ಅರವಿಂದ್ ಕೇಜ್ರಿವಾಲ್ ಬಂಧನದ ಕುರಿತು ಅಮೆರಿಕದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಭಾರತ

ಭಾರತದಲ್ಲಿನ ಕೆಲವು ಕಾನೂನು ಪ್ರಕ್ರಿಯೆಗಳ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರರ ಹೇಳಿಕೆಗಳಿಗೆ ನಾವು ತೀವ್ರ ಆಕ್ಷೇಪಣೆಯನ್ನು ವ್ಯಕ್ತಪಡಿಸುತ್ತೇವೆ. ರಾಜತಾಂತ್ರಿಕತೆಯಲ್ಲಿ, ರಾಜ್ಯಗಳು ಇತರರ ಸಾರ್ವಭೌಮತ್ವ ಮತ್ತು ಆಂತರಿಕ ವ್ಯವಹಾರಗಳನ್ನು ಗೌರವಿಸುತ್ತವೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತ, ಅಮೆರಿಕದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದೆ.

ಅರವಿಂದ್ ಕೇಜ್ರಿವಾಲ್ ಬಂಧನದ ಕುರಿತು ಅಮೆರಿಕದ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಭಾರತ
ವಿದೇಶಾಂಗ ಸಚಿವಾಲಯಕ್ಕೆ ಬಂದ ಯುನೈಟೆಡ್ ಸ್ಟೇಟ್ಸ್‌ನ ಕಾರ್ಯನಿರ್ವಾಹಕ ಉಪ ಮುಖ್ಯಸ್ಥರಾದ ಗ್ಲೋರಿಯಾ ಬರ್ಬೆನಾ
Follow us
ರಶ್ಮಿ ಕಲ್ಲಕಟ್ಟ
|

Updated on: Mar 27, 2024 | 2:18 PM

ದೆಹಲಿ ಮಾರ್ಚ್ 27 : ದೆಹಲಿಯ (Delhi) ಸೌತ್ ಬ್ಲಾಕ್‌ನಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (Ministry of External Affairs) ಕಚೇರಿಗೆ ಕರೆಸಲಾದ ಯುನೈಟೆಡ್ ಸ್ಟೇಟ್ಸ್‌ನ ಕಾರ್ಯನಿರ್ವಾಹಕ ಉಪ ಮುಖ್ಯಸ್ಥರಾದ ಗ್ಲೋರಿಯಾ ಬರ್ಬೆನಾ ಜತೆ ಕೇಂದ್ರ ಸರ್ಕಾರದ ಅಧಿಕಾರಿಗಳು ಬುಧವಾರ 40 ನಿಮಿಷಗಳ ಸಭೆ ನಡೆಸಿದ್ದಾರೆ. ಅಮೆರಿಕ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಬಂಧನದ ವರದಿಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಹೇಳಿದ ಒಂದು ದಿನದ ನಂತರ ಈ ಸಭೆ ಬಂದಿದೆ. ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನ ಕುರಿತಂತೆ ಪ್ರತಿಕ್ರಿಯಿಸಿದ ಅಮೆರಿಕ, ಕಾನೂನು ಪ್ರಕ್ರಿಯೆಯು ಮುಕ್ತ ಮತ್ತು ನ್ಯಾಯಸಮ್ಮತವಾಗಿರುವಂತೆ ನೋಡಿಕೊಳ್ಳಬೇಕು ಎಂದು ಹೇಳಿತ್ತು.

ಅಮೆರಿಕ ಹೇಳಿಕೆಗೆ ಭಾರತ ಪ್ರತಿಕ್ರಿಯೆ

ಭಾರತದಲ್ಲಿನ ಕೆಲವು ಕಾನೂನು ಪ್ರಕ್ರಿಯೆಗಳ ಕುರಿತು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರರ ಹೇಳಿಕೆಗಳಿಗೆ ನಾವು ತೀವ್ರ ಆಕ್ಷೇಪಣೆಯನ್ನು ವ್ಯಕ್ತಪಡಿಸುತ್ತೇವೆ. ರಾಜತಾಂತ್ರಿಕತೆಯಲ್ಲಿ, ರಾಜ್ಯಗಳು ಇತರರ ಸಾರ್ವಭೌಮತ್ವ ಮತ್ತು ಆಂತರಿಕ ವ್ಯವಹಾರಗಳನ್ನು ಗೌರವಿಸುತ್ತವೆ ಎಂದು ನಿರೀಕ್ಷಿಸಲಾಗಿದೆ. ಸಹವರ್ತಿ ಪ್ರಜಾಪ್ರಭುತ್ವಗಳ ಸಂದರ್ಭದಲ್ಲಿ ಈ ಜವಾಬ್ದಾರಿ ಇನ್ನೂ ಹೆಚ್ಚು. ಇದು ಇಲ್ಲದಿದ್ದರೆ ಯಾವುದೂ ಸರಿಹೊಂದಲ್ಲ. ಭಾರತದ ಕಾನೂನು ಪ್ರಕ್ರಿಯೆಗಳು ವಸ್ತುನಿಷ್ಠ ಮತ್ತು ಸಮಯೋಚಿತ ಫಲಿತಾಂಶಗಳಿಗೆ ಬದ್ಧವಾಗಿರುವ ನ್ಯಾಯಾಂಗವನ್ನು ಆಧರಿಸಿವೆ. ಅದರ ಮೇಲೆ ಹೇಳಿಕೆ ನೀಡುವುದು ಅನಗತ್ಯ ಎಂದಿದೆ.

ಆರೋಪ ಎದುರಿಸುತ್ತಿರುವ ಯಾವುದೇ ಭಾರತೀಯ ಪ್ರಜೆಯಂತೆ ಕೇಜ್ರಿವಾಲ್ ಕೂಡ ನ್ಯಾಯಯುತ ಮತ್ತು ನಿಷ್ಪಕ್ಷಪಾತ ವಿಚಾರಣೆಗೆ ಅರ್ಹರು ಎಂದು ಜರ್ಮನಿಯ ವಿದೇಶಾಂಗ ಕಚೇರಿ ಒತ್ತಿ ಹೇಳಿದ ದಿನಗಳ ನಂತರ ಅಮೆರಿಕ ಈ ರೀತಿ ಪ್ರತಿಕ್ರಿಯಿಸಿತ್ತು.

ಭಾರತ ಸರ್ಕಾರವು ಜರ್ಮನ್ ರಾಯಭಾರಿಯನ್ನು ಕರೆಸಿದ್ದು, ಇದು “ಆಂತರಿಕ ವಿಷಯಗಳಲ್ಲಿ ಅನಗತ್ಯ ಹಸ್ತಕ್ಷೇಪ” ಎಂದು ಹೇಳಿತು. ನಾವು ನಮ್ಮ ನ್ಯಾಯಾಂಗ ಪ್ರಕ್ರಿಯೆಯ ಆಂತರಿಕ ವ್ಯವಹಾರಗಳಲ್ಲಿ ಮಧ್ಯಪ್ರವೇಶಿಸುವುದು ಮತ್ತು ನ್ಯಾಯಾಂಗ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುವುದನ್ನು ಖಂಡಿಸುತ್ತೇವೆ. ಇಂತಹ ಪಕ್ಷಪಾತದ ಊಹೆಗಳು ಅನಗತ್ಯವಾದವು” ಎಂದು ಭಾರತ ಜರ್ಮನಿ ಹೇಳಿಕೆಯನ್ನು ಖಂಡಿಸಿತ್ತು.

ಇದನ್ನೂ ಓದಿ:ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಜರ್ಮನಿಯ ಹೇಳಿಕೆ ‘ಅನಗತ್ಯ ಹಸ್ತಕ್ಷೇಪ’: ಕೇಂದ್ರ ಸರ್ಕಾರ 

ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ವಾರ ಜಾರಿ ನಿರ್ದೇಶನಾಲಯವು ಬಂಧಿಸಿದ್ದು ಮಾರ್ಚ್ 28 ರವರೆಗೆ ವಶದಲ್ಲಿರಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್