Kannada News National India stands with the people of Sri Lanka MEA responds to crisis in island nation
ಶ್ರೀಲಂಕಾಕ್ಕೆ ಭಾರತ ಬೆಂಬಲ: ದ್ವೀಪ ರಾಷ್ಟ್ರದ ಬಿಕ್ಕಟ್ಟು ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸರ್ಕಾರ
Sri Lanka ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ಬಗ್ಗೆ ಹೇಳಿಕೆ ನೀಡಿದ್ದು, ಶ್ರೀಲಂಕಾ (Sri Lanka) ಮತ್ತು ಅಲ್ಲಿನ ಜನರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ನಮಗೆ ಅರಿವಿದೆ. ಈ ಸಂಕಷ್ಟದ ಹೊತ್ತಲ್ಲಿ ಅವರಿಗೆ ನಾವು ಬೆಂಬಲ ನೀಡುತ್ತಿದ್ದೇವೆ.
ದೆಹಲಿ: ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಯನ್ನು ಕೇಂದ್ರ ಸರ್ಕಾರ ನಿರಂತರ ಗಮನಿಸುತ್ತಿದೆ ಎಂದು ನರೇಂದ್ರ ಮೋದಿ (Narendra Modi) ಸರ್ಕಾರ ಸೋಮವಾರ ಹೇಳಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ಬಗ್ಗೆ ಹೇಳಿಕೆ ನೀಡಿದ್ದು, ಶ್ರೀಲಂಕಾ (Sri Lanka) ಮತ್ತು ಅಲ್ಲಿನ ಜನರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ನಮಗೆ ಅರಿವಿದೆ. ಈ ಸಂಕಷ್ಟದ ಹೊತ್ತಲ್ಲಿ ಅವರಿಗೆ ನಾವು ಬೆಂಬಲ ನೀಡುತ್ತಿದ್ದೇವೆ ಎಂದು ಎಂಇಎ ವಕ್ತಾರ ಅರಿಂದಮ್ ಬಾಗ್ಚಿ (Arindam Bagchi) ಹೇಳಿದ್ದಾರೆ. ಭಾರತ ಶ್ರೀಲಂಕಾದ ಆಪ್ತ ನೆರೆ ರಾಷ್ಟ್ರ ಎಂದು ಹೇಳಿದ ಎಂಇಎ , ಶ್ರೀಲಂಕಾದಲ್ಲಿ ಗಂಭೀರ ಆರ್ಥಿಕ ಬಿಕ್ಕಟ್ಟು ವೇಳೆ ಭಾರತ $3.8 ಬಿಲಿಯನ್ ಗಿಂತಲೀ ಹೆಚ್ಚಿನ ಸಹಾಯವನ್ನು ನೀಡಿದೆ ಎಂದು ಅವರು ಹೇಳಿದ್ದಾರೆ.
ನಾವು ಶ್ರೀಲಂಕಾದಲ್ಲಿ ಇತ್ತೀಚಿನ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಪ್ರಜಾಸತ್ತಾತ್ಮಕ ರೀತಿ ಮತ್ತು ಮೌಲ್ಯಗಳು, ಸ್ಥಾಪಿತ ಸಂಸ್ಥೆಗಳು ಮತ್ತು ಸಾಂವಿಧಾನಿಕ ಚೌಕಟ್ಟಿನ ಮೂಲಕ ಸಮೃದ್ಧಿ ಮತ್ತು ಪ್ರಗತಿಗಾಗಿ ತಮ್ಮ ಆಕಾಂಕ್ಷೆಗಳನ್ನು ಸಾಧಿಸಲು ಪ್ರಯತ್ನಿಸುತ್ತಿರುವ ಶ್ರೀಲಂಕಾದ ಜನರೊಂದಿಗೆ ಭಾರತ ನಿಂತಿದೆ ಎಂದು ಅವರು ಹೇಳಿದ್ದಾರೆ.