ಕೆನಡಾ ಪ್ರಜೆಗಳಿಗೆ ವೀಸಾ ಸೇವೆಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿದ ಭಾರತ

India suspends visa services for Canadians: ಭಾರತ(India) ಹಾಗೂ ಕೆನಡಾ(Canada) ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಏತನ್ಮಧ್ಯೆ ಭಾರತವು ಕೆನಡಾದ ಪ್ರಜೆಗಳಿಗೆ ವೀಸಾ(Visa) ಸೇವೆಗಳನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸಿದೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್(Hardeep Singh Nijjar) ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವು ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಜತೆಗೆ ಕೆನಡಾವು ಭಾರತೀಯ ರಾಜತಾಂತ್ರಿಕರನ್ನು ಉಚ್ಚಾಟನೆ ಮಾಡಿದ ಬಳಿಕ ಭಾರತವು ಕೂಡ ಅದೇ ರೀತಿಯ ಕ್ರಮಗಳನ್ನು ಕೈಗೊಂಡಿದ್ದು, ಆದಷ್ಟು ಬೇಗ ದೇಶ ಬಿಡುವಂತೆ ತಿಳಿಸಿದೆ.

ಕೆನಡಾ ಪ್ರಜೆಗಳಿಗೆ ವೀಸಾ ಸೇವೆಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿದ ಭಾರತ
Image Credit source: Hindustan Times
Follow us
ನಯನಾ ರಾಜೀವ್
|

Updated on:Sep 21, 2023 | 12:06 PM

ಭಾರತ(India) ಹಾಗೂ ಕೆನಡಾ(Canada) ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಏತನ್ಮಧ್ಯೆ ಭಾರತವು ಕೆನಡಾದ ಪ್ರಜೆಗಳಿಗೆ ವೀಸಾ(Visa) ಸೇವೆಗಳನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸಿದೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್(Hardeep Singh Nijjar) ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂಬ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವು ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಜತೆಗೆ ಕೆನಡಾವು ಭಾರತೀಯ ರಾಜತಾಂತ್ರಿಕರನ್ನು ಉಚ್ಚಾಟನೆ ಮಾಡಿದ ಬಳಿಕ ಭಾರತವು ಕೂಡ ಅದೇ ರೀತಿಯ ಕ್ರಮಗಳನ್ನು ಕೈಗೊಂಡಿದ್ದು, ಆದಷ್ಟು ಬೇಗ ದೇಶ ಬಿಡುವಂತೆ ತಿಳಿಸಿದೆ.

ಕೆನಡಾದಲ್ಲಿ ವೀಸಾ ಅರ್ಜಿ ಕೇಂದ್ರಗಳನ್ನು ನಡೆಸುತ್ತಿರುವ BLS ಇಂಟರ್‌ನ್ಯಾಶನಲ್ ತನ್ನ ಕೆನಡಾದ ವೆಬ್‌ಸೈಟ್‌ನಲ್ಲಿ ಈ ನಿಟ್ಟಿನಲ್ಲಿ ಸಂದೇಶವನ್ನು ಪೋಸ್ಟ್ ಮಾಡಿದ್ದರೂ ಸಹ ವೀಸಾ ಸೇವೆಗಳನ್ನು ಅಮಾನತುಗೊಳಿಸುವ ಬಗ್ಗೆ ಯಾವುದೇ ಔಪಚಾರಿಕ ಪ್ರಕಟಣೆಯನ್ನು ಮಾಡಲಾಗಿಲ್ಲ. ಕಾರ್ಯಾಚರಣೆಯ ಕಾರಣಗಳಿಂದಾಗಿ, 21 ಸೆಪ್ಟೆಂಬರ್ 2023 ರಿಂದ (ಗುರುವಾರ) ಜಾರಿಗೆ ಬರುವಂತೆ, ಮುಂದಿನ ಸೂಚನೆ ಬರುವವರೆಗೆ ಭಾರತೀಯ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಬರೆಯಲಾಗಿದೆ.

ಕೋವಿಡ್ -19 ಸಾಂಕ್ರಾಮಿಕ ರೋಗದ ನಂತರ ಭಾರತವು ವೀಸಾಗಳನ್ನು ಅಮಾನತುಗೊಳಿಸಿರುವುದು ಇದೇ ಮೊದಲು. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಸರ್ರೆ ಪಟ್ಟಣದಲ್ಲಿ ಗುರುನಾನಕ್ ಸಿಖ್ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಹತ್ಯೆಗೀಡಾಗಿದ್ದ. ಈ ಹತ್ಯೆಗೆ ಭಾರತವೇ ಕಾರಣ ಎಂದು ಕೆನಡಾ ಆರೋಪಿಸಿತ್ತು.

ಮತ್ತಷ್ಟು ಓದಿ: Sukha Duneke: ಕೆನಡಾದಲ್ಲಿ ಪಂಜಾಬ್ ಮೂಲದ ಗ್ಯಾಂಗ್​ಸ್ಟರ್ ಸುಖ ದುನೆಕೆ ಹತ್ಯೆ

ಇದಕ್ಕೆ ಪ್ರತ್ಯುತ್ತರ ನೀಡಿರುವ ಭಾರತ, ಕೆನಡಾದ ಬಳಿ ಸಾಕ್ಷ್ಯಗಳಿದ್ದರೆ ನೀಡಲಿ, ಆದರೆ ಸಾಕ್ಷ್ಯಗಳೇನೂ ಇಲ್ಲದೆ ಮನಸ್ಸಿಗೆ ಬಂದಿದ್ದನ್ನು ಹೇಳುವುದುನ್ನು ನಾವು ಖಂಡಿಸುತ್ತೇವೆ ಎಂದು ಹೇಳಿದ್ದಾರೆ. ಇದೀಗ ಕೆನಡಾದಲ್ಲಿ ಮತ್ತೊಬ್ಬ ಗ್ಯಾಂಗ್​ಸ್ಟರ್ ಸುಖ ದುನೆಕೆಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಆತ ಪಂಜಾಬ್ ಮೂಲದವನಾಗಿದ್ದು, ಭಾರತದಲ್ಲಿ ಅನೇಕ ಪ್ರಕರಣಗಳಲ್ಲಿ ಆತ ಬೇಕಾಗಿದ್ದ ಎನ್ನಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:06 pm, Thu, 21 September 23

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ