‘ಭಾರತ-ಯುಎಇ ಸಂಬಂಧ ಇನ್ನಷ್ಟು ಉತ್ತಮ ಮಟ್ಟ ತಲುಪಲಿವೆ’; ಉಪಪ್ರಧಾನಿ ಶೇಖ್ ಅಬ್ದುಲ್ಲಾಗೆ ಮೋದಿ ಸ್ವಾಗತ

ಯುಎಇ ಉಪಪ್ರಧಾನಿ ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಈ ಮೂಲಕ ಬೆಳೆಯುತ್ತಿರುವ ಭಾರತ-ಯುಎಇ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮೋದಿ ಎತ್ತಿ ತೋರಿಸಿದರು. ಈ ಭೇಟಿಯು ಕಾರ್ಯತಂತ್ರದ ಮಾತುಕತೆ ಮತ್ತು 15ನೇ ಜಂಟಿ ಆಯೋಗದ ಸಭೆಯ ಮೂಲಕ ಸಂಬಂಧಗಳನ್ನು ಬಲಪಡಿಸುವ ಗುರಿಯನ್ನು ಹೊಂದಿದೆ.

‘ಭಾರತ-ಯುಎಇ ಸಂಬಂಧ ಇನ್ನಷ್ಟು ಉತ್ತಮ ಮಟ್ಟ ತಲುಪಲಿವೆ’; ಉಪಪ್ರಧಾನಿ ಶೇಖ್ ಅಬ್ದುಲ್ಲಾಗೆ ಮೋದಿ ಸ್ವಾಗತ
ಯುಎಇ ಉಪಪ್ರಧಾನಿ ಶೇಖ್ ಅಬ್ದುಲ್ಲಾಗೆ ಮೋದಿ ಸ್ವಾಗತ
Follow us
ಸುಷ್ಮಾ ಚಕ್ರೆ
|

Updated on: Dec 12, 2024 | 10:37 PM

ನವದೆಹಲಿ: ದೆಹಲಿಗೆ ಭೇಟಿ ನೀಡಿದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಯುಎಇಯ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ಭಾರತ-ಯುಎಇ ಸಮಗ್ರ ಕಾರ್ಯತಂತ್ರದ ಪಾರ್ಟನರ್​ಶಿಪ್ ಅಭೂತಪೂರ್ವ ಎತ್ತರವನ್ನು ಸಾಧಿಸಲು ಸಿದ್ಧವಾಗಿದೆ. ಪಶ್ಚಿಮ ಏಷ್ಯಾ ಮತ್ತು ವಿಶಾಲ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ಮತ್ತು ಭದ್ರತೆಗಾಗಿ ಕೆಲಸ ಮಾಡಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು 4ನೇ ಕಾರ್ಯತಂತ್ರದ ಸಂವಾದ ಮತ್ತು 15ನೇ ಭಾರತ-ಯುಎಇ ಜಂಟಿ ಆಯೋಗದ ಸಭೆಯಲ್ಲಿ (ಜೆಸಿಎಂ) ಭಾಗವಹಿಸಲು ಇಂದು ಬೆಳಿಗ್ಗೆ ದೆಹಲಿಗೆ ಆಗಮಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ವಕ್ತಾರ ರಣಧೀರ್ ಜೈಸ್ವಾಲ್ ಅವರು ಯುಎಇ ನಾಯಕ ಶೇಖ್ ಅಬ್ದುಲ್ಲಾ ಅವರನ್ನು ಸ್ವಾಗತಿಸಿದರು. ಈ ಭೇಟಿಯು ಭಾರತ ಮತ್ತು ಯುಎಇ ನಡುವಿನ ಬಹುಮುಖಿ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವಂದೇ ಮಾತರಂ ಹಾಡಿ ಪ್ರಧಾನಿ ಮೋದಿ ಮನ ಗೆದ್ದ ಮಿಜೋರಾಂ ಬಾಲಕಿ

ಮುಂದಿನ ಐದು ವರ್ಷಗಳಲ್ಲಿ ದ್ವಿಪಕ್ಷೀಯ ವ್ಯಾಪಾರದಲ್ಲಿ ಮಹತ್ವಾಕಾಂಕ್ಷೆಯ ಗುರಿಯನ್ನು ಸಾಧಿಸಲು ಎರಡೂ ರಾಷ್ಟ್ರಗಳು ಬದ್ಧವಾಗಿವೆ. ಬೆಳೆಯುತ್ತಿರುವ ವ್ಯಾಪಾರ ಸಂಬಂಧವು ಭಾರತ ಮತ್ತು ಯುಎಇ ನಡುವಿನ ಆರ್ಥಿಕ ಪಾಲುದಾರಿಕೆಯನ್ನು ಒತ್ತಿಹೇಳುತ್ತದೆ. ನಡೆಯುತ್ತಿರುವ ಕಾರ್ಯತಂತ್ರದ ಸಂವಾದ ಮತ್ತು ಜಂಟಿ ಆಯೋಗದ ಸಭೆಯು ವ್ಯಾಪಾರ, ಇಂಧನ, ಭದ್ರತೆ, ಸಂಸ್ಕೃತಿ ಮತ್ತು ಸಂರಕ್ಷಣೆಯಂತಹ ಕ್ಷೇತ್ರಗಳಲ್ಲಿ ಸಹಯೋಗಕ್ಕಾಗಿ ಹೆಚ್ಚಿನ ಅವಕಾಶಗಳನ್ನು ಅನ್ವೇಷಿಸುವ ಗುರಿಯನ್ನು ಹೊಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!