ಭಾರತದ ಜಲಾಂತರ್ಗಾಮಿ ನೌಕೆಯಿಂದ 3,500 ಕಿ.ಮೀ ವ್ಯಾಪ್ತಿಯ ಪರಮಾಣು ಸಾಮರ್ಥ್ಯದ ಕ್ಷಿಪಣಿ ಉಡಾವಣೆ ಯಶಸ್ವಿ

ಜಲಾಂತರ್ಗಾಮಿ ಐಎನ್‌ಎಸ್ ಅರಿಘಾಟ್‌ನಿಂದ ಭಾರತವು ಪರಮಾಣು ಸಾಮರ್ಥ್ಯದ 3,500 ಕಿ.ಮೀ ವ್ಯಾಪ್ತಿಯ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಕ್ಷಿಪಣಿಯನ್ನು ಪರೀಕ್ಷಾರ್ಥ ಉಡಾವಣೆ ಮಾಡಲಾಗಿದೆ. ಇದರ ಫಲಿತಾಂಶ ಬಂದ ನಂತರ ಸಂಬಂಧಪಟ್ಟ ಅಧಿಕಾರಿಗಳು ಉನ್ನತ ಮಿಲಿಟರಿ ಮತ್ತು ರಾಜಕೀಯ ನಾಯಕರಿಗೆ ಮಾಹಿತಿ ನೀಡಲಿದ್ದಾರೆ.

ಭಾರತದ ಜಲಾಂತರ್ಗಾಮಿ ನೌಕೆಯಿಂದ 3,500 ಕಿ.ಮೀ ವ್ಯಾಪ್ತಿಯ ಪರಮಾಣು ಸಾಮರ್ಥ್ಯದ ಕ್ಷಿಪಣಿ ಉಡಾವಣೆ ಯಶಸ್ವಿ
ಕ್ಷಿಪಣಿ ಉಡಾವಣೆ
Follow us
ಸುಷ್ಮಾ ಚಕ್ರೆ
|

Updated on: Nov 28, 2024 | 4:29 PM

ನವದೆಹಲಿ: ಇತ್ತೀಚೆಗಷ್ಟೇ ಸೇರ್ಪಡೆಗೊಂಡ ಭಾರತದ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿಘಾಟ್‌ನಿಂದ 3,500 ಕಿ.ಮೀ.ಗಳ ವ್ಯಾಪ್ತಿಯ ಪರಮಾಣು ಸಾಮರ್ಥ್ಯದ ಕೆ-4 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಭಾರತೀಯ ನೌಕಾಪಡೆಯು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಿದೆ. ರಕ್ಷಣಾ ಇಲಾಖೆ ಮೂಲಗಳ ಪ್ರಕಾರ, ಪರೀಕ್ಷಾ ಫಲಿತಾಂಶಗಳನ್ನು ವಿಶ್ಲೇಷಿಸಲಾಗುತ್ತಿದೆ, ನಂತರ ಸಂಬಂಧಿಸಿದ ಅಧಿಕಾರಿಗಳು ಉನ್ನತ ಮಿಲಿಟರಿ ಮತ್ತು ರಾಜಕೀಯ ನಾಯಕರಿಗೆ ಮಾಹಿತಿ ನೀಡಲಿದ್ದಾರೆ. ದೇಶದ ಎರಡನೇ-ಸ್ಟ್ರೈಕ್ ಸಾಮರ್ಥ್ಯವನ್ನು ಮೌಲ್ಯೀಕರಿಸಲು ಈ ಪರೀಕ್ಷೆಯು ನಿರ್ಣಾಯಕವಾಗಿದೆ.

ಭಾರತೀಯ ನೌಕಾಪಡೆಯು ಹೊಸದಾಗಿ ಸೇರ್ಪಡೆಗೊಂಡ ಪರಮಾಣು ಜಲಾಂತರ್ಗಾಮಿ ಐಎನ್‌ಎಸ್ ಅರಿಘಾಟ್‌ನಿಂದ 3,500 ಕಿ.ಮೀ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಉಡಾವಣೆ ಮಾಡಿತು. ನೌಕಾಪಡೆಯು ಈಗ ಕ್ಷಿಪಣಿ ವ್ಯವಸ್ಥೆಯ ಹೆಚ್ಚಿನ ಪರೀಕ್ಷೆಗಳನ್ನು ನಡೆಸಲಿದೆ. ಐಎನ್‌ಎಸ್ ಅರಿಹಂತ್ ಮತ್ತು ಅರಿಘಾಟ್ ಭಾರತೀಯ ನೌಕಾಪಡೆಯ ಶಸ್ತ್ರಾಗಾರದಲ್ಲಿರುವ ಎರಡು ಪರಮಾಣು ಜಲಾಂತರ್ಗಾಮಿ ನೌಕೆಗಳು ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸುವ ಸಾಮರ್ಥ್ಯವನ್ನು ಹೊಂದಿವೆ. ವಿಶಾಖಪಟ್ಟಣಂ ಮೂಲದ ಶಿಪ್ ಬಿಲ್ಡಿಂಗ್ ಸೆಂಟರ್‌ನಲ್ಲಿ ಆರಿಘಾಟ್ ಅನ್ನು ಆಗಸ್ಟ್‌ನಲ್ಲಿ ಸೇರಿಸಲಾಯಿತು.

ಇದನ್ನೂ ಓದಿ: ಇರಾನ್ ದಾಳಿಯ ಸುಳಿವು ಸಿಗುತ್ತಿದ್ದಂತೆ ಇಸ್ರೇಲ್​ಗೆ ಯುದ್ಧನೌಕೆ, ಫೈಟರ್ ಜೆಟ್ ಕಳುಹಿಸಿದ ಅಮೆರಿಕಾ

ಇದೇ ರೀತಿ ಮೂರನೇ ಜಲಾಂತರ್ಗಾಮಿ ನೌಕೆಯನ್ನು ಪ್ರಾರಂಭಿಸಲಾಗಿದೆ. ಮುಂದಿನ ವರ್ಷ ಅದು ಸೇರ್ಪಡೆಗೊಳ್ಳುವ ನಿರೀಕ್ಷೆಯಿದೆ.

ಭಾರತೀಯ ನೌಕಾಪಡೆಯು ವಿಶಾಖಪಟ್ಟಣಂ ಮೂಲದ ಹಡಗು ನಿರ್ಮಾಣ ಕೇಂದ್ರದಲ್ಲಿ ಆಗಸ್ಟ್‌ನಲ್ಲಿ ಜಲಾಂತರ್ಗಾಮಿ ನೌಕೆಯನ್ನು ಸೇರಿಸಿತ್ತು. ಭಾರತೀಯ ನೌಕಾಪಡೆಯು ಇದೀಗ ಕ್ಷಿಪಣಿ ವ್ಯವಸ್ಥೆಯ ಹೆಚ್ಚಿನ ಪರೀಕ್ಷೆಗಳನ್ನು ನಡೆಸಲು ಯೋಜಿಸುತ್ತಿದೆ.

ಇದನ್ನೂ ಓದಿ: ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: ನಾಲ್ಕನೇ ಪರಮಾಣು ಜಲಾಂತರ್ಗಾಮಿ ನೌಕೆ ಬಿಡುಗಡೆ

ನೌಕಾಪಡೆಯು ಎರಡು ಪರಮಾಣು ಜಲಾಂತರ್ಗಾಮಿ ನೌಕೆಗಳನ್ನು ಹೊಂದಿದ್ದು, ಐಎನ್‌ಎಸ್ ಅರಿಹಂತ್ ಮತ್ತು ಅರಿಘಾಟ್ ಸೇರಿದಂತೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸುವ ಸಾಮರ್ಥ್ಯವನ್ನು ಹೊಂದಿದೆ. ಮೂರನೇ ನೌಕೆಯನ್ನು ಸಹ ಪ್ರಾರಂಭಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ಹಾಸನದಲ್ಲಿ ಜೆಡಿಎಸ್ ಪ್ರಭಾವ ಸಂಪೂರ್ಣವಾಗಿ ತಗ್ಗಿಸಲು ಕಾಂಗ್ರೆಸ್ ಹುನ್ನಾರ
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ವಿಜಯೇಂದ್ರ ತಂಡದಿಂದ ಕಲ್ಯಾಣ ಕರ್ನಾಟಕದಲ್ಲಿ ರೈತರ ಪರ ಹೋರಾಟ ಬೇಕಿತ್ತಾ?
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟಿಸಿದ ಸಿದ್ದರಾಮಯ್ಯ
"ಇಸ್ಪೀಟ್ ಆಟ ಆಡಲೇಬೇಕಾ ಸರ್​"? ಪೊಲೀಸರಿಗೆ ಮಕ್ಕಳ ಪ್ರಶ್ನೆ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?
ರಜತ್ ಆಯ್ತು ಈಗ ತ್ರಿವಿಕ್ರಂಗೆ ತಲೆ ಬೋಳಿಸೋ ಚಾಲೆಂಜ್; ಒಪ್ಪಿದ್ರಾ?