Coronavirus cases in India: ದೇಶದಲ್ಲಿ 41,383 ಹೊಸ ಕೊವಿಡ್ ಪ್ರಕರಣ ಪತ್ತೆ, 507 ಮಂದಿ ಸಾವು

Covid 19: ಕಳೆದ 24 ಗಂಟೆಗಳ ಕಾಲಾವಧಿಯಲ್ಲಿ 38,652 ಜನರು ಚೇತರಿಸಿಕೊಂಡಿದ್ದಾರೆ, ಒಟ್ಟು ಚೇತರಿಕೆ ಸಂಖ್ಯೆ 3,04,29,339ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳು 409,394 ರಷ್ಟಿದ್ದು, ಬುಧವಾರದ 407,170 ಪ್ರಕರಣಗಳು ವರದಿ ಆಗಿತ್ತು.

Coronavirus cases in India: ದೇಶದಲ್ಲಿ 41,383 ಹೊಸ ಕೊವಿಡ್ ಪ್ರಕರಣ ಪತ್ತೆ, 507 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 22, 2021 | 10:34 AM

ದೆಹಲಿ: ಭಾರತದಲ್ಲಿ ಗುರುವಾರ 41,383 ಹೊಸ ಕೊವಿಡ್ ಪ್ರಕರಣಗಳು ಮತ್ತು 507 ಸಾವು ವರದಿ ಆಗಿದೆ. ಒಟ್ಟು ಕೊವಿಡ್ ರೋಗಿಗಳ ಸಂಖ್ಯೆ 31,257,720 ಮತ್ತು ಸಾವಿನ ಸಂಖ್ಯೆ 418,987 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿದೆ. ಕಳೆದ 24 ಗಂಟೆಗಳ ಕಾಲಾವಧಿಯಲ್ಲಿ 38,652 ಜನರು ಚೇತರಿಸಿಕೊಂಡಿದ್ದಾರೆ, ಒಟ್ಟು ಚೇತರಿಕೆ ಸಂಖ್ಯೆ 3,04,29,339ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳು 409,394 ರಷ್ಟಿದ್ದು, ಬುಧವಾರದ 407,170 ಪ್ರಕರಣಗಳು ವರದಿ ಆಗಿತ್ತು. ಗುರುವಾರ ವರದಿಯಾದ ಪ್ರಕರಣವು ಬುಧವಾರದ ಪ್ರಮಾಣಕ್ಕಿಂತ 632 ಕಡಿಮೆ ಆಗಿದೆ.ಏತನ್ಮಧ್ಯೆ, ಮಹಾರಾಷ್ಟ್ರವು ತನ್ನ ಸಾವಿನ ಸಂಖ್ಯೆಯನ್ನು ಈ ಹಿಂದೆ ವರದಿ ಮಾಡದ 3,509 ಸಾವಿನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಗುರುವಾರ ಸಂಭವಿಸಿದ ಸಂಖ್ಯೆ 3,998 ಸಾವುಗಳು ಬುಧವಾರಕ್ಕಿಂತ 3,491 ಕಡಿಮೆ ಆಗಿವೆ.

ಕೊವಿಡ್ -19 ಕಾಯಿಲೆಗೆ ಈವರೆಗೆ ಒಟ್ಟು 450,911,712 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 1718,439 ಪರೀಕ್ಷೆಗಳನ್ನು ಕಳೆದ 24 ಗಂಟೆಗಳಲ್ಲಿ ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಗುರುವಾರ ತಿಳಿಸಿದೆ.

ದೇಶಾದ್ಯಂತ 415 ದಶಲಕ್ಷಕ್ಕೂ ಹೆಚ್ಚಿನ ಲಸಿಕೆ ಪ್ರಮಾಣವನ್ನು ನೀಡಲಾಗಿದೆ, ಅದರಲ್ಲಿ 32,87,16,212 ಜನರು ಮೊದಲ ಪ್ರಮಾಣವನ್ನು ಪಡೆದಿದ್ದಾರೆ ಮತ್ತು ಉಳಿದ 86,75,6243 ಜನರು ಎರಡೂ ಪ್ರಮಾಣವನ್ನು ಸ್ವೀಕರಿಸಿದ್ದಾರೆ.

ಕೊವಿಡ್ -19 ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಮ್ಲಜನಕದ ಕೊರತೆಯಿಂದ ಯಾವುದೇ ಸಾವುಗಳು ಸಂಭವಿಸಿಲ್ಲ ಕೇಂದ್ರ ಹೇಳಿಕೊಂಡ ನಂತರ ಕೇಂದ್ರ ಸರ್ಕಾರದ ನಾಯಕರು ಮತ್ತು ವಿರೋಧ ಪಕ್ಷದ ನಾಯಕರು ಜಗಳವಾಡಿದ್ದಾರೆ. ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ), ಮತ್ತು ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಮಿತ್ರ ಶಿವಸೇನೆ ಮುಂತಾದ ವಿರೋಧ ಪಕ್ಷಗಳ ನಾಯಕರು ರಾಜ್ಯಸಭೆಯಲ್ಲಿ ಕೇಂದ್ರ ಸಚಿವರ ಮೇಲಿನ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ್ದಾರೆ.

ಆದರೆ, ಮಧ್ಯಪ್ರದೇಶ, ಛತ್ತೀಸ್‌ಗಡ , ಗುಜರಾತ್, ತಮಿಳುನಾಡು ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವಾರು ರಾಜ್ಯಗಳು ಜೀವ ಉಳಿಸುವ ಅನಿಲದ ಕೊರತೆಯಿಂದ ಯಾವುದೇ ಕೊವಿಡ್ -19 ಸಾವುಗಳು ಸಂಭವಿಸಿಲ್ಲ ಎಂದು ಹೇಳಿದ್ದಾರೆ.

ವಿರೋಧ ಪಕ್ಷಗಳು ಮಾಡಿರುವ ಆರೋಪಗಳನ್ನು ಎದುರಿಸುತ್ತಿರುವ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಬುಧವಾರ ಆರೋಗ್ಯವು ರಾಜ್ಯ ವಿಷಯವಾಗಿದೆ ಎಂದು ಹೇಳಿದರು. ಆಮ್ಲಜನಕದ ಕೊರತೆಯಿಂದಾಗಿ ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶ ಸಾವಿನ ಬಗ್ಗೆ ಯಾವುದೇ ಮಾಹಿತಿಯನ್ನು ಕಳುಹಿಸಿಲ್ಲ. “ಆಮ್ಲಜನಕದ ಕೊರತೆಯಿಂದಾಗಿ ತಮ್ಮ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಸಾವು ಸಂಭವಿಸಿದೆ ಎಂದು ಅವರಲ್ಲಿ ಯಾರೂ ಹೇಳಲಿಲ್ಲ, ಅದಕ್ಕಾಗಿ ಯಾವುದೇ ಮಾಹಿತಿಯಿಲ್ಲ. ಕೇಂದ್ರವು ಈ ಡೇಟಾವನ್ನು ಮಾಡಿದೆಯೇ? ಇಲ್ಲ, ”ಎಂದಿದ್ದಾರೆ ಪಾತ್ರಾ.

ಇದನ್ನೂ ಓದಿ: ಕೇರಳ: ವಾರಾಂತ್ಯದಲ್ಲಿ ಸಂಪೂರ್ಣ ಲಾಕ್​​ಡೌನ್ , ಶುಕ್ರವಾರದಂದು ಸಾಮೂಹಿಕ ಕೊವಿಡ್ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ

(India Thursday records 41,383 new Covid-19 cases and 507 deaths in last 24hours)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್