ಕರ್ನಾಟಕದಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುತ್ತಿದೆ, ದಕ್ಷಿಣ ಒಳನಾಡು, ಕರಾವಳಿ ಉತ್ತರ ಒಳನಾಡಿನ ಎಲ್ಲಾ ಕಡೆಯಲ್ಲೂ ಸೆಕೆ ಹೆಚ್ಚಿದೆ. ಮುಂದಿನ ಒಂದು ವಾರಗಳ ಕಾಲ 11ಕ್ಕೂ ಅಧಿಕ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನರು ಮಳೆಯ ಬರುವಿಕೆಗಾಗಿ ಈಗಲೇ ಕಾದು ನೋಡುತ್ತಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದಲ್ಲಿ ಉಷ್ಣಾಂಶ ಹೆಚ್ಚಾಗಲಿದೆ.
ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಸೆಕೆ ಹೆಚ್ಚಾಗಲಿದೆ. ಬಾಗಲಕೋಟೆಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 19.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಎಚ್ಎಎಲ್ನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕಲಬುರಗಿಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ ದಾಖಲು
11ಕ್ಕೂ ಅಧಿಕ ರಾಜ್ಯಗಳಲ್ಲಿ ಮಳೆ ಸಾಧ್ಯತೆ
ಹವಾಮಾನ ಇಲಾಖೆಯು ಮಾರ್ಚ್ 13 ಮತ್ತು ಮಾರ್ಚ್ 14 ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು ಮತ್ತು ಮಿಂಚುಗಳೊಂದಿಗೆ ಲಘುವಾಗಿ ಸಾಧಾರಣ ಮಳೆ ಹಿಮಪಾತವಾಗಬಹುದು ಎಂದು ಅಂದಾಜಿಸಲಾಗಿದೆ.
ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ರಾಜಸ್ಥಾನ ಪ್ರದೇಶಗಳು ಮಾರ್ಚ್ 13 ರಂದು ಲಘು ಮಳೆಗೆ ಸಾಕ್ಷಿಯಾಗಲಿವೆ. ಮಾರ್ಚ್ 14 ರವರೆಗೆ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಲಘು ಮಳೆಯ ಮುನ್ಸೂಚನೆ ನೀಡಿದೆ. ಗಂಗಾನದಿ ಪಶ್ಚಿಮ ಬಂಗಾಳ ಪ್ರದೇಶವು ಮಾರ್ಚ್ 13 ರಿಂದ ಮಾರ್ಚ್ 17 ರವರೆಗೆ ಸ್ವಲ್ಪ ಮಳೆಯಾಗುವ ನಿರೀಕ್ಷೆಯಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ