ಭಾರತ-ಅಮೆರಿಕ ಬಾಂಧವ್ಯ ಭವಿಷ್ಯದಲ್ಲಿ ಇನ್ನಷ್ಟು ಗಟ್ಟಿಯಾಗಲಿದೆ; ಜೈಶಂಕರ್ ವಿಶ್ವಾಸ

ಅಮೆರಿಕ ಅಧ್ಯಕ್ಷರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಗೆಲುವಿನ ನಗು ಬೀರಿದ್ದಾರೆ. ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರನ್ನು ಹಿಂದಿಕ್ಕಿ ಮುನ್ನಡೆ ಸಾಧಿಸಿರುವ ಟ್ರಂಪ್​ ಗೆಲುವಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಶುಭಾಶಯ ಕೋರಿದ್ದಾರೆ.

ಭಾರತ-ಅಮೆರಿಕ ಬಾಂಧವ್ಯ ಭವಿಷ್ಯದಲ್ಲಿ ಇನ್ನಷ್ಟು ಗಟ್ಟಿಯಾಗಲಿದೆ; ಜೈಶಂಕರ್ ವಿಶ್ವಾಸ
ಸಚಿವ ಜೈಶಂಕರ್
Follow us
ಸುಷ್ಮಾ ಚಕ್ರೆ
|

Updated on: Nov 06, 2024 | 3:23 PM

ನವದೆಹಲಿ: ಯುನೈಟೆಡ್ ಸ್ಟೇಟ್ಸ್ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಭಾರೀ ಮುನ್ನಡೆ ಸಾಧಿಸುವ ಮೂಲಕ ಗೆಲುವನ್ನು ಖಾತರಿಪಡಿಸಿಕೊಂಡಿದ್ದಾರೆ. ಈ ನಡುವೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಕಳೆದ 5 ಅಧ್ಯಕ್ಷೀಯ ಅವಧಿಗಳಲ್ಲಿ ಭಾರತವು ಯುನೈಟೆಡ್ ಸ್ಟೇಟ್​ನೊಂದಿಗಿನ ತನ್ನ ಸಂಬಂಧದಲ್ಲಿ ಸ್ಥಿರವಾದ ಪ್ರಗತಿಯನ್ನು ಕಂಡಿದೆ. ಚುನಾವಣೆಯ ಬಳಿಕ ಅಮೆರಿಕದೊಂದಿಗಿನ ಭಾರತದ ಸಂಬಂಧವು ಮತ್ತಷ್ಟು ಬಲಗೊಳ್ಳಲಿದೆ ಎಂದು ಹೇಳಿದ್ದಾರೆ.

ಕ್ಯಾನ್‌ಬೆರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಮೆರಿಕನ್ನರು ಇನ್ನೂ ಮತ ಚಲಾಯಿಸುತ್ತಿರುವ ಸಂದರ್ಭದಲ್ಲಿ ಮಾತನಾಡಿದ ಭಾರತದ ಕೇಂದ್ರ ಸಚಿವ ಜೈಶಂಕರ್, ಅಮೆರಿಕದೊಂದಿಗೆ ಭಾರತದ ಸಂಬಂಧ ಭವಿಷ್ಯದಲ್ಲಿ ಇನ್ನೂ ಬೆಳೆಯಲಿದೆ ಎಂದು ಹೇಳಿದ್ದಾರೆ. ಕ್ಯಾನ್‌ಬೆರಾದಲ್ಲಿ ಆಸ್ಟ್ರೇಲಿಯಾದ ಸಹವರ್ತಿ ಪೆನ್ನಿ ವಾಂಗ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವ ಜೈಶಂಕರ್ ಅಮೆರಿಕ, ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ಗಳನ್ನು ಒಳಗೊಂಡಿರುವ ಕ್ವಾಡ್‌ನ ಭವಿಷ್ಯದ ಬಗ್ಗೆ ಆಶಾವಾದವನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ: US Presidential Poll: ಡೊನಾಲ್ಡ್ ಟ್ರಂಪ್ ಗೆಲುವು, ಐತಿಹಾಸಿಕ ವಿಜಯಕ್ಕಾಗಿ ಸ್ನೇಹಿತನ ಅಭಿನಂದಿಸಿದ ಮೋದಿ

ರಿಪಬ್ಲಿಕನ್ ನಾಯಕ ಮತ್ತು ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ಕಾಳಜಿ ಇದೆಯೇ ಮತ್ತು ಅವರ ಅಧ್ಯಕ್ಷತೆಯಲ್ಲಿ ಕ್ವಾಡ್ ಮೇಲೆ ಪರಿಣಾಮ ಬೀರುತ್ತದೆಯೇ ಎಂದು ಇಬ್ಬರು ಸಚಿವರನ್ನು ಕೇಳಲಾಯಿತು.

ಸಚಿವ ಜೈಶಂಕರ್ ಸುದ್ದಿಗಾರರೊಂದಿಗೆ ಮಾತನಾಡಿ, “ಹಿಂದಿನ ಡೊನಾಲ್ಡ್ ಟ್ರಂಪ್ ಅಧ್ಯಕ್ಷತೆ ಸೇರಿದಂತೆ ಕಳೆದ ಐದು ಅಧ್ಯಕ್ಷರ ಅವಧಿಗಳಲ್ಲಿ ನಾವು ಯುಎಸ್ ಜೊತೆಗಿನ ನಮ್ಮ ಸಂಬಂಧದಲ್ಲಿ ಸ್ಥಿರವಾದ ಪ್ರಗತಿಯನ್ನು ಕಂಡಿದ್ದೇವೆ. ಹಾಗಾಗಿ, ನಾವು ಅಮೆರಿಕದ ಚುನಾವಣೆಯನ್ನು ನೋಡಿದಾಗ, ತೀರ್ಪು ಏನೇ ಇರಲಿ, ನಮ್ಮ ಸಂಬಂಧದ ಬಗ್ಗೆ ನಮಗೆ ತುಂಬಾ ವಿಶ್ವಾಸವಿದೆ. ಯುನೈಟೆಡ್ ಸ್ಟೇಟ್​ನೊಂದಿಗೆ ನಮ್ಮ ದೇಶದ ಸಂಬಂಧ ಬೆಳೆಯುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: US Presidential Election 2024: ಇಂದು ಅಮೆರಿಕ ಅಧ್ಯಕ್ಷೀಯ ಚುನಾವಣೆ, ಫಲಿತಾಂಶ ಯಾವಾಗ? ಇಲ್ಲಿದೆ ಮಾಹಿತಿ

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಚೀನಾದ ಆಕ್ರಮಣಕಾರಿ ನಡವಳಿಕೆಯನ್ನು ಎದುರಿಸಲು “ಕ್ವಾಡ್” ಅಥವಾ ಚತುರ್ಭುಜ ಒಕ್ಕೂಟವನ್ನು ಸ್ಥಾಪಿಸುವ ದೀರ್ಘಾವಧಿಯ ಪ್ರಸ್ತಾಪಕ್ಕೆ ಯುಎಸ್, ಜಪಾನ್, ಭಾರತ ಮತ್ತು ಆಸ್ಟ್ರೇಲಿಯಾ 2017ರಲ್ಲಿ ರೂಪು ನೀಡಿದ್ದವು.

ನಾಟಕ ಮತ್ತು ಅನಿಶ್ಚಿತತೆಯಿಂದ ಗುರುತಿಸಲ್ಪಟ್ಟ ಅಧ್ಯಕ್ಷೀಯ ಚುನಾವಣೆಯಲ್ಲಿ ಲಕ್ಷಾಂತರ ಅಮೆರಿಕನ್ನರು ಮತ ಚಲಾಯಿಸಿದ ನಂತರ ಅಮೆರಿಕದಲ್ಲಿ ಎಣಿಕೆ ಪ್ರಾರಂಭವಾಯಿತು. ಡೆಮಾಕ್ರಟಿಕ್ ಅಭ್ಯರ್ಥಿ ಮತ್ತು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮತ್ತು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಿಂಗಳುಗಳ ತೀವ್ರ ಪ್ರಚಾರದ ಈ ಚುನಾವಣೆಯಲ್ಲಿ ಫಲಿತಾಂಶಗಳಿಗಾಗಿ ಕಾಯುತ್ತಿದ್ದಾರೆ. ಅಮೆರಿಕದ ಜಾರ್ಜಿಯಾ, ಉತ್ತರ ಕೆರೊಲಿನಾ, ಅರಿಜೋನಾ, ಮಿಚಿಗನ್, ನೆವಾಡಾ, ಪೆನ್ಸಿಲ್ವೇನಿಯಾ ಮತ್ತು ವಿಸ್ಕಾನ್ಸಿನ್​ನಲ್ಲಿ ಟ್ರಂಪ್- ಕಮಲಾ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!