India Weather: ಈ ರಾಜ್ಯಗಳಿಗೆ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ದೇಶಾದ್ಯಂತ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದ್ದು, ಈ ನಡುವೆ ವರುಣ ದೇವನ ಆಗಮನವೂ ಆಗಿದೆ, ದೆಹಲಿ ಹಾಗೂ ಎನ್ಸಿಆರ್ನಲ್ಲಿ ಗುರುವಾರ ಸಾಧಾರಣ ಮಳೆಯಾಗಿದೆ. ಮಾರ್ಚ್ 19ರವರೆಗೂ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಲವು ರಾಜ್ಯಗಳಲ್ಲಿ ಮಾರ್ಚ್ 19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಲಿದೆ. ಕೇರಳ, ಮಾಹೆ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರಾಖಂಡದಲ್ಲಿ, ಉತ್ತರಾಖಂಡದ ಉತ್ತರಕಾಶಿ, ಚಮೋಲಿ, ಪಿಥೋರಗಢ, ಬಾಗೇಶ್ವರ್ ಮತ್ತು ರುದ್ರಪ್ರಯಾಗ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಕಡಿಮೆ ಮಳೆ, ಹಿಮ ಬೀಳುವ ಮುನ್ಸೂಚನೆ ಇದೆ. ರಾಜ್ಯದ ಉತ್ತರಕಾಶಿ, ಚಮೋಲಿ, ಪಿಥೋರಗಢ, ಬಾಗೇಶ್ವರ ಮತ್ತು ರುದ್ರಪ್ರಯಾಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಗುಡುಗು ಸಹಿತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜಾರ್ಖಂಡ್, ವಿದರ್ಭ, ಛತ್ತೀಸ್‌ಗಢ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ ಮಾರ್ಚ್ 16 ರಿಂದ 19 ರವರೆಗೆ ಮಳೆಯಾಗಲಿದೆ.
ಕರ್ನಾಟಕದ ಹವಾಮಾನ ಹೇಗಿದೆ? ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಗರಿಷ್ಠ ಉಷ್ಣಾಂಶ 2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕೊಡಗಿನಲ್ಲಿ ತಂಪೆರೆದ ಮಳೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ
ಎಚ್ಎಎಲ್ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ದಾಖಲಾಗಿದೆ.
ಹೊನ್ನಾವರದಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಇಸಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ