Agni V ಚೀನಾದೊಂದಿಗಿನ ಗಡಿ ಉದ್ವಿಗ್ನತೆಯ ನಡುವೆಯೇ ಭಾರತದಿಂದ ಅಗ್ನಿ 5 ಕ್ಷಿಪಣಿ ಪರೀಕ್ಷೆ ಯಶಸ್ವಿ

ಕ್ಷಿಪಣಿಯಲ್ಲಿನ ಹೊಸ ತಂತ್ರಜ್ಞಾನಗಳು ಮತ್ತು ಉಪಕರಣಗಳನ್ನು ಮೌಲ್ಯೀಕರಿಸಲು ಪರೀಕ್ಷೆಯನ್ನು ನಡೆಸಲಾಯಿತು. ಅದು ಈಗ ಮೊದಲಿಗಿಂತ ಹಗುರವಾಗಿದೆ ಎಂದು ರಕ್ಷಣಾ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

Agni V ಚೀನಾದೊಂದಿಗಿನ ಗಡಿ ಉದ್ವಿಗ್ನತೆಯ ನಡುವೆಯೇ ಭಾರತದಿಂದ ಅಗ್ನಿ 5 ಕ್ಷಿಪಣಿ ಪರೀಕ್ಷೆ ಯಶಸ್ವಿ
ಅಗ್ನಿ 5
Edited By:

Updated on: Dec 15, 2022 | 8:51 PM

5,000 ಕಿಲೋಮೀಟರ್‌ಗೂ ಮೀರಿದ ಗುರಿಗಳನ್ನು ಹೊಡೆಯುವ ಸಾಮರ್ಥ್ಯವಿರುವ ಪರಮಾಣು ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿ (ballistic missile) ಅಗ್ನಿ 5 (Agni V) ಪ್ರಯೋಗವನ್ನು ಭಾರತ ಗುರುವಾರ ಯಶಸ್ವಿಯಾಗಿ ನಡೆಸಿದೆ. ಕ್ಷಿಪಣಿಯಲ್ಲಿನ ಹೊಸ ತಂತ್ರಜ್ಞಾನಗಳು ಮತ್ತು ಉಪಕರಣಗಳನ್ನು ಮೌಲ್ಯೀಕರಿಸಲು ಪರೀಕ್ಷೆಯನ್ನು ನಡೆಸಲಾಯಿತು. ಅದು ಈಗ ಮೊದಲಿಗಿಂತ ಹಗುರವಾಗಿದೆ ಎಂದು ರಕ್ಷಣಾ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಅಗ್ನಿ ಕ್ಷಿಪಣಿ ಸರಣಿಯಲ್ಲಿ ಇದು ಇತ್ತೀಚಿನ ಪರೀಕ್ಷೆಯಾಗಿದ್ದು, ಅಗ್ನಿ V ಕ್ಷಿಪಣಿಯ ವ್ಯಾಪ್ತಿಯನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಪ್ರಯೋಗವು ಸಾಬೀತುಪಡಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಚೀನಾದೊಂದಿಗಿನ ಇತ್ತೀಚಿನ ಗಡಿ ಉದ್ವಿಗ್ನತೆಯ ಮಧ್ಯೆ ಈ ಪರೀಕ್ಷಾ ಪ್ರಯೋಗಗಳು ಬಂದಿವೆ. ಡಿಸೆಂಬರ್ 9ರಂದು ಭಾರತೀಯ ಸೈನಿಕರು ಮತ್ತು ಚೀನಾದ ಸೈನಿಕರ ನಡುವೆ ಅರುಣಾಚಲ ಪ್ರದೇಶದಲ್ಲಿ ಸಂಘರ್ಷವೇರ್ಪಟ್ಟಿತ್ತು.

ಭಾರತವು ಕೊನೆಯ ಅಗ್ನಿ-5 ಪರೀಕ್ಷೆಯನ್ನು ಅಕ್ಟೋಬರ್ 2021 ರಲ್ಲಿ ಪ್ರಾರಂಭಿಸಿತ್ತು. ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಸಂಜೆ ಸುಮಾರು 5:30 ಗಂಟೆಗೆ ಉಡಾವಣೆ ಮಾಡಲಾಯಿತು. ಮೂರು-ಹಂತದ ಘನ-ಇಂಧನ ಎಂಜಿನ್ ಅನ್ನು ಬಳಸುವ ಈ ಕ್ಷಿಪಣಿಯು 5,000 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಗುರಿಗಳನ್ನು ಅತ್ಯಂತ ಹೆಚ್ಚಿನ ಮಟ್ಟದ ನಿಖರತೆಯೊಂದಿಗೆ ಹೊಡೆಯುವ ಸಾಮರ್ಥ್ಯವನ್ನು ಹೊಂದಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ

Published On - 8:45 pm, Thu, 15 December 22