India Weather Updates: ಜಮ್ಮು-ಕಾಶ್ಮೀರದಲ್ಲಿ ಮಳೆ ಸಾಧ್ಯತೆ, ಕರ್ನಾಟಕ, ದೆಹಲಿ, ಪಶ್ಚಿಮ ಬಂಗಾಳದಲ್ಲಿ ವಿಪರೀತ ಚಳಿ
ದೇಶದ ಬಹುತೇಕ ರಾಜ್ಯಗಳಲ್ಲಿ ಮತ್ತೆ ಚಳಿ ಶುರುವಾಗಿದೆ. ದೆಹಲಿ, ಪಶ್ಚಿಮ ಬಂಗಾಳ, ಕರ್ನಾಟಕದಲ್ಲಿ ವಿಪರೀತ ಚಳಿ ಇದೆ. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆ ಹಾಗೂ ಹಿಮಪಾತವಾಗುವ ಸಾಧ್ಯತೆ ಇದೆ.
ದೇಶದ ಬಹುತೇಕ ರಾಜ್ಯಗಳಲ್ಲಿ ಮತ್ತೆ ಚಳಿ ಶುರುವಾಗಿದೆ. ದೆಹಲಿ, ಪಶ್ಚಿಮ ಬಂಗಾಳ, ಕರ್ನಾಟಕದಲ್ಲಿ ವಿಪರೀತ ಚಳಿ ಇದೆ. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಮಳೆ ಹಾಗೂ ಹಿಮಪಾತವಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮುಂದಿನ ಕೆಲವು ದಿನಗಳಲ್ಲಿ ಲಡಾಖ್, ಜಮ್ಮು ಮತ್ತು ಕಾಶ್ಮೀರ, ಅರುಣಾಚಲಪ್ರದೇಶದ ಕೆಲವು ಭಾಗಗಳಲ್ಲಿ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆ ಇದೆ.
ಬಯಲು ಪ್ರದೇಶಗಳಲ್ಲಿ ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಫೆ.18ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾಗಶಃ ಮೋಡ ಹಾಗೂ ಶುಷ್ಕ ವಾತಾವರಣವನ್ನು ನಿರೀಕ್ಷಿಸಲಾಗಿದೆ. ದೆಹಲಿಯಲ್ಲಿ ಬಿಸಿಲಿನ ತಾಪ ತುಸು ಹೆಚ್ಚಿದೆ, ಕನಿಷ್ಠ ತಾಪಮಾನ ಮೂರು ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ದೆಹಲಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ಇದೆ. ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಆಕಾಶ ಶುಭ್ರವಾಗಿರಲಿದೆ, ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ.
ಎಚ್ಎಎಲ್ನಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ