ಕಳೆದ ಮೂರ್ನಾಲ್ಕು ದಿನಗಳಿಂದ ಕರ್ನಾಟಕದ ಕೆಲವೆಡೆ ಮಳೆಯಾಗಿತ್ತು, ಇದೀಗ ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ.
ಹದರನಹಳ್ಳಿ, ಚಾಮರಾಜನಗರದಲ್ಲಿ ಮಳೆಯಾಗಿದೆ, ಗರಿಷ್ಠ ಉಷ್ಣಾಂಶವು ಕರಾವಳಿಯಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ಕಲಬುರಗಿಯಲ್ಲಿ 39.1 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Bengaluru Rains: ಬೆಂಗಳೂರಿನಲ್ಲಿ ಬಿಸಿಲ ಝಳದ ಮಧ್ಯೆ ಮಳೆಯ ಸಿಂಚನ, ಮುಂದಿನ 48 ಗಂಟೆಗಳ ಕಾಲ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆ
ಇನ್ನು ಅರುಣಾಚಲಪ್ರದೇಶ, ಅಸ್ಸಾಂ, ಮೇಘಾಲಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಿಹಾರ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮಾರ್ಚ್ 30 ಮತ್ತು 31 ರಂದು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ವಾಯುವ್ಯ ಭಾರತದಲ್ಲಿ, ಮುಂದಿನ ಕೆಲವು ದಿನಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಮತ್ತು 30 ಮತ್ತು 31 ರಂದು ಮಳೆಯಾಗಲಿದೆ.
ಕರಾವಳಿ ಆಂಧ್ರಪ್ರದೇಶ, ಯಾನಂ, ತೆಲಂಗಾಣ, ರಾಯಲಸೀಮಾ, ದಕ್ಷಿಣ ಒಳನಾಡಿನ ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಮಾರ್ಚ್ 31 ರವರೆಗೆ ಗುಡುಗು ಮತ್ತು ಮಿಂಚು/ಗಾಳಿ ಸಹಿತ ಪ್ರತ್ಯೇಕವಾದ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ