AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Weather Updates: ದೆಹಲಿಯಲ್ಲಿ ಹಿತಕರ ವಾತಾವರಣ, ಕರ್ನಾಟಕದಲ್ಲಿ ಚಳಿ, ಹಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ

ಸದ್ಯ ದೆಹಲಿಯ ವಾತಾವರಣ ಹಿತಕರವಾಗಿದೆ. ಭಾನುವಾರವೂ ಭಾಗಶಃ ಮೋಡ ಕವಿದ ವಾತಾವರಣvide. ಗರಿಷ್ಠ ತಾಪಮಾನವು ಸುಮಾರು 31 ಡಿಗ್ರಿ ಮತ್ತು ಕನಿಷ್ಠ ತಾಪಮಾನವು 15 ಡಿಗ್ರಿಗಳಷ್ಟು ಇರಬಹುದು

India Weather Updates: ದೆಹಲಿಯಲ್ಲಿ ಹಿತಕರ ವಾತಾವರಣ, ಕರ್ನಾಟಕದಲ್ಲಿ ಚಳಿ, ಹಲವು ರಾಜ್ಯಗಳಲ್ಲಿ ಮಳೆ ಸಾಧ್ಯತೆ
ಮಳೆImage Credit source: Healthline
ನಯನಾ ರಾಜೀವ್
|

Updated on: Mar 05, 2023 | 7:40 AM

Share

ಸದ್ಯ ದೆಹಲಿಯ ವಾತಾವರಣ ಹಿತಕರವಾಗಿದೆ. ಭಾನುವಾರವೂ ಭಾಗಶಃ ಮೋಡ ಕವಿದ ವಾತಾವರಣvide. ಗರಿಷ್ಠ ತಾಪಮಾನವು ಸುಮಾರು 31 ಡಿಗ್ರಿ ಮತ್ತು ಕನಿಷ್ಠ ತಾಪಮಾನವು 15 ಡಿಗ್ರಿಗಳಷ್ಟು ಇರಬಹುದು. ದೆಹಲಿ-ಎನ್‌ಸಿಆರ್‌ನಲ್ಲಿ ಮೋಡ ಕವಿದ ವಾತಾವರಣವಿದ್ದರೂ ಮಳೆ ದೂರವಾಗಿದೆ. ಏತನ್ಮಧ್ಯೆ, ಹವಾಮಾನ ಇಲಾಖೆ (IMD) ಪಶ್ಚಿಮ ಮತ್ತು ಮಧ್ಯ ಭಾರತದಲ್ಲಿ ಮಳೆ ಮತ್ತು ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಿದೆ.

ಶನಿವಾರ ದಿನವಿಡೀ ಜೋರಾಗಿ ಬೀಸುತ್ತಿದ್ದ ಚಳಿಗಾಳಿ ಬಿಸಿಲಿನ ತಾಪಕ್ಕೆ ಮದ್ದು ನೀಡಿತು. ಅದೇ ಸಮಯದಲ್ಲಿ, ರಾಜಧಾನಿಯಲ್ಲಿ ಬೆಳಗ್ಗೆ ಮತ್ತು ಸಂಜೆ ಹವಾಮಾನವು ಆಹ್ಲಾದಕರವಾಗಿರುತ್ತದೆ. ಆದಾಗ್ಯೂ, ಗಾಳಿಯ ಹೊರತಾಗಿಯೂ, ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿತ್ತು. ಶನಿವಾರ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿತ್ತು. ಇದರಿಂದ ಜನರು ಬಿಸಿಲಿನ ತಾಪದಿಂದ ಕೊಂಚ ನೆಮ್ಮದಿಯನ್ನು ಅನುಭವಿಸಿದರು.

ಗಾಳಿಯಿಂದಾಗಿ, ಸುಮಾರು ಆರು ದಿನಗಳ ನಂತರ ತಾಪಮಾನವು 30 ಡಿಗ್ರಿಗಿಂತ ಕಡಿಮೆಯಾಗಿದೆ. ಮಾರ್ಚ್ 6 ರಂದು ತಾಪಮಾನದಲ್ಲಿ ಸ್ವಲ್ಪ ಇಳಿಕೆಯಾಗಲಿದೆ. ಈ ದಿನದ ಗರಿಷ್ಠ ತಾಪಮಾನವು ಸುಮಾರು 30 ಡಿಗ್ರಿ ಮತ್ತು ಕನಿಷ್ಠ ತಾಪಮಾನವು ಸುಮಾರು 16 ಡಿಗ್ರಿ ಆಗಿರಬಹುದು. ಮತ್ತೊಂದೆಡೆ, ಮಾರ್ಚ್ 7 ರಿಂದ 10 ರವರೆಗೆ ಗರಿಷ್ಠ ತಾಪಮಾನವು 32 ರಿಂದ 33 ಡಿಗ್ರಿ ಮತ್ತು ಕನಿಷ್ಠ ತಾಪಮಾನವು 15 ಡಿಗ್ರಿಗಳಷ್ಟು ಇರಬಹುದು.

ಹೋಳಿ ಹಬ್ಬಕ್ಕೂ  ಮುನ್ನ IMD ಮುನ್ಸೂಚನೆ ಭಾರತೀಯ ಹವಾಮಾನ ಇಲಾಖೆ (IMD) ಹೋಳಿಗೆ ಮುನ್ನ ರಾಜಸ್ಥಾನ ಸೇರಿದಂತೆ ಪಶ್ಚಿಮ ಮತ್ತು ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆ ಮತ್ತು ಆಲಿಕಲ್ಲು ಮಳೆಯ ಮುನ್ಸೂಚನೆ ನೀಡಿದೆ.

ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಭಾನುವಾರ ಅಲ್ಲಲ್ಲಿ ಮಳೆ ಅಥವಾ ಹಿಮಪಾತವಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆಯಲ್ಲಿ ತಿಳಿಸಿದೆ. ಮಾರ್ಚ್ 4-8 ರವರೆಗೆ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು.

ಮತ್ತಷ್ಟು ಓದಿ: India Weather Updates: ಈ 4 ರಾಜ್ಯಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಹವಾಮಾನ ಇಲಾಖೆ ಪ್ರಕಾರ, ಪಶ್ಚಿಮ ರಾಜಸ್ಥಾನದಲ್ಲಿ ಭಾನುವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 8 ರವರೆಗೆ ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಗುಜರಾತ್, ಮರಾಠವಾಡ ಮತ್ತು ಮಧ್ಯ ಮಹಾರಾಷ್ಟ್ರದಲ್ಲಿ ಇದೇ ರೀತಿಯ ಹವಾಮಾನದ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಸ್ವಲ್ಪ ಚಳಿ ಮುಂದುವರೆಯಲಿದೆ, ಕಾರವಾರದಲ್ಲಿ 38.1 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಚಾಮರಾಜನಗರಜಿಲ್ಲೆಯಲ್ಲಿ 9.4 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ