India Weather Updates: ಉತ್ತರಪ್ರದೇಶದಲ್ಲಿ ಮಂಜು, ಪಂಜಾಬ್​ನಲ್ಲಿ ಮಳೆ ಸಾಧ್ಯತೆ, ಉತ್ತರ ಭಾರತದಲ್ಲಿ ತಾಪಮಾನ ಮತ್ತೆ ಕುಸಿಯುವ ನಿರೀಕ್ಷೆ

ದೆಹಲಿ ಸೇರಿದಂತೆ ಉತ್ತರ ಭಾರತದ ಬಹುತೇಕ ಪ್ರದೇಶಗಳಲ್ಲಿ ತಾಪಮಾನ ಸುಧಾರಿಸುತ್ತಿದೆ. ಏತನ್ಮಧ್ಯೆ ಹವಾಮಾನ ಇಲಾಖೆಯು ಚಳಿಗಾಲ ಇನ್ನೂ ಹೋಗಿಲ್ಲ ಎನ್ನುವ ಎಚ್ಚರಿಕೆ ನೀಡುತ್ತಿದೆ.

India Weather Updates: ಉತ್ತರಪ್ರದೇಶದಲ್ಲಿ ಮಂಜು, ಪಂಜಾಬ್​ನಲ್ಲಿ ಮಳೆ ಸಾಧ್ಯತೆ, ಉತ್ತರ ಭಾರತದಲ್ಲಿ ತಾಪಮಾನ ಮತ್ತೆ ಕುಸಿಯುವ ನಿರೀಕ್ಷೆ
ಮಳೆ
Follow us
ನಯನಾ ರಾಜೀವ್
|

Updated on: Feb 07, 2023 | 7:41 AM

ದೆಹಲಿ ಸೇರಿದಂತೆ ಉತ್ತರ ಭಾರತದ ಬಹುತೇಕ ಪ್ರದೇಶಗಳಲ್ಲಿ ತಾಪಮಾನ ಸುಧಾರಿಸುತ್ತಿದೆ. ಏತನ್ಮಧ್ಯೆ ಹವಾಮಾನ ಇಲಾಖೆಯು ಚಳಿಗಾಲ ಇನ್ನೂ ಹೋಗಿಲ್ಲ ಎನ್ನುವ ಎಚ್ಚರಿಕೆ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಗುಡ್ಡಗಾಡು ಪ್ರದೇಶಗಳಲ್ಲಿ ಮಳೆ ಹಾಗೂ ಹಿಮಪಾತದಿಂದಾಗಿ ತಾಪಮಾನ ಕುಸಿಯಬಹುದು ಎಂದು ಹೇಳಿದೆ. ಹವಾಮಾನ ಇಲಾಖೆಯ ಪ್ರಕಾರ, ಪ್ರಸ್ತುತ ಉತ್ತರ ಹಾಗೂ ಮಧ್ಯ ಭಾರತದಲ್ಲಿ ಕನಿಷ್ಠ ತಾಪಮಾನವು 8-10 ಡಿಗ್ರಿಗಳ ನಡುವೆ ಇರಲಿದೆ.

ಜಮ್ಮು -ಕಾಶ್ಮೀರ, ಲಡಾಖ್ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಹಿಮಪಾತವಾಗಬಹುದು. ಹಿಮಾಚಲಪ್ರದೇಶ, ಅರುಣಾಚಲಪ್ರದೇಶ, ಪಂಜಾಬ್, ಚಂಡೀಗಢದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಮುಂದಿನ 48 ಗಂಟೆಗಳಲ್ಲಿ ಉತ್ತರ ಭಾರತದ ತಾಪಮಾನದಲ್ಲಿ 2-3 ಡಿಗ್ರಿಗಳಷ್ಟು ಇಳಿಕೆಯಾಗಬಹುದು, ಆದರೆ ಮುಂದಿನ ಮೂರು ದಿನಗಳವರೆಗೆ ಮಧ್ಯ ಭಾರತದ ತಾಪಮಾನದಲ್ಲಿ ಯಾವುದೇ ಬದಲಾವಣೆಗಳು ಇಲ್ಲ. ಮಧ್ಯಪ್ರದೇಶದ ಮಲಜ್​ಖಂಡ್​ನಲ್ಲಿ ಕಳೆದ 24 ಗಂಟೆಗಳಲ್ಲಿ ಕನಿಷ್ಠ ತಾಪಮಾನ 7.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಉತ್ತರ ಪ್ರದೇಶ, ಸಿಕ್ಕಿಂ, ಅಸ್ಸಾಂ, ತ್ರಿಪುರದಲ್ಲಿ ಮಂಜುಕವಿದ ವಾತಾವರಣವಿರಲಿದ್ದು, ಪಂಜಾಬ್​ನಲ್ಲಿ ಮಳೆಯಾಗಬಹುದು ಎಂದು ಹೇಳಲಾಗಿದೆ. ಒಟ್ಟಾರೆ ತಾಪಮಾನದಲ್ಲಿ ತುಂಬಾ ಇಳಿಕೆಯಾಗಲಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶ ಇರಲಿದ್ದು, 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರ್ನಾಟಕದಾದ್ಯಂತ ಒಣಹವೆ ಮುಂದುವರೆಯಲಿದೆ. ಬೀದರ್​ನಲ್ಲಿ 11.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್