India Weather: ಕರ್ನಾಟಕ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ
ಹಲವು ರಾಜ್ಯಗಳಲ್ಲಿ ಬಿಸಿಲಿನ ತಾಪ ಏರಿಕೆಯಾಗುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ಕರ್ನಾಟಕ, ದೆಹಲಿ ಸೇರಿ ಕೆಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ಪಶ್ಚಿಮ ಬಂಗಾಳ, ದೆಹಲಿ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಡೆಯೂ ಚಳಿಯ ವಾತಾವರಣ ಮುಗಿದಿದ್ದು ದಿನದಿಂದ ದಿನಕ್ಕೆ ಬಿಸಿಲ ಕಾವು ಹೆಚ್ಚಾಗಿದೆ. ಈಶಾನ್ಯ ಮತ್ತು ಪೂರ್ವ ಭಾರತದಲ್ಲಿ ಚಂಡಮಾರುತದೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿಂದೆ ಮಧ್ಯ ಭಾರತದ ಹಲವು ಪ್ರದೇಶಗಳಲ್ಲಿ ಮಳೆ ದಾಖಲಾಗಿತ್ತು.
ವಿದರ್ಭ ಮತ್ತು ಛತ್ತೀಸ್‌ಗಢದ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಒಡಿಶಾದ ಉತ್ತರ ಭಾಗಗಳ ಜೊತೆಗೆ, ಪೂರ್ವ ಜಾರ್ಖಂಡ್, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿಯೂ ಸಹ ಬಲವಾದ ಗಾಳಿಯೊಂದಿಗೆ ಮಳೆಯಾಗಿದೆ.
ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಹವಾಮಾನ ಬದಲಾಗುತ್ತಿದೆ. ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್ ಮುಂತಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಬಲವಾದ ಗಾಳಿ ಬೀಸುತ್ತಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ಮಿಜೋರಾಂ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮತ್ತಷ್ಟು ಓದಿ: Karnataka Weather: ಮಾರ್ಚ್ 31ರಿಂದ ಎರಡು ದಿನಗಳ ಕಾಲ ಶಿವಮೊಗ್ಗ, ಮೈಸೂರು ಸೇರಿ ಹಲವೆಡೆ ಮಳೆಯ ಮುನ್ಸೂಚನೆ
ಕರ್ನಾಟಕದ ಹವಾಮಾನ ಹೇಗಿದೆ? ಕರ್ನಾಟಕದ ದಕ್ಷಿಣ ಕನ್ನಡ, ಬೀದರ್, ಧಾರವಾಡ, ವಿಜಯಪುರ, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಇಸಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ