ಹಿಮಾಚಲಪ್ರದೇಶ, ಉತ್ತರಾಖಂಡ, ಪಂಜಾಬ್, ಹರ್ಯಾಣ, ಚಂಡೀಗಢ, ಉತ್ತರ ಪ್ರದೇಶದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪಂಜಾಬ್, ಹರ್ಯಾಣ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಬಾಲ್ಟಿಸ್ತಾನ, ಮುಜಾಫರಾಬಾದ್, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ತ್ರಿಪುರಾ, ಗುಜರಾತ್ ಆಂಧ್ರಪ್ರದೇಶದಲ್ಲಿ ಸಣ್ಣ ಪ್ರಮಾಣದಲ್ಲಿ ಮಲೆಯಾಗಲಿದ್ದು ಗಾಳಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ.
ಮಧ್ಯಪ್ರದೇಶ, ವಿದರ್ಭಾ, ಛತ್ತೀಸ್ಗಢದಲ್ಲಿ ಮಾರ್ಚ್ 24 ರಿಂದ 16ರ ಸಮಯದಲ್ಲಿ ಮಳೆಯಾಗಲಿದೆ.
ತೆಲಂಗಾಣ, ಕೇರಳದಲ್ಲಿ ಒಣಹವೆ ಮುಂದುವರೆಯಲಿದೆ. ಮಾರ್ಚ್ 25 ರಂದು ಮಧ್ಯಪ್ರದೇಶ, ವಿದರ್ಭ, ಛತ್ತೀಸ್ಗಢದಲ್ಲಿ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಲಿದೆ.
ಮಾರ್ಚ್ 23-24 ರಂದು ಮಧ್ಯ ಮತ್ತು ಪಶ್ಚಿಮ ಭಾರತದಲ್ಲಿ ಗರಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ.
ಮತ್ತಷ್ಟು ಓದಿ: Immunity Food: ಬದಲಾಗುತ್ತಿರುವ ಋತುವಿನಲ್ಲಿ ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸಲು 7 ಆಹಾರಗಳು
ಕರ್ನಾಟಕದಲ್ಲಿ ತಾಪಮಾನ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಮೈಸೂರಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 14.2 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ