AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Weather Updates: ದೆಹಲಿಯಲ್ಲಿ ಏಕಾ ಏಕಿ ಬದಲಾದ ಹವಾಮಾನ, ಹಲವು ಕಡೆ ಮಳೆ, ವಿವಿಧ ರಾಜ್ಯಗಳ ಹವಾಮಾನ ಹೇಗಿದೆ? ಇಲ್ಲಿದೆ ಮಾಹಿತಿ

ಹೋಳಿಹಬ್ಬದಂದು ದೆಹಲಿಯಲ್ಲಿ ವರುಣನ ಆಗಮನವಾಗಿದೆ. ಏಕಾಏಕಿ ಮೋಡಕವಿದು, ಧೋ ಎಂದು ಮಳೆ ಸುರಿದಿದೆ. ಬುಧವಾರ ಸಂಜೆ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಸುರಿಯಿತು.

India Weather Updates: ದೆಹಲಿಯಲ್ಲಿ ಏಕಾ ಏಕಿ ಬದಲಾದ ಹವಾಮಾನ, ಹಲವು ಕಡೆ ಮಳೆ, ವಿವಿಧ ರಾಜ್ಯಗಳ ಹವಾಮಾನ ಹೇಗಿದೆ? ಇಲ್ಲಿದೆ ಮಾಹಿತಿ
ಮಳೆImage Credit source: CNBCTV18.COM
ನಯನಾ ರಾಜೀವ್
|

Updated on: Mar 09, 2023 | 7:59 AM

Share

ಹೋಳಿಹಬ್ಬದಂದು ದೆಹಲಿಯಲ್ಲಿ ವರುಣನ ಆಗಮನವಾಗಿದೆ. ಏಕಾಏಕಿ ಮೋಡಕವಿದು, ಧೋ ಎಂದು ಮಳೆ ಸುರಿದಿದೆ. ಬುಧವಾರ ಸಂಜೆ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಸುರಿಯಿತು. ಹೋಳಿ ಸಮಯದಲ್ಲಿ ಗುರುಗ್ರಾಮ, ಫರಿದಾಬಾದ್, ನೋಯ್ಡಾ ಮತ್ತು ದಕ್ಷಿಣ ದೆಹಲಿಯ ಪಕ್ಕದ ಪ್ರದೇಶಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಅತಿ ಕಡಿಮೆ ಮಳೆಯಾಗಿದೆ ಎಂದು ವರದಿಯಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಎನ್​ಸಿಆರ್ ಮತ್ತು ದಕ್ಷಿಣ ದೆಹಲಿಯ ಪಕ್ಕದ ಪ್ರದೇಶಗಳಲ್ಲಿ ಬುಧವಾರ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ 2 ಗಂಟೆಗಳಲ್ಲಿ ವಾಯುವ್ಯ ದೆಹಲಿ, ನೈಋತ್ಯ ದೆಹಲಿ ಮತ್ತು ದೆಹಲಿ-ಎನ್‌ಸಿಆರ್‌ನ ಪಕ್ಕದ ಪ್ರದೇಶಗಳ ಪ್ರತ್ಯೇಕ ಸ್ಥಳಗಳ ಪಕ್ಕದ ಪ್ರದೇಶಗಳಲ್ಲಿ ಗುಡುಗು ಸಹಿತ ಲಘುವಾಗಿ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

ಏತನ್ಮಧ್ಯೆ, ಹಿಮಾಚಲ ಪ್ರದೇಶ, ಉತ್ತರಾಖಂಡ, ದಕ್ಷಿಣ ಹರಿಯಾಣ, ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುರುವಾರ ಗುಡುಗು ಸಹಿತ ಲಘು ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.

ಮತ್ತಷ್ಟು ಓದಿ: India Weather Updates: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಸಾಧ್ಯತೆ, ಬಹುತೇಕ ರಾಜ್ಯಗಳಲ್ಲಿ ಬಿಸಿಲ ಝಳ ಮುಂದುವರಿಕೆ

ಮಾರ್ಚ್ 9 ರಿಂದ 12 ರ ಅವಧಿಯಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಪ್ರತ್ಯೇಕವಾದ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ಹೇಳಿದೆ. ಇನ್ನು ಕರ್ನಾಟಕದಲ್ಲಿ ಒಣಹವೆ ಮುಂದುವರೆದಿದೆ, ಬಾಗಲಕೋಟೆಯಲ್ಲಿ 12.0 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ