AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Weather: ಮುಂದಿನ ಒಂದು ವಾರಗಳ ಕಾಲ 11ಕ್ಕೂ ಅಧಿಕ ರಾಜ್ಯಗಳಲ್ಲಿ ಮಳೆ, ಕರ್ನಾಟಕದಲ್ಲಿ ಒಣಹವೆ

ಮುಂದಿನ 24 ಗಂಟೆಗಳಲ್ಲಿ 11ಕ್ಕೂ ಅಧಿಕ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ. ಮುಂದಿನ ಮೂರು ದಿನಗಳಲ್ಲಿ ಈಶಾನ್ಯ ದಿಕ್ಕಿನತ್ತ ಸಾಗಿದರೆ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಆರು ದಿನಗಳಲ್ಲಿ ಅರುಣಾಚಲ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಹಿಮಪಾತವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

India Weather: ಮುಂದಿನ ಒಂದು ವಾರಗಳ ಕಾಲ 11ಕ್ಕೂ ಅಧಿಕ ರಾಜ್ಯಗಳಲ್ಲಿ ಮಳೆ, ಕರ್ನಾಟಕದಲ್ಲಿ ಒಣಹವೆ
ಮಳೆImage Credit source: Hindustan Times
ನಯನಾ ರಾಜೀವ್
|

Updated on: Mar 12, 2024 | 7:48 AM

Share

ಕರ್ನಾಟಕದಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದೆ, ದಕ್ಷಿಣ ಒಳನಾಡು, ಕರಾವಳಿ ಉತ್ತರ ಒಳನಾಡಿನ ಎಲ್ಲಾ ಕಡೆಯಲ್ಲೂ ಸೆಕೆ ಹೆಚ್ಚಿದೆ. ಮುಂದಿನ ಒಂದು ವಾರಗಳ ಕಾಲ 11ಕ್ಕೂ ಅಧಿಕ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಜನರು ಮಳೆಯ ಬರುವಿಕೆಗಾಗಿ ಈಗಲೇ ಕಾದು ನೋಡುತ್ತಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಉಷ್ಣಾಂಶ ಹೆಚ್ಚಾಗಲಿದೆ.

ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಸೆಕೆ ಹೆಚ್ಚಾಗಲಿದೆ. ಬಾಗಲಕೋಟೆಯಲ್ಲಿ 38.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 19.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಎಚ್​ಎಎಲ್​ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕಲಬುರಗಿಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ ದಾಖಲು

11ಕ್ಕೂ ಅಧಿಕ ರಾಜ್ಯಗಳಲ್ಲಿ ಮಳೆ ಸಾಧ್ಯತೆ ಹವಾಮಾನ ಇಲಾಖೆಯು ಮಾರ್ಚ್ 13 ಮತ್ತು ಮಾರ್ಚ್ 14 ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಲಘುವಾಗಿ ಸಾಧಾರಣ ಮಳೆ ಹಿಮಪಾತವಾಗಬಹುದು ಎಂದು ಅಂದಾಜಿಸಲಾಗಿದೆ.

ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಪ್ರದೇಶಗಳು ಮಾರ್ಚ್ 13 ರಂದು ಲಘು ಮಳೆಗೆ ಸಾಕ್ಷಿಯಾಗಲಿವೆ. ಮಾರ್ಚ್ 14 ರವರೆಗೆ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಲಘು ಮಳೆಯ ಮುನ್ಸೂಚನೆ ನೀಡಿದೆ. ಗಂಗಾನದಿ ಪಶ್ಚಿಮ ಬಂಗಾಳ ಪ್ರದೇಶವು ಮಾರ್ಚ್ 13 ರಿಂದ ಮಾರ್ಚ್ 17 ರವರೆಗೆ ಸ್ವಲ್ಪ ಮಳೆಯಾಗುವ ನಿರೀಕ್ಷೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು