ಪಾಕಿಸ್ತಾನ ಭಯೋತ್ಪಾದನೆ, ಹಗೆತನದಿಂದ ಮುಕ್ತವಾದ ಅನುಕೂಲಕರ ವಾತಾವರಣ ಸೃಷ್ಟಿಸಬೇಕು: ಮೋದಿ

ಭಾರತವು ಪಾಕಿಸ್ತಾನದೊಂದಿಗೆ ಸಾಮಾನ್ಯ ದ್ವಿಪಕ್ಷೀಯ ಬಾಂಧವ್ಯವನ್ನು ಬಯಸುತ್ತದೆ ಎಂದು ಹೇಳಿದ ಪ್ರಧಾನಿ ಮೋದಿ, ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾದ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವುದು ಅವರ ಜವಾಬ್ದಾರಿಯಾಗಿದೆ ಎಂದಿದ್ದಾರೆ

ಪಾಕಿಸ್ತಾನ ಭಯೋತ್ಪಾದನೆ, ಹಗೆತನದಿಂದ ಮುಕ್ತವಾದ ಅನುಕೂಲಕರ ವಾತಾವರಣ ಸೃಷ್ಟಿಸಬೇಕು: ಮೋದಿ
ನರೇಂದ್ರ ಮೋದಿ
Follow us
ರಶ್ಮಿ ಕಲ್ಲಕಟ್ಟ
|

Updated on:May 19, 2023 | 9:11 PM

ಟೋಕಿಯೊ: ಭಾರತವು ಪಾಕಿಸ್ತಾನದೊಂದಿಗೆ (Pakistan) ಸಾಮಾನ್ಯ ಮತ್ತು ನೆರೆಹೊರೆಯ ಸಂಬಂಧವನ್ನು ಬಯಸುತ್ತದೆ ಆದರೆ ಭಯೋತ್ಪಾದನೆಯಿಂದ ಮುಕ್ತವಾದ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವುದು ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಇಸ್ಲಾಮಾಬಾದ್‌ನ ಜವಾಬ್ದಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ನಿಕ್ಕಿ ಏಷ್ಯಾಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಭಾರತವು ಪಾಕಿಸ್ತಾನದೊಂದಿಗೆ ಸಾಮಾನ್ಯ ದ್ವಿಪಕ್ಷೀಯ ಬಾಂಧವ್ಯವನ್ನು ಬಯಸುತ್ತದೆ ಎಂದು ಹೇಳಿದ ಪ್ರಧಾನಿ ಮೋದಿ, ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾದ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವುದು ಅವರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಜವಾಬ್ದಾರಿ ಪಾಕಿಸ್ತಾನದ ಮೇಲಿದೆ ಎಂದಿದ್ದಾರೆ.

ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನದ ಬೆಂಬಲದ ಬಗ್ಗೆ ಭಾರತವು ತನ್ನ ಕಳವಳವನ್ನು ಪದೇ ಪದೇ ವ್ಯಕ್ತಪಡಿಸುತ್ತಿದೆ . ಅದೇ ವೇಳೆ ಭಯೋತ್ಪಾದನೆ ಮತ್ತು ಮಾತುಕತೆಗಳು ಒಟ್ಟಿಗೆ ಹೋಗಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ.

ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಈ ತಿಂಗಳ ಆರಂಭದಲ್ಲಿ ಗೋವಾದಲ್ಲಿ ನಡೆದ ಎಸ್‌ಸಿಒ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಿದ್ದರು.ಆದರೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಯಾವುದೇ ದ್ವಿಪಕ್ಷೀಯ ಮಾತುಕತೆ ನಡೆದಿಲ್ಲ. ಜಪಾನ್‌ನಲ್ಲಿ G7 ಶೃಂಗಸಭೆಗೆ ಹೊರಡುವ ಮುನ್ನ ನಿಕ್ಕಿ ಏಷ್ಯಾಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಈ ಮಾತುಗಳನ್ನು ಹೇಳಿದ್ದಾರೆ.

ಇತ್ತ  ಉಕ್ರೇನ್‌ನ ಮೇಲಿನ ಆಕ್ರಮಣಕ್ಕಾಗಿ ದೀರ್ಘಕಾಲದ ಮಿಲಿಟರಿ ಪಾಲುದಾರ ರಷ್ಯಾವನ್ನು ಭಾರತ ಸ್ಪಷ್ಟವಾಗಿ ಖಂಡಿಸಿಲ್ಲ. ಮೋದಿ ಪದೇ ಪದೇ ಶಾಂತಿಗಾಗಿ ಕರೆ ನೀಡುತ್ತಿರುವಾಗ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮುಂದೆಯೇ ಇಂದಿನ ಯುಗ ಯುದ್ಧದ ಯುಗವಲ್ಲ ಎಂದು ಹೇಳಿದ್ದರೂ ಭಾರತವು ರಷ್ಯಾದೊಂದಿಗೆ ಚುರುಕಾದ ವ್ಯವಹಾರವನ್ನು ಮುಂದುವರೆಸಿದೆ.

ಭಾರತವು ಮಧ್ಯವರ್ತಿ ಪಾತ್ರವನ್ನು ವಹಿಸಬಹುದೇ ಎಂಬ ಪ್ರಶ್ನೆಗೆ, ಉಕ್ರೇನ್ ಸಂಘರ್ಷದ ಬಗ್ಗೆ ತಮ್ಮ ದೇಶದ ನಿಲುವು ಸ್ಪಷ್ಟ ಮತ್ತು ಅಚಲವಾಗಿದೆ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: PM Modi Japan Visit: G7 ಶೃಂಗಸಭೆಯಲ್ಲಿ ಭಾಗವಹಿಸಲು ಹಿರೋಷಿಮಾ ತಲುಪಿದ ಪ್ರಧಾನಿ ಮೋದಿ

ಭಾರತವು ಶಾಂತಿಯನ್ನೇ ಬಯಸುತ್ತದೆ ಮತ್ತು ಇದೇ ನಿಲುವು ಮುಂದುವರಿಸುತ್ತದೆ. ವಿಶೇಷವಾಗಿ ಆಹಾರ, ಇಂಧನ ಮತ್ತು ರಸಗೊಬ್ಬರಗಳ ಬೆಲೆ ಏರಿಕೆಯ ಸಂದರ್ಭದಲ್ಲಿ ಮೂಲಭೂತ ಅಗತ್ಯಗಳನ್ನು ಪೂರೈಸುವಲ್ಲಿ ಸವಾಲುಗಳನ್ನು ಎದುರಿಸುವವರಿಗೆ ಬೆಂಬಲ ನೀಡಲು ನಾವು ಬದ್ಧರಾಗಿದ್ದೇವೆ. ನಾವು ರಷ್ಯಾ ಮತ್ತು ಉಕ್ರೇನ್ ಎರಡರೊಂದಿಗೂ ಸಂವಹನವನ್ನು ನಿರ್ವಹಿಸುತ್ತೇವೆ. ಸಹಕಾರ ಮತ್ತು ಸಹಯೋಗವು ನಮ್ಮ ಕಾಲವನ್ನು ವ್ಯಾಖ್ಯಾನಿಸಬೇಕು, ಸಂಘರ್ಷವಲ್ಲ ಎಂದಿದ್ದಾರೆ ಮೋದಿ.

ಮುಂದಿನ ತಿಂಗಳು, ಮೋದಿ ಅವರು ಪ್ರಮುಖ ಕಾರ್ಯತಂತ್ರದ ಪಾಲುದಾರ ಎಂದು ಕರೆದ ಯುಎಸ್‌ಗೆ ಪ್ರಯಾಣಿಸಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:06 pm, Fri, 19 May 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್