India Weather: ಉತ್ತರ ಭಾರತದಲ್ಲಿ ಮುಂದಿನ 3 ದಿನ ಭಾರಿ ಮಳೆಯ ಮುನ್ಸೂಚನೆ

|

Updated on: Feb 19, 2024 | 7:41 AM

ದೆಹಲಿಯಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 29.7 ಡಿಗ್ರಿ ಸೆಲ್ಸಿಯಸ್​ನಷ್ಟಿದೆ. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಹಲವೆಡೆ ಹಿಮಪಾತವಾಗಲಿದೆ. ಇಂದು ದೆಹಲಿಯ ಸರಾಸರಿ AQI ಭಾನುವಾರ 269 ಆಗಿದೆ.

India Weather: ಉತ್ತರ ಭಾರತದಲ್ಲಿ ಮುಂದಿನ 3 ದಿನ ಭಾರಿ ಮಳೆಯ ಮುನ್ಸೂಚನೆ
ಹವಾಮಾನ
Image Credit source: Mint
Follow us on

ಉತ್ತರ ಭಾರತದ ಹಲವೆಡೆ ಹಿಮಪಾತದ ಜತೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ, ಎತ್ತರದ ಪ್ರದೇಶಗಳಲ್ಲಿ ಭಾರೀ ಹಿಮಪಾತ ಮತ್ತು ಬಯಲು ಸೀಮೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ಇದು ಮುಂದುವರೆಯುವ ಸಾಧ್ಯತೆಯಿದೆ. ಸೋಮವಾರದಿಂದ ಪಂಜಾಬ್, ಹರಿಯಾಣ, ದೆಹಲಿ ಸೇರಿದಂತೆ ಬಯಲುಸೀಮೆ ರಾಜ್ಯಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಹವಾಮಾನ ವೈಪರೀತ್ಯದಿಂದ ಕನಿಷ್ಠ ತಾಪಮಾನವೂ ಕುಸಿದಿದೆ.

ಫೆಬ್ರವರಿ 21 ರವರೆಗೆ ಜಮ್ಮು-ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಹವಾಮಾನವು ಕೆಟ್ಟದಾಗಿರುತ್ತದೆ. ಸೋಮವಾರ ಈ ಪ್ರದೇಶಗಳಲ್ಲಿ ಭಾರೀ ಮಳೆ, ಹಿಮಪಾತ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯನ್ನು ಸೂಚಿಸಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉತ್ತರಾಖಂಡದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ…ಫೆಬ್ರವರಿ 19 ಮತ್ತು 20 ರಂದು ಉತ್ತರಾಖಂಡದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಮತ್ತು ಬಲವಾದ ಗಾಳಿ, ಎತ್ತರದ ಪ್ರದೇಶಗಳಲ್ಲಿ ಹಿಮ ಬೀಳುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ವಾಯುವ್ಯ ಮತ್ತು ಈಶಾನ್ಯ ರಾಜಸ್ಥಾನ ಮತ್ತು ವಾಯವ್ಯ ಮಧ್ಯಪ್ರದೇಶದಲ್ಲಿ ಕೆಲವೆಡೆ ಲಘು ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.

ಫೆಬ್ರವರಿ 19 ಮತ್ತು 20 ರಂದು ಪಂಜಾಬ್‌ನ ಕೆಲವು ಸ್ಥಳಗಳಲ್ಲಿ ಮತ್ತು ಹರಿಯಾಣದ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಬಹುದು. ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಬಹುದು. ಇದೇ ವೇಳೆ ಕೆಲವೆಡೆ ಗಂಟೆಗೆ 45-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: India Weather: ಉತ್ತರ ಪ್ರದೇಶ, ಮಹಾರಾಷ್ಟ್ರದಲ್ಲಿ ಮಳೆ, ಕರ್ನಾಟಕದ ಹಲವೆಡೆ ಮೋಡಕವಿದ ವಾತಾವರಣ

ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಮುಚ್ಚಲಾಗಿದೆ. ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ರಸ್ತೆಯಿಂದ ಹಿಮವನ್ನು ತೆಗೆದುಹಾಕುವಲ್ಲಿ ನಿರತವಾಗಿದೆ. ಸಂಸ್ಥೆಯು ಇತ್ತೀಚಿನ ಹಿಮಪಾತದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ. ಪಶ್ಚಿಮದ ಅಡಚಣೆಯ ಚಟುವಟಿಕೆಯಿಂದಾಗಿ, ಕುಲು ಮತ್ತು ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿಯ ಎತ್ತರದ ಶಿಖರಗಳಲ್ಲಿ ಹಿಮಪಾತವು ಸೋಮವಾರವೂ ಮುಂದುವರೆದಿದೆ.

ಕರ್ನಾಟಕದ ವಾತಾವರಣ ಹೇಗಿದೆ?
ವಿಜಯಪುರದಲ್ಲಿ 15.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಸ್ವಲ್ಪ ಹೊತ್ತು ಮೋಡಕವಿದ ವಾತಾವರಣವಿರಲಿದ್ದು, ಕ್ರಮೇಣ ಶುಭ್ರ ಆಕಾಶವಿರಲಿದೆ. ಎಚ್​ಎಎಲ್​ನಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 31.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.4 1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published On - 7:40 am, Mon, 19 February 24