ಸಂಕ್ರಾಂತಿಯ ಹಿಂದಿನ ದಿನದಿಂದ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭ?
ಜನವರಿ 13ರಿಂದ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದರೆ, ಈ ಕುರಿತು ಇನ್ನೂ ನಿಖರ ಮಾಹಿತಿ ಲಭ್ಯವಾಗಿಲ್ಲ.
ದೆಹಲಿ: ಸೆರಮ್ ಸಂಸ್ಥೆಯ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಕೊರೊನಾ ಲಸಿಕೆಗಳ ತುರ್ತು ಬಳಕೆಗೆ ಭಾರತದಲ್ಲಿ ಅನುಮೋದನೆ ಸಿಕ್ಕಿದೆ. ಇದರ ಬೆನ್ನಲ್ಲೇ ಜ.13ರಿಂದ ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹಲವು ಮಾಧ್ಯಮಗಳು ವರದಿ ಮಾಡುತ್ತಿವೆ.
ಕೊರೊನಾ ಲಸಿಕೆ ವಿತರಣೆ ಕುರಿತು ಇನ್ನೂ ಅಧಿಕೃತ ದಿನಾಂಕ ಘೋಷಣೆ ಆಗಿಲ್ಲವಾದರೂ, ಇಂದು ಸೆರಮ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಗಳ ಮುಖ್ಯಸ್ಥರು ಜಂಟಿ ಹೇಳಿಕೆ ನೀಡುವ ಮೂಲಕ ಕೊರೊನಾ ಲಸಿಕೆ ವಿಚಾರದಲ್ಲಿ ಎರಡೂ ಸಂಸ್ಥೆಗಳು ಪರಸ್ಪರ ಸಹಕಾರದೊಂದಿಗೆ ಸಾಗಲಿವೆ ಎಂದಿದ್ದಾರೆ.
ಕೊವಿಡ್ ವ್ಯಾಕ್ಸಿನ್ ರಫ್ತಿಗೆ ಅನುಮತಿ ಕೊರೊನಾ ಲಸಿಕೆ ವಿದೇಶಕ್ಕೆ ರಫ್ತು ಮಾಡಲು ಅವಕಾಶ ದೊರೆತಿದೆ. ದೇಶಕ್ಕೆ ಬೇಕಾದಷ್ಟು ಲಸಿಕೆ ಪೂರೈಕೆಯಾದ ಬಳಿಕ, ಲಸಿಕೆ ರಫ್ತಿಗೆ ಅವಕಾಶ ನೀಡಲಾಗಿದೆ ಎಂಬ ಬಗ್ಗೆ ಸೆರಮ್ ಇನ್ಸ್‌ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದಾರ್ ಪೂನಾವಾಲಾ ಟ್ವೀಟ್ ಮಾಡಿದ್ದಾರೆ.
This should clarify any miscommunication. We are all united in the fight against this pandemic. https://t.co/oeII0YOXEH
— Adar Poonawalla (@adarpoonawalla) January 5, 2021
I would like to clarify two matters; as there is confusion in the public domain, exports of vaccines are permitted to all countries and a joint public statement clearing up any recent miscommunication with regards to Bharat Biotech will be made.
— Adar Poonawalla (@adarpoonawalla) January 5, 2021
ವಿವಾದಿತ ‘ಕೊವ್ಯಾಕ್ಸಿನ್’ ಲಸಿಕೆ ಸ್ವೀಕರಿಸಿದ ಪತ್ರಕರ್ತೆ.. ನೀವೂ ಲಸಿಕೆ ಸ್ವೀಕರಿಸಿ ಎಂದು ಜನಸಾಮಾನ್ಯರಿಗೆ ಕರೆ