India Weather: ಮುಂದಿನ 24 ಗಂಟೆಗಳಲ್ಲಿ ಈ 8 ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ

|

Updated on: Mar 08, 2024 | 7:38 AM

ಎಂಟು ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್​, ಗಿಲ್ಗಿಟ್​, ಹಿಮಾಚಲ ಪ್ರದೇಶ, ಉತ್ತರಾಖಂಡ, ಅರುಣಾಚಲಪ್ರದೇಶದಲ್ಲಿ ಸಾಧಾರಣ ಮಳೆಯಾಗಲಿದೆ.

India Weather: ಮುಂದಿನ 24 ಗಂಟೆಗಳಲ್ಲಿ ಈ 8 ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ
ಮಳೆ
Follow us on

ಮುಂದಿನ 24 ಗಂಟೆಗಳಲ್ಲಿ 8 ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಚಂಡಮಾರುತದ ಪರಿಚಲನೆಯು ಪೂರ್ವ ಅಸ್ಸಾಂನಲ್ಲಿ ಕಡಿಮೆ ಉಷ್ಣವಲಯದ ಮಟ್ಟದಲ್ಲಿದೆ. ಇದು ಪೂರ್ವದ ಕಡೆಗೆ ಚಲಿಸುವ ಸಾಧ್ಯತೆಯಿದೆ. ಇದರಿಂದಾಗಿ ಮುಂದಿನ 24 ಗಂಟೆಗಳಲ್ಲಿ ಅರುಣಾಚಲ ಪ್ರದೇಶದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ. ದೆಹಲಿಯಲ್ಲಿ ಗುರುವಾರ 8.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇದು ಈ ಋತುವಿನ ಸರಾಸರಿ ತಾಪಮಾನಕ್ಕಿಂತ ಐದು ಡಿಗ್ರಿ ಸೆಲ್ಸಿಯಸ್​ ಕಡಿಮೆಯಾಗಿದೆ.
ಹಗಲಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್​ನಷ್ಟಿರುತ್ತದೆ.

ಕರ್ನಾಟಕ ಹವಾಮಾನ:
ಕಲಬುರ್ಗಿಯಲ್ಲಿ 38.8 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 15.7 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ಎಚ್​ಎಎಲ್​ನಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಉತ್ತರ, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಹೆಚ್ಚಲಿದೆ ಗರಿಷ್ಠ ತಾಪಮಾನ

ಗದಗದಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ದಾವಣಗೆರೆಯಲ್ಲಿ 35.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಂತಾಮಣಿಯಲ್ಲಿ 17.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 33.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:38 am, Fri, 8 March 24