುದು” ಎಂದು ವಿದೇಶಾಂಗ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇದನ್ನೂ ಓದಿ
WITT 2025: ಪ್ರಧಾನಿಯನ್ನು ಶ್ಲಾಘಿಸಿದ ಟಿವಿ9 ನೆಟ್ವರ್ಕ್ ಸಿಇಒ
WITT 2025: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’: ಮೋದಿ ಭಾಷಣ
WITT 2025: ಪಿಎಂ ಮೋದಿ ಭಾಗಿ; ನೇರಪ್ರಸಾರ ವೀಕ್ಷಿಸಿ
ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ದೇಶಕ್ಕೆ ನೀಡಿದ ಸಂದೇಶ ಏನು?


ಇದನ್ನೂ ಓದಿ: ನಾವು ಎಲ್ಲಾ ರೀತಿಯಲ್ಲೂ ಹಿಂದೂಗಳಿಗಿಂತ ಭಿನ್ನರು, ಕಾಶ್ಮೀರವನ್ನು ಪಾಕ್​ನಿಂದ ದೂರ ಮಾಡಲಾಗದು: ಪಾಕ್ ಸೇನಾ ಮುಖ್ಯಸ್ಥ

ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್, “ನೀವು ಖಂಡಿತವಾಗಿಯೂ ನಿಮ್ಮ ಮಕ್ಕಳಿಗೆ ಪಾಕಿಸ್ತಾನದ ಕಥೆಯನ್ನು ಹೇಳಬೇಕು. ನಮ್ಮ ಪೂರ್ವಜರು ಜೀವನದ ಪ್ರತಿಯೊಂದು ಅಂಶದಲ್ಲೂ ನಾವು ಹಿಂದೂಗಳಿಗಿಂತ ಭಿನ್ನರು ಎಂದು ಭಾವಿಸಿದ್ದರು. ನಮ್ಮ ಧರ್ಮಗಳು, ನಮ್ಮ ಪದ್ಧತಿಗಳು, ಸಂಪ್ರದಾಯಗಳು, ಆಲೋಚನೆಗಳು ಮತ್ತು ಮಹತ್ವಾಕಾಂಕ್ಷೆಗಳು ವಿಭಿನ್ನವಾಗಿವೆ. ಅದು ಎರಡು ರಾಷ್ಟ್ರಗಳ ಸಿದ್ಧಾಂತದ ಅಡಿಪಾಯವಾಗಿತ್ತು” ಎಂದು ಹೇಳಿದ್ದರು.


ಕೇವಲ 1500 ಭಯೋತ್ಪಾದಕರು ದೇಶದ ಭವಿಷ್ಯವನ್ನು ಬದಲಾಯಿಸುತ್ತಾರೆ ಎಂದು ಪಾಕಿಸ್ತಾನದ ಶತ್ರುಗಳು ಭಾವಿಸುತ್ತಾರಾ? ನಾವು ಶೀಘ್ರದಲ್ಲೇ ಈ ಭಯೋತ್ಪಾದಕರ ಬೆನ್ನು ಮುರಿಯುತ್ತೇವೆ. 13 ಲಕ್ಷ ಜನರ ಭಾರತೀಯ ಸೇನೆಗೇ ನಮ್ಮನ್ನು ಹೆದರಿಸಲು ಸಾಧ್ಯವಾಗದಿದ್ದ ಮೇಲೆ ಈ ಭಯೋತ್ಪಾದಕರು ಏನು ಮಾಡುತ್ತಾರೆ? ಎಂದು ಲೇವಡಿ ಮಾಡಿದ್ದರು.

ಇದನ್ನೂ ಓದಿ: ಅಂಬೇಡ್ಕರ್‌ ಗೆದ್ದ ಹಿಂದೂ ಪ್ರಾಬಲ್ಯದ ಪ್ರದೇಶವನ್ನೇ ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟ ಕಾಂಗ್ರೆಸ್‌; ಪ್ರಲ್ಹಾದ್ ಜೋಶಿ ವಾಗ್ದಾಳಿ

“ಕಾಶ್ಮೀರದ ಬಗ್ಗೆ ನಮ್ಮ ನಿಲುವು ಸಂಪೂರ್ಣವಾಗಿ ಸ್ಪಷ್ಟವಾಗಿದೆ. ಅದು ನಮ್ಮ ರಕ್ತನಾಳ, ನಾವು ಅದನ್ನು ಮರೆಯುವುದಿಲ್ಲ. ನಮ್ಮ ಕಾಶ್ಮೀರಿ ಸಹೋದರರನ್ನು ಅವರ ಹೋರಾಟದಲ್ಲಿ ನಾವು ಬಿಡುವುದಿಲ್ಲ.” ಎಂದು ಪಾಕ್ ಸೇನಾ ಮುಖ್ಯಸ್ಥ ಹೇಳಿದ್ದರು. ಇದು ತೀವ್ರ ಚರ್ಚೆಗೆ ಕಾರಣವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ