ಮುಂದಿನ 5 ದಿನಗಳಲ್ಲಿ ತಾಪಮಾನ ಏರಿಕೆಗೆ ಭಾರತ ಸಾಕ್ಷಿಯಾಗಲಿದೆ- ಭಾರತೀಯ ಹವಾಮಾನ ಇಲಾಖೆ

ಈ ತಿಂಗಳ ಆರಂಭದಲ್ಲಿ, ಹವಾಮಾನ ಇಲಾಖೆಯು ಏಪ್ರಿಲ್‌ನಿಂದ ಜೂನ್‌ವರೆಗೆ ದೇಶದ ಹಲವಾರು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ ಎಂದು ಹೇಳಿತ್ತು.

ಮುಂದಿನ 5 ದಿನಗಳಲ್ಲಿ ತಾಪಮಾನ ಏರಿಕೆಗೆ ಭಾರತ ಸಾಕ್ಷಿಯಾಗಲಿದೆ- ಭಾರತೀಯ ಹವಾಮಾನ ಇಲಾಖೆ
India To Witness Rise In TemperatureImage Credit source: NDTV
Follow us
ನಯನಾ ಎಸ್​ಪಿ
|

Updated on:Apr 08, 2023 | 5:53 PM

ಮುಂದಿನ ಐದು ದಿನಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ತಾಪಮಾನವು (Temperature) ಕ್ರಮೇಣವಾಗಿ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಇಂದು ತಿಳಿಸಿದೆ. ಮುಂದಿನ ಎರಡು ದಿನಗಳಲ್ಲಿ ಮಧ್ಯಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು ಸಹಿತ ಮಳೆಯಾಗಲಿದೆ (Thunderstorm) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ತಿಂಗಳ ಆರಂಭದಲ್ಲಿ, ಹವಾಮಾನ ಇಲಾಖೆಯು ವಾಯುವ್ಯ ಮತ್ತು ಪರ್ಯಾಯ ದ್ವೀಪದ ಭಾಗಗಳನ್ನು ಹೊರತುಪಡಿಸಿ ದೇಶದ ಹಲವಾರು ಭಾಗಗಳಲ್ಲಿ ಏಪ್ರಿಲ್‌ನಿಂದ ಜೂನ್‌ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ ಎಂದು ಹೇಳಿತ್ತು.

“ಮುಂದಿನ 2 ದಿನಗಳಲ್ಲಿ ಮಧ್ಯಪ್ರದೇಶ, ಒಡಿಶಾ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ ಮತ್ತು ನಂತರ ಕಡಿಮೆಯಾಗುತ್ತದೆ. ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ, ಛತ್ತೀಸ್‌ಗಢ, ಮಹಾರಾಷ್ಟ್ರ, ಗುಜರಾತ್, ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಗಣನೀಯವಾಗಿ ಹೆಚ್ಚಿನ ಸಂಖ್ಯೆಯ ಶಾಖದ ದಿನಗಳನ್ನು ಊಹಿಸಲಾಗಿದೆ” ಎಂದು IMD ಡೈರೆಕ್ಟರ್ ಜನರಲ್ ಮೃತ್ಯುಂಜಯ್ ಮಹಾಪಾತ್ರ ಹೇಳಿದ್ದಾರೆ.

ಹವಾಮಾನ ಬದಲಾವಣೆಯು ಜಾಗತಿಕ ತಾಪಮಾನವನ್ನು ಹೆಚ್ಚಿಸುತ್ತಿದೆ ಮತ್ತು ತೀವ್ರ ಹವಾಮಾನಾಡಿಂದ ಆಗುವ ತೊಂದರೆಗಳು ಹೆಚ್ಚು ಸಂಭವಿಸಬಹುದು ಎಂದು ವರದಿಗಳು ತಿಳಿಸಿವೆ.

IMD ಪ್ರಕಾರ, 1901 ರಲ್ಲಿ ರೆಕಾರ್ಡ್-ಕೀಪಿಂಗ್ ಪ್ರಾರಂಭವಾದಾಗಿನಿಂದ ಭಾರತವು ಈ ವರ್ಷ ದಾಖಲೆ ತಾಪಮಾನವನ್ನು ಫೆಬ್ರವರಿಯಲ್ಲಿ ದಾಖಲಿಸಿದೆ. ಆದಾಗ್ಯೂ, ಪ್ರತಿಕೂಲ ವಾತಾವರಣದಿಂದ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾದ್ದರಿಂದ, ಇದು ಮಾರ್ಚ್‌ನಲ್ಲಿ ತಾಪಮಾನವನ್ನು ನಿಯಂತ್ರಣದಲ್ಲಿ ಇರಿಸಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ 6 ಜನ ಸಾವು

ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ಹಲವು ಭಾಗಗಳಲ್ಲಿ ಮುಂಗಾರು ಪೂರ್ವ ಮಳೆ, ಗುಡುಗು, ಆಲಿಕಲ್ಲು ಮಳೆ ಮತ್ತು ಮಿಂಚಿನ ಹೊಡೆತಗಳು ಬೆಳೆಗಳನ್ನು ಹಾನಿಗೊಳಿಸಿವೆ.

Published On - 5:52 pm, Sat, 8 April 23

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ