India Weather Updates: ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯದಲ್ಲಿ ಮಳೆ, ಹಲವು ರಾಜ್ಯಗಳಲ್ಲಿ ಚಂಡಮಾರುತದ ಎಚ್ಚರಿಕೆ
ದೆಹಲಿ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚುತ್ತಿದೆ. ಈ ವಾರದ ಆರಂಭದಿಂದ ದೆಹಲಿಯಲ್ಲಿ ತಾಪಮಾನದಲ್ಲಿ ಏರಿಕೆಯಾಗುತ್ತಿದೆ.
ದೆಹಲಿ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಗರಿಷ್ಠ ಉಷ್ಣಾಂಶ ಹೆಚ್ಚುತ್ತಿದೆ. ಈ ವಾರದ ಆರಂಭದಿಂದ ದೆಹಲಿಯಲ್ಲಿ ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಆದರೆ ಮುಂಜಾನೆ ಆಕಾಶದಲ್ಲಿ ಮಂಜು ಆವರಿಸುತ್ತಿದೆ. ಹವಾಮಾನ ಇಲಾಖೆಯ ಪ್ರಕಾರ, ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದಲ್ಲಿ ಮುಂದಿನ ಐದು ದಿನಗಳವರೆಗೆ ಗರಿಷ್ಠ ತಾಪಮಾನವು ಮೂರರಿಂದ ಐದು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಮುಂದಿನ ಮೂರು ದಿನಗಳ ಕಾಲ ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಾಗುವ ಸಾಧ್ಯತೆ ಇಲ್ಲ. ಅದರ ನಂತರ ತಾಪಮಾನದಲ್ಲಿ ಎರಡು ಡಿಗ್ರಿ ಸೆಲ್ಸಿಯಸ್ ಹೆಚ್ಚಳ ದಾಖಲಾಗುತ್ತದೆ. ದೇಶದ ಉಳಿದ ಭಾಗಗಳಲ್ಲಿ ಮುಂದಿನ 5 ದಿನಗಳವರೆಗೆ ಗರಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಕಂಡುಬರುವುದಿಲ್ಲ. ಮುಂದಿನ ಕೆಲವು ದಿನಗಳವರೆಗೆ ಸರಾಸರಿ ತಾಪಮಾನವು ಮೂರರಿಂದ ಐದು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮತ್ತಷ್ಟು ಓದಿ: Heat Wave: ವಿವಿಧ ರಾಜ್ಯಗಳಲ್ಲಿ ಶಾಖದ ಅಲೆಯ ಎಚ್ಚರಿಕೆ, ಗರಿಷ್ಠ ಉಷ್ಣಾಂಶ 3-5 ಡಿಗ್ರಿಗಳಷ್ಟು ಹೆಚ್ಚಳ ಸಾಧ್ಯತೆ
ಫೆಬ್ರವರಿ 25 ಮತ್ತು 26 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ, ಫೆಬ್ರವರಿ 26 ರಂದು ಹಿಮಾಚಲ ಪ್ರದೇಶದಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಚಂಡಮಾರುತದ ಎಚ್ಚರಿಕೆಯನ್ನೂ ನೀಡಲಾಗಿದೆ. ಸ್ಕೈಮೆಟ್ ಹವಾಮಾನ ವರದಿಯ ಪ್ರಕಾರ, ಇಂದು ಪಂಜಾಬ್, ಹರಿಯಾಣ, ದೆಹಲಿ ಮತ್ತು ರಾಜಸ್ಥಾನದ ಕೆಲವು ಭಾಗಗಳಲ್ಲಿ ದಟ್ಟವಾದ ಮಂಜು ಉಂಟಾಗಬಹುದು.
ದೇಶದ ವಾಯುವ್ಯ ಮತ್ತು ಮಧ್ಯ ಭಾಗಗಳಲ್ಲಿ ಹಗಲು ಮತ್ತು ರಾತ್ರಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚು ಇರುತ್ತದೆ. ಮತ್ತೊಂದೆಡೆ, ಅರುಣಾಚಲ ಪ್ರದೇಶದಲ್ಲಿ ಸಾಧಾರಣದಿಂದ ಭಾರೀ ಮಳೆ ಮತ್ತು ಹಿಮಪಾತದ ಸಾಧ್ಯತೆ ಇದೆ.
ಸಿಕ್ಕಿಂನಲ್ಲಿ ಲಘು ಮಳೆ ಮತ್ತು ಹಿಮಪಾತವಾಗಬಹುದು. ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಅರುಣಾಚಲ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಹಿಮವಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಮಳೆ ಮತ್ತು ಹಿಮಪಾತ ಸಂಭವಿಸಲಿದೆ. ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ