AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರ ಭೇಟಿಗೆ ಪಾಕ್ ನೂತನ ಪ್ರಧಾನಿ ಶೆಹ್​ಬಾಝ್ ಷರೀಫ್ ಟೀಕೆ

ಪಾಕಿಸ್ತಾನವು ತನ್ನ ಹಳೆಯ ಚಾಳಿಯನ್ನು ಇನ್ನೂ ಬಿಟ್ಟಿಲ್ಲ. ಅಧಿಕಾರ ಸ್ವೀಕರಿಸಿ ಕೇವಲ 15 ದಿನಗಳಷ್ಟೇ ಆಗಿರುವ ಪಾಕಿಸ್ತಾನದ ನೂತನ ಪ್ರಧಾನಿ ಶೆಹ್​ಬಾಝ್​​ ಷರೀಫ್​ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರ ಭೇಟಿಯನ್ನು ಆಕ್ಷೇಪಿಸಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರ ಭೇಟಿಗೆ ಪಾಕ್ ನೂತನ ಪ್ರಧಾನಿ ಶೆಹ್​ಬಾಝ್ ಷರೀಫ್ ಟೀಕೆ
ಪಾಕ್ ಪ್ರಧಾನಿ ಶೆಹಬಾಝ್ ಷರೀಫ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Apr 26, 2022 | 10:27 AM

Share

ದೆಹಲಿ: ಪಾಕಿಸ್ತಾನವು ತನ್ನ ಹಳೆಯ ಚಾಳಿಯನ್ನು ಇನ್ನೂ ಬಿಟ್ಟಿಲ್ಲ. ಅಧಿಕಾರ ಸ್ವೀಕರಿಸಿ ಕೇವಲ 15 ದಿನಗಳಷ್ಟೇ ಆಗಿರುವ ನೂತನ ಪಾಕಿಸ್ತಾನದ ನೂತನ ಪ್ರಧಾನಿ ಶೆಹ್​ಬಾಝ್​​ ಷರೀಫ್​ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕಾಶ್ಮೀರ ಭೇಟಿಯನ್ನು ಆಕ್ಷೇಪಿಸಿ ಟ್ವೀಟ್ ಮಾಡಿದ್ದಾರೆ. ಅಧಿಕಾರ ಸ್ವೀಕರಿಸುವ ಮೊದಲಿನಿಂದಲೂ ಅವರು ಕಾಶ್ಮೀರ ವಿಷಯವೇ ಭಾರತ ಮತ್ತು ಪಾಕಿಸ್ತಾನಗಳ ನಡುವಣ ಶಾಂತಿಗೆ ಇರುವ ತಡೆ ಎಂದು ಪ್ರತಿಪಾದಿಸುತ್ತಿದ್ದರು.

‘ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಕಾಶ್ಮೀರ ಭೇಟಿ ಮತ್ತು ವಿವಿಧ ಜಲವಿದ್ಯುತ್ ಸ್ಥಾವರಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಕಾಮಗಾರಿಗಳು ಸಿಂಧು ನದಿ ಒಪ್ಪಂದದ ಆಶಯವನ್ನು ಉಲ್ಲಂಘಿಸಿವೆ. ಇದು ಕಾಶ್ಮೀರದಲ್ಲಿ ಎಲ್ಲವೂ ಸರಿಯಾಗಿದೆ, ಸಾಮಾನ್ಯ ಸ್ಥಿತಿ ನೆಲೆಗೊಂಡಿದೆ ಎಂದು ಬಿಂಬಿಸುವ ಭಾರತದ ಹತಾಶ ಪ್ರಯತ್ನ’ ಎಂದು ಟ್ವೀಟ್ ಮಾಡಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು, ಭಾನುವಾರ ಕಾಶ್ಮೀರ ಕಣಿವೆಗೆ ಭೇಟಿ ನೀಡಿ ಸುಮಾರು ₹ 20,000 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಪಾಕ್ ಪ್ರಧಾನಿ ಶೆಹಬಾಝ್ ಷರೀಫ್ ಪತ್ರ ವಿನಿಮಯ ಮಾಡಿಕೊಂಡಿದ್ದಾರೆ. ದ್ವಿಪಕ್ಷೀಯ ಮಾತುಕತೆ ಮತ್ತು ವ್ಯಾಪಾರ ಒಪ್ಪಂದದ ಬಗ್ಗೆ ಅವರು ಈ ಪತ್ರಗಳಲ್ಲಿ ಪ್ರಸ್ತಾಪಿಸಿದ್ದಾರೆ ಎಂದು ತಿಳಿದುಬಂದಿದೆ. ಶಹಬಾಝ್ ಷರೀಫ್ ಹೇಳಿಕೆಗೆ ಭಾರತ ಸರ್ಕಾರ ಈವರೆಗೆ ಪ್ರತಿಕ್ರಿಯಿಸಿಲ್ಲ.

ಇದನ್ನೂ ಓದಿ: ನಮಗೆ ತೊಂದರೆಯಾಗುತ್ತಿದೆ, ಆಕ್ರಮಣವನ್ನು ಯಾವ ಕಾರಣಕ್ಕೂ ಸಹಿಸುವುದಿಲ್ಲ: ಪಾಕಿಸ್ತಾನಕ್ಕೆ ಖಡಕ್​ ಎಚ್ಚರಿಕೆ ನೀಡಿದ ತಾಲಿಬಾನ್​

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಉನ್ನತ ವ್ಯಾಸಂಗ ಮಾಡಿದರೆ ಭಾರತದಲ್ಲಿ ಉದ್ಯೋಗ ಸಿಗಲ್ಲ

Published On - 10:23 am, Tue, 26 April 22