India Rain: ದೆಹಲಿ, ಉತ್ತರ ಪ್ರದೇಶದಲ್ಲಿ ಸುರಿಯುತ್ತಿದೆ ಮಳೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ
ದೇಶದ ಮೂರಕ್ಕೂ ಅಧಿಕ ರಾಜ್ಯಗಳಲ್ಲಿ ಮಳೆ, ಹಿಮಪಾತವಾಗುತ್ತಿದೆ, ಹಿಮಾಚಲಪ್ರದೇಶ, ಉತ್ತರ ಪ್ರದೇಶ, ದೆಹಲಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಗರಿಷ್ಠ ತಾಪಮಾನವೂ ಕೊಂಚ ಹೆಚ್ಚಾಗಿದೆ.
ದೆಹಲಿ, ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ, ಉತ್ತರ ಪ್ರದೇಶದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಹಮೀರ್‌ಪುರ, ಬಂದಾ ಮತ್ತು ಜಲೌನ್‌ನಲ್ಲಿ ಭಾರೀ ಮಳೆಯೊಂದಿಗೆ ಆಲಿಕಲ್ಲು ಕೂಡ ಬಿದ್ದಿದೆ. ಒರೈ ಸೇರಿದಂತೆ ಹಲವೆಡೆ ಮಂಗಳವಾರ ಸಂಜೆ 4 ಗಂಟೆ ವೇಳೆಗೆ ದಿಢೀರ್ ಗುಡುಗು ಸಹಿತ ಮಳೆ ಸುರಿದಿದ್ದು, ಅರ್ಧ ಗಂಟೆ ಧಾರಾಕಾರ ಮಳೆyAgide.
ಜಿಲ್ಲೆಯಲ್ಲಿ ಅವರೆಕಾಯಿಯನ್ನು ಅತಿ ಹೆಚ್ಚು ಬೆಳೆಯಲಾಗುತ್ತದೆ. 1.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅವರೆಕಾಳು ಉತ್ಪಾದನೆಯಾಗುತ್ತದೆ. ಇದರಲ್ಲಿ ಶೇ.60ರಷ್ಟು ಅವರೆಕಾಯಿ ತೆಗೆದು ರೈತರು ಗೋಧಿ ಬಿತ್ತನೆ ಮಾಡಿದ್ದಾರೆ. ಈ ಮಳೆ ಮತ್ತು ಆಲಿಕಲ್ಲು ಇತ್ತೀಚೆಗೆ ಬಿತ್ತನೆ ಮಾಡಿದ ಗೋಧಿ ಬೆಳೆಗೆ ನಷ್ಟವಾಗುವುದಿಲ್ಲ. ಆದರೆ, ಆಲಿಕಲ್ಲು ಮಳೆಗೆ ಇನ್ನೂ ಶೇ.40 ರಷ್ಟು ಅವರೆಕಾಯಿ ಬೆಳೆ ಹಾನಿಯಾಗಿದೆ ಎನ್ನಲಾಗಿದೆ.
ದೆಹಲಿಯ ಹಲವು ಭಾಗಗಳಲ್ಲಿ ಮಂಗಳವಾರ ತಡರಾತ್ರಿ ಲಘು ಮಳೆಯಾಗಿದೆ. ಮಂಡಿ ಹೌಸ್, ಆರ್‌ಕೆ ಪುರಂ, ನಿಜಾಮುದ್ದೀನ್ ಮೇಲ್ಸೇತುವೆ ಬಳಿಯ ಇಂದ್ರಪ್ರಸ್ಥ ರಸ್ತೆ ಸೇರಿದಂತೆ ಭೈರೋನ್ ಮಾರ್ ಕಡೆಗೆ, ಕರ್ತವ್ಯ ಪಥ್, ಇತ್ಯಾದಿ ಪ್ರದೇಶಗಳಲ್ಲಿ ಹೊಸ ತುಂತುರು ಮಳೆಯಾಗಿದೆ. ಚಂಬಾ, ಲಾಹುಲ್, ಮತ್ತು ಸ್ಪಿತಿ ಮತ್ತು ಕಿನ್ನೌರ್ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ, ಹಿಮ ಬೀಳುವ ಸಾಧ್ಯತೆಯಿದೆ. ಬಿಲಾಸ್ಪುರ್, ಸೋಲನ್, ಶಿಮ್ಲಾ, ಸಿರ್ಮೌರ್, ಮಂಡಿ ಮತ್ತು ಕುಲು ಜಿಲ್ಲೆಗಳು ಮತ್ತು ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುತ್ತದೆ.
ಮತ್ತಷ್ಟು ಓದಿ: India Weather: ದೆಹಲಿ, ಪಂಜಾಬ್, ಬಿಹಾರದಲ್ಲಿ ಮುಂದಿನ 2 ದಿನ ಸುರಿಯಲಿದೆ ಭಾರಿ ಮಳೆ, ಆರೆಂಜ್ ಅಲರ್ಟ್
ಸೋಮವಾರ ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ಮಳೆಯ ಪ್ರಮಾಣವು ಹಠಾತ್ ಕುಸಿತವನ್ನು ಕಂಡಿತು. ಶ್ರೀನಗರದಲ್ಲಿ ಸೋಮವಾರ 2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಗುಲ್ಮಾರ್ಗ್‌ನಲ್ಲಿ ಮೈನಸ್ 2.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಕರ್ನಾಟಕ ಹವಾಮಾನ ವರದಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಚಳಿ ಕಡಿಮೆಯಾಗಿ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿದೆ. ಮೈಸೂರಿನಲ್ಲಿ 13.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ