India Weather: ಈ ಮೂರು ರಾಜ್ಯಗಳಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​ ಘೋಷಣೆ

ದೇಶದ ವಿವಿಧೆಡೆ ತಾಪಮಾನ ಏರಿಕೆಯಾಗುತ್ತಿದ್ದಂತೆ ಮಳೆಯೂ ಶುರುವಾಗಿದೆ. ಪೂರ್ವ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್​ನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

India Weather: ಈ ಮೂರು ರಾಜ್ಯಗಳಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್​ ಘೋಷಣೆ
ಮಳೆImage Credit source: Hindustan Times
Follow us
ನಯನಾ ರಾಜೀವ್
|

Updated on: Feb 13, 2024 | 7:39 AM

ಪೂರ್ವ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್​ನಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ಈ ಭಾಗದ ಜನರನ್ನು ಮನೆಯಲ್ಲಿಯೇ ಇರುವಂತೆ ಕೇಳಿಕೊಂಡಿದೆ, ಗುಡುಗು, ಮಿಂಚು, ಆಲಿಕಲ್ಲಿನಿಂತ ಕೂಡಿದ ಅಕಾಲಿಕ ಮಳೆ ಇದಾಗಿರಲಿದೆ. ವಿದರ್ಭಾದಲ್ಲಿ ಕಡಿಮೆ ಉಷ್ಣವಲಯದಲ್ಲಿ ಚಂಡಮಾರುತ ಉಂಟಾಗುತ್ತಿದ್ದು ಮರಾಠವಾಡದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಇಂದು ವಿದರ್ಭಾ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ ಮಳೆಯಾಗಲಿದೆ. ಫೆಬ್ರವರಿ 13-15ರ ವೇಳೆ ಒಡಿಶಾದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 5 ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ಕನಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್​ನಷ್ಟು ರಷ್ಟು ಕ್ರಮೇಣ ಏರಿಕೆಯಾಗುವ ಸಾಧ್ಯತೆಯಿದೆ.

ಕರ್ನಾಟಕ ಹವಾಮಾನ ವರದಿ ಕರ್ನಾಟಕದ ಬಹುತೇಕ ಕಡೆ ಒಣಹವೆ ಮುಂದುವರೆದಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವೆಡೆ ಗರಿಷ್ಠ ಉಷ್ಣಾಂಶ ಹೆಚ್ಚಾಗಿದೆ. ಚಿಕ್ಕನಹಳ್ಳಿಯಲ್ಲಿ 12.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸೆಕೆ ಪ್ರಮಾಣ ಹೆಚ್ಚಳ

ಎಚ್​ಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ. 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಾಮರಾಜನಗರದಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,​ 13.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಒಂದೇ ಬೈಕ್​ನಲ್ಲಿ 8 ಜನ, ಜೊತೆಗೊಂದು ಹಾಸಿಗೆ; ಪೊಲೀಸರೇ ಕಂಗಾಲು!
ಒಂದೇ ಬೈಕ್​ನಲ್ಲಿ 8 ಜನ, ಜೊತೆಗೊಂದು ಹಾಸಿಗೆ; ಪೊಲೀಸರೇ ಕಂಗಾಲು!
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ