
ದೆಹಲಿ: ಸೆರಮ್ ಸಂಸ್ಥೆಯ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಕೊರೊನಾ ಲಸಿಕೆಗಳ ತುರ್ತು ಬಳಕೆಗೆ ಭಾರತದಲ್ಲಿ ಅನುಮೋದನೆ ಸಿಕ್ಕಿದೆ. ಇದರ ಬೆನ್ನಲ್ಲೇ ಜ.13ರಿಂದ ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹಲವು ಮಾಧ್ಯಮಗಳು ವರದಿ ಮಾಡುತ್ತಿವೆ.
ಕೊರೊನಾ ಲಸಿಕೆ ವಿತರಣೆ ಕುರಿತು ಇನ್ನೂ ಅಧಿಕೃತ ದಿನಾಂಕ ಘೋಷಣೆ ಆಗಿಲ್ಲವಾದರೂ, ಇಂದು ಸೆರಮ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಗಳ ಮುಖ್ಯಸ್ಥರು ಜಂಟಿ ಹೇಳಿಕೆ ನೀಡುವ ಮೂಲಕ ಕೊರೊನಾ ಲಸಿಕೆ ವಿಚಾರದಲ್ಲಿ ಎರಡೂ ಸಂಸ್ಥೆಗಳು ಪರಸ್ಪರ ಸಹಕಾರದೊಂದಿಗೆ ಸಾಗಲಿವೆ ಎಂದಿದ್ದಾರೆ.
ಕೊವಿಡ್ ವ್ಯಾಕ್ಸಿನ್ ರಫ್ತಿಗೆ ಅನುಮತಿ
ಕೊರೊನಾ ಲಸಿಕೆ ವಿದೇಶಕ್ಕೆ ರಫ್ತು ಮಾಡಲು ಅವಕಾಶ ದೊರೆತಿದೆ. ದೇಶಕ್ಕೆ ಬೇಕಾದಷ್ಟು ಲಸಿಕೆ ಪೂರೈಕೆಯಾದ ಬಳಿಕ, ಲಸಿಕೆ ರಫ್ತಿಗೆ ಅವಕಾಶ ನೀಡಲಾಗಿದೆ ಎಂಬ ಬಗ್ಗೆ ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದಾರ್ ಪೂನಾವಾಲಾ ಟ್ವೀಟ್ ಮಾಡಿದ್ದಾರೆ.
ವಿವಾದಿತ ‘ಕೊವ್ಯಾಕ್ಸಿನ್’ ಲಸಿಕೆ ಸ್ವೀಕರಿಸಿದ ಪತ್ರಕರ್ತೆ.. ನೀವೂ ಲಸಿಕೆ ಸ್ವೀಕರಿಸಿ ಎಂದು ಜನಸಾಮಾನ್ಯರಿಗೆ ಕರೆ