ಹೋಳಿಹಬ್ಬದಂದು ದೆಹಲಿಯಲ್ಲಿ ವರುಣನ ಆಗಮನವಾಗಿದೆ. ಏಕಾಏಕಿ ಮೋಡಕವಿದು, ಧೋ ಎಂದು ಮಳೆ ಸುರಿದಿದೆ. ಬುಧವಾರ ಸಂಜೆ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಸುರಿಯಿತು. ಹೋಳಿ ಸಮಯದಲ್ಲಿ ಗುರುಗ್ರಾಮ, ಫರಿದಾಬಾದ್, ನೋಯ್ಡಾ ಮತ್ತು ದಕ್ಷಿಣ ದೆಹಲಿಯ ಪಕ್ಕದ ಪ್ರದೇಶಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಅತಿ ಕಡಿಮೆ ಮಳೆಯಾಗಿದೆ ಎಂದು ವರದಿಯಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ಎನ್ಸಿಆರ್ ಮತ್ತು ದಕ್ಷಿಣ ದೆಹಲಿಯ ಪಕ್ಕದ ಪ್ರದೇಶಗಳಲ್ಲಿ ಬುಧವಾರ ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ 2 ಗಂಟೆಗಳಲ್ಲಿ ವಾಯುವ್ಯ ದೆಹಲಿ, ನೈಋತ್ಯ ದೆಹಲಿ ಮತ್ತು ದೆಹಲಿ-ಎನ್‌ಸಿಆರ್‌ನ ಪಕ್ಕದ ಪ್ರದೇಶಗಳ ಪ್ರತ್ಯೇಕ ಸ್ಥಳಗಳ ಪಕ್ಕದ ಪ್ರದೇಶಗಳಲ್ಲಿ ಗುಡುಗು ಸಹಿತ ಲಘುವಾಗಿ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.
ಏತನ್ಮಧ್ಯೆ, ಹಿಮಾಚಲ ಪ್ರದೇಶ, ಉತ್ತರಾಖಂಡ, ದಕ್ಷಿಣ ಹರಿಯಾಣ, ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುರುವಾರ ಗುಡುಗು ಸಹಿತ ಲಘು ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ.
ಮತ್ತಷ್ಟು ಓದಿ: India Weather Updates: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆ ಸಾಧ್ಯತೆ, ಬಹುತೇಕ ರಾಜ್ಯಗಳಲ್ಲಿ ಬಿಸಿಲ ಝಳ ಮುಂದುವರಿಕೆ
ಮಾರ್ಚ್ 9 ರಿಂದ 12 ರ ಅವಧಿಯಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಪ್ರತ್ಯೇಕವಾದ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಅದು ಹೇಳಿದೆ. ಇನ್ನು ಕರ್ನಾಟಕದಲ್ಲಿ ಒಣಹವೆ ಮುಂದುವರೆದಿದೆ, ಬಾಗಲಕೋಟೆಯಲ್ಲಿ 12.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ